Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:10 - ಕನ್ನಡ ಸತ್ಯವೇದವು J.V. (BSI)

10 ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10-11 ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡು ಅವರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವಂತ ಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆ ಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ. ನಿನಗೆ ಶತ್ರು ಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:10
25 ತಿಳಿವುಗಳ ಹೋಲಿಕೆ  

ನಾನು ಅವರನ್ನು ಸ್ವದೇಶದಲ್ಲಿ ನೆಲೆಗೊಳಿಸುವೆನು; ಅವರಿಗೆ ನಾನು ದಯಪಾಲಿಸಿದ ಸೀಮೆಯೊಳಗಿಂದ ಇನ್ನು ಮುಂದೆ ಯಾರೂ ಅವರನ್ನೂ ಕಿತ್ತುಹಾಕರು; ಇದು ನಿನ್ನ ದೇವರಾದ ಯೆಹೋವನ ನುಡಿ.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು; ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು.


ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರಿಗಿ ಬರಮಾಡುವೆನು; ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವದಿಲ್ಲ.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನಾಗದು; ನಾನೇ ಕರ್ತನಾದ ಯೆಹೋವನು ಎಂದು ಅವರಿಗೆ ವ್ಯಕ್ತವಾಗುವದು.


ನೀನು ಐಗುಪ್ತದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು ಜನಾಂಗಗಳನ್ನು ಹೊರಗೆ ಹಾಕಿ ಅದನ್ನು ನೆಟ್ಟಿ.


ನಾನು ಒಂದು ವೇಳೆ ಒಂದು ಜನಾಂಗವನ್ನಾಗಲಿ ರಾಜ್ಯವನ್ನಾಗಲಿ ನೆಟ್ಟು ಕಟ್ಟಬೇಕೆಂದು ಅಪ್ಪಣೆಕೊಟ್ಟಾಗ


ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ನೆಲದ ಕ್ರಿವಿುಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲುಕತ್ತಿಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.


ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಸ್ಥಾಪಿಸುವಿ. ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಏರ್ಪಡಿಸಿಕೊಂಡಿರುವ ಸ್ಥಾನವಾಗಿಯೂ ಕರ್ತನೇ, ನೀನು ಸಿದ್ಧಪಡಿಸಿಕೊಂಡಿರುವ ಪವಿತ್ರಾಲಯವಾಗಿಯೂ ಇರುವಲ್ಲಿಗೆ ಅವರನ್ನು ಬರಮಾಡುವಿ.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ಅವನು ಅದನ್ನು ಅಗತೆಮಾಡಿ ಕಲ್ಲುಗಳನ್ನು ತೆಗೆದುಹಾಕಿ ಒಳ್ಳೊಳ್ಳೇ ದ್ರಾಕ್ಷೆಯ ಸಸಿಗಳನ್ನು ನೆಟ್ಟು ಮಧ್ಯದಲ್ಲಿ ಬುರುಜನ್ನು ಕಟ್ಟಿ ದ್ರಾಕ್ಷೆಯ ತೊಟ್ಟಿಯನ್ನು ಕೊರೆಯಿಸಿ ಮಾಡಿಕೊಂಡು ತೋಟವು [ಒಳ್ಳೇ] ದ್ರಾಕ್ಷೆಯ ಹಣ್ಣನ್ನು ಕೊಡುವದೆಂದು ಎದುರುನೋಡುತ್ತಿರಲು ಅದು ಹೊಲಸುಹಣ್ಣನ್ನು ಬಿಟ್ಟಿತು.


ದೇವರೇ, ನೀನೇ ನನ್ನ ಅರಸನು; ಯಾಕೋಬವಂಶಕ್ಕೆ ಜಯಪ್ರದನಾಗು.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳ ತನಕ ಬಲವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಸುಲಿಗೆ ಮಾಡುವದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‍ದೇಶಕ್ಕೂ


ತರುವಾಯ ಫರೋಹನು ತನ್ನ ಜನರಿಗೆಲ್ಲಾ - [ಇಬ್ರಿಯರ] ಗಂಡುಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು ಎಂದು ಆಜ್ಞೆ ಮಾಡಿದನು.


ನನ್ನ ನಾಮ ಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲ್ಯರ ಎಲ್ಲಾ ಊರುಗಳಲ್ಲಿ ನನಗೆ ಇಷ್ಟವಾಗಿರುವ ಯೆರೂಸಲೇವಿುನಲ್ಲಿಯೂ ಸದಾಕಾಲವಿರುವದು. ಇಸ್ರಾಯೇಲ್ಯರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪಿತೃಗಳಿಗೆ ಕೊಡಲ್ಪಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು ಎಂದು ಹೇಳಿದ್ದನು.


ಇಸ್ರಾಯೇಲ್ಯರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪಿತೃಗಳಿಗೆ ನೇವಿುಸಲ್ಪಟ್ಟ ದೇಶದಲ್ಲಿಯೇ ವಾಸವಾಗಿರುವಂತೆ ಮಾಡುವೆನು ಎಂದು ಹೇಳಿದ್ದನು.


ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ ನಮ್ಮ ಪಿತೃಗಳನ್ನೇ ನೆಲೆಗೊಳ್ಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.


ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ ಅದು ಬೇರು ಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.


ನಿನ್ನ ಜನರೆಲ್ಲಾ ಸದ್ಧರ್ಮಿಗಳಾಗಿರುವರು; ನನ್ನ ಪ್ರಭಾವಕ್ಕೋಸ್ಕರ ನಾನು ನೆಟ್ಟ ಸಸಿಯಾಗಿಯೂ ನನ್ನ ಕೈ ಸೃಷ್ಟಿಸಿದ ಪ್ರಜೆಯಾಗಿಯೂ ದೇಶವನ್ನು ಸದಾ ಅನುಭವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು