Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:2 - ಕನ್ನಡ ಸತ್ಯವೇದವು J.V. (BSI)

2 ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ದೇವರ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಒಂದು ದಿನ ಅವನು ಪ್ರವಾದಿ ನಾತಾನನಿಗೆ, “ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ರಾಜನಾದ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದಿಂದ ನಿರ್ಮಿಸಿದ ವೈಭವದ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಪವಿತ್ರ ಪೆಟ್ಟಿಗೆಯನ್ನು ಇನ್ನೂ ಗುಡಾರದಲ್ಲಿಯೇ ಇಟ್ಟಿದ್ದೇನೆ. ಅದಕ್ಕಾಗಿ ಒಂದು ಆಲಯವನ್ನು ಕಟ್ಟಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:2
24 ತಿಳಿವುಗಳ ಹೋಲಿಕೆ  

ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ ದೇವದಾರುಮರಗಳನ್ನೂ ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ಇವನಿಗೋಸ್ಕರ ಅರಮನೆಯನ್ನು ಕಟ್ಟಿದರು.


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಇವನ ಹತ್ತಿರ ಬಂದು ಹೇಳಿದ್ದೇನಂದರೆ - ಒಂದು ಊರಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಇನ್ನೊಬ್ಬನು ಬಡವನು.


ದಾವೀದನು ದೇವರ ಸನ್ನಿಧಾನದಲ್ಲಿ ಕೃಪೆಹೊಂದಿ ಯಾಕೋಬನ ವಂಶದವರಿಗೋಸ್ಕರ ದೇವಾಲಯವನ್ನು ಕಟ್ಟಿಸುವದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡನು.


ಆಗ - ನಿನ್ನ ಆಲಯಾಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತದೆ ಎಂದು ಬರೆದ ಮಾತು ಶಿಷ್ಯರ ನೆನಪಿಗೆ ಬಂತು.


ಈ ಆಲಯವು ಹಾಳುಬಿದ್ದಿದೆಯಲ್ಲಾ; ನೀವು ಒಳಗೋಡೆಗೆಲ್ಲಾ ಹಲಿಗೆಹೊದಿಸಿಕೊಂಡ ಸ್ವಂತ ಮನೆಗಳಲ್ಲಿ ವಾಸಿಸುವದಕ್ಕೆ ಈ ಸಮಯವು ತಕ್ಕದ್ದೋ?


ದಾವೀದನ ಪೂರ್ವೋತ್ತರ ಚರಿತ್ರೆಯೂ ಅವನ ಆಳಿಕೆ, ಪರಾಕ್ರಮ, ಅವನಿಗೂ ಇಸ್ರಾಯೇಲ್ಯರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತವೂ


ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕೋಸ್ಕರ ಹಾಕಿಸಿದ ಗುಡಾರದಲ್ಲಿಟ್ಟು ದೇವರಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.


ಅವನು ಯಾಕೋಬ್ಯರ ಶೂರನಾದ ಯೆಹೋವನಿಗೆ ಪ್ರಮಾಣದಿಂದ ಹರಕೆಮಾಡಿಕೊಂಡನಲ್ಲಾ.


ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತಾನು ಯೆರೂಸಲೇವಿುನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿಟ್ಟ ಡೇರೆಗೆ ತೆಗೆದುಕೊಂಡು ಬಂದಿದ್ದರೂ


ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವದಕ್ಕೋಸ್ಕರ ದೂತರನ್ನೂ ದೇವದಾರು ಮರಗಳನ್ನೂ ಶಿಲ್ಪಿಗಳನ್ನೂ ಬಡಗಿಯವರನ್ನೂ ಅವನ ಬಳಿಗೆ ಕಳುಹಿಸಿದನು.


ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.


ಜನರು ಯೆಹೋವನ ಮಂಜೂಷವನ್ನು ತಂದು ದಾವೀದನು ಹಾಕಿಸಿದ ಗುಡಾರದೊಳಗೆ ನಿಯವಿುತ ಸ್ಥಳದಲ್ಲಿಟ್ಟರು; ಆಗ ದಾವೀದನು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದನು.


ಅದರ ಮೇಲೆ ಕೃಪಾಸನವನ್ನಿಟ್ಟು ಮಂಜೂಷವನ್ನು ಗುಡಾರದೊಳಕ್ಕೆ ತಂದು ಅದರ ಮುಂದೆ ತೆರೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.


ಅದಕ್ಕೆ ಊರೀಯನು - ಒಡಂಬಡಿಕೆಯ ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬೈಲಿನಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ ನಾನು ನನ್ನ ಮನೆಗೆ ಹೋಗಿ ಉಂಡು ಕುಡಿದು ಹೆಂಡತಿಯೊಡನೆ ಮಲಗಿಕೊಳ್ಳುವದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದನ್ನು ಮಾಡುವದೇ ಇಲ್ಲ ಎಂದು ಉತ್ತರಕೊಟ್ಟನು.


ಆಕೆಯು ಹೀಗೆ ಅರಸನ ಸಂಗಡ ಮಾತಾಡುತ್ತಿರುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು.


ನನ್ನ ತಂದೆಯಾದ ದಾವೀದನು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದಾಗ


ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದ್ದೆನು.


ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯು ಪ್ರವಾದಿಯಾದ ನಾತಾನನ ಚರಿತ್ರೆ, ಶೀಲೋವಿನವನಾದ ಅಹೀಯನ ಪ್ರವಾದನೆ, ದಿವ್ಯದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿರುತ್ತದೆ.


ಇದಲ್ಲದೆ ಅವನು ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದ ಭಜಿಸುವದಕ್ಕೋಸ್ಕರ ಲೇವಿಯರನ್ನು ದಾವೀದ, ರಾಜದರ್ಶಿಯಾದ ಗಾದ್, ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ಇರಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.


ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ಭಟರೂ ಅವನ ಪಕ್ಷದಲ್ಲಿರಲಿಲ್ಲ.


ನಾತಾನನ ಮಗನಾದ ಅಜರ್ಯನು ಪ್ರದೇಶಾಧಿಪತಿಗಳ ಮುಖ್ಯಸ್ಥನು; ನಾತಾನನ ಮಗನಾದ ಜಾಬೂದನು ಯಾಜಕನೂ ಅರಸನ ವಿುತ್ರನೂ ಆಗಿದ್ದನು;


ಯಾಕೋಬ್ಯರ ಶೂರನಾದ ಯೆಹೋವನಿಗಾಗಿ ಒಂದು ವಾಸಸ್ಥಾನವನ್ನು ಏರ್ಪಡಿಸುವ ತನಕ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು