Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನು ತನ್ನ ಅರಮನೆಯಲ್ಲಿ ಸುಖವಾಗಿ ವಾಸಿಸುವಂತೆಯೂ ಅವನ ಸುತ್ತಲಿನ ಶತ್ರುಗಳಿಂದ ಭಯವಿಲ್ಲದಂತೆಯೂ ಯೆಹೋವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಅರಸನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅರಸನು ವಿಶ್ರಾಂತಿಯಿಂದ ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:1
19 ತಿಳಿವುಗಳ ಹೋಲಿಕೆ  

ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.


ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ನನಗೆ ದೂರವಾಗಿದೆ.


ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಆ ವರುಷಗಳಲ್ಲಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.


ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.


ಯೆಹೋವನು ಸುತ್ತಣ ವಿರೋಧಿಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹುದಿನಗಳು ಗತಿಸಿದ ಮೇಲೆ


ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಯಲ್ಲಿಯೂ ಸಮಾಧಾನಕೊಟ್ಟನು. ವೈರಿಗಳಲ್ಲಿ ಒಬ್ಬನೂ ಅವರ ಮುಂದೆ ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.


ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.


ಸೌಲನ ಮಗಳಾದ ಮೀಕಲಳಿಗೆ ಜೀವದಿಂದಿರುವವರೆಗೂ ಮಕ್ಕಳೇ ಆಗಲಿಲ್ಲ.


ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನೇವಿುಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವದಿಲ್ಲ. ನೀನು ಶತ್ರು ಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತುಕೊಡುತ್ತೇನೆ.


ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ ದೇವದಾರುಮರಗಳನ್ನೂ ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ಇವನಿಗೋಸ್ಕರ ಅರಮನೆಯನ್ನು ಕಟ್ಟಿದರು.


ಆಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿ -


ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದ್ದೆನು.


ಅವರು ಕೂಡಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನಂದರೆ - ನನ್ನ ಸಹೋದರರೇ, ಪ್ರಜೆಗಳೇ, ಕೇಳಿರಿ. ಯೆಹೋವನ ನಿಬಂಧನಮಂಜೂಷಕ್ಕೋಸ್ಕರವೂ ನಮ್ಮ ದೇವರ ಪಾದಪೀಠಕ್ಕೋಸ್ಕರವೂ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ಹೀಗೆ ದೇವಾನುಗ್ರಹದಿಂದ ಸುತ್ತಣ ವೈರಿಗಳ ಭಯತಪ್ಪಿ ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನವುಂಟಾಯಿತು.


ಅವನು ಯಾಕೋಬ್ಯರ ಶೂರನಾದ ಯೆಹೋವನಿಗೆ ಪ್ರಮಾಣದಿಂದ ಹರಕೆಮಾಡಿಕೊಂಡನಲ್ಲಾ.


ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು