2 ಸಮುಯೇಲ 7:18 - ಕನ್ನಡ ಸತ್ಯವೇದವು J.V. (BSI)18 ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕೂತುಕೊಂಡು - ಕರ್ತನೇ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದೀಯಲ್ಲಾ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬಳಿಕ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ಹೇ ಸರ್ವೇಶ್ವರಾ, ಸರ್ವೇಶ್ವರಾ, ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ರಾಜನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತು, “ನನ್ನ ಒಡೆಯನಾದ ಯೆಹೋವನೇ, ನಾನೆಷ್ಟರವನು? ನನ್ನ ಕುಲ ಎಷ್ಟರದು? ನೀನು ನನ್ನನ್ನೇಕೆ ಇಷ್ಟು ಉದ್ಧರಿಸಿದೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ಸಾರ್ವಭೌಮ ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು? ಅಧ್ಯಾಯವನ್ನು ನೋಡಿ |