2 ಸಮುಯೇಲ 7:21 - ಕನ್ನಡ ಸತ್ಯವೇದವು J.V. (BSI)21 ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವದಕ್ಕೋಸ್ಕರ ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ ಅವುಗಳ ಅನುಭವವನ್ನು ನಿನ್ನ ಸೇವಕನಿಗೆ ಉಂಟುಮಾಡಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀನು ನಿನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೋಸ್ಕರ, ನಿನ್ನ ಇಷ್ಟಾನುಸಾರವಾಗಿ ಈ ಎಲ್ಲಾ ಮಹತ್ಕಾರ್ಯಗಳನ್ನು ನಡಿಸಿ, ಅವುಗಳ ಅನುಭವಗಳನ್ನು ನಿನ್ನ ಸೇವಕನಿಗೆ ಉಂಟುಮಾಡದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತಮ್ಮ ಸಂಕಲ್ಪ ಹಾಗೂ ದಯಾನುಸಾರ ಎಂತೆಂಥಾ ಮಹತ್ಕಾರ್ಯವನ್ನು ನಡೆಸಿದಿರಿ! ಅವುಗಳ ಅನುಭವವನ್ನೂ ನಿಮ್ಮ ದಾಸನಿಗಿತ್ತಿರಿ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನೀನು ಈ ಕಾರ್ಯವನ್ನು ನಿನ್ನ ವಾಗ್ದಾನದ ಪ್ರಕಾರವಾಗಿಯೂ ನಿನ್ನ ಚಿತ್ತದ ಪ್ರಕಾರವಾಗಿಯೂ ಮಾಡಿರುವೆ ಮತ್ತು ನಿನ್ನ ಸೇವಕನಿಗೆ ಅದನ್ನು ತಿಳಿಸಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮ್ಮ ವಾಕ್ಯದ ನಿಮಿತ್ತವಾಗಿಯೂ ನಿಮ್ಮ ಚಿತ್ತಾನುಸಾರವಾಗಿಯೂ ನಿಮ್ಮ ಸೇವಕನಿಗೆ ತಿಳಿಯಪಡಿಸುವ ಹಾಗೆ ಈ ಮಹಾಕಾರ್ಯಗಳನ್ನೆಲ್ಲಾ ಮಾಡಿದಿರಿ. ಅಧ್ಯಾಯವನ್ನು ನೋಡಿ |
ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.