ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.
ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.
ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.
ಆ ಮನುಷ್ಯನು - ನಾನು ಅಂಥವನಲ್ಲ; ಯೆಹೋವನ ಸೇನಾಪತಿಯು; ಈಗಲೇ ಬಂದಿದ್ದೇನೆ ಎಂದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ಸ್ವಾವಿುಯವರು ತಮ್ಮ ಸೇವಕನಿಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ ಅನ್ನಲು