2 ಸಮುಯೇಲ 7:22 - ಕನ್ನಡ ಸತ್ಯವೇದವು J.V. (BSI)22 ದೇವರೇ, ಯೆಹೋವನೇ, ನೀನೇ ದೊಡ್ಡವನು; ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬದು ನಿಶ್ಚಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದೇವರೇ, ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಹೇ ದೇವಾ, ಸರ್ವೇಶ್ವರಾ, ತಾವು ಮಹೋನ್ನತರು, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದ ಅವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು ದೇವರೇ ಇಲ್ಲ ಎಂಬುದು ನಿಶ್ಚಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದೇವರಾದ ಯೆಹೋವನೇ, ನಾನು ಕೇಳಿದ ಪ್ರಕಾರ ನೀನೇ ದೊಡ್ಡವನು; ನಿನ್ನ ಸಮಾನರು ಬೇರೆ ಯಾರೂ ಇಲ್ಲ; ನಿನ್ನ ಹೊರತು ಬೇರೆ ದೇವರಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಸಾರ್ವಭೌಮ ಯೆಹೋವ ದೇವರೇ, ನೀವು ಮಹೋನ್ನತರಾಗಿದ್ದೀರಿ. ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡಿಸಿರುವ ಮಹತ್ಕಾರ್ಯಗಳನ್ನು ವಿವರಿಸಿ - ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದಂತೆ ಆಡಿಸಿ ಶಿಕ್ಷಿಸಿದನು ಎಂಬದಾಗಿ ತಿಳಿಸುವದಕ್ಕೂ ನಾನು ಫರೋಹನ ಹೃದಯವನ್ನೂ ಅವನ ಪರಿವಾರದವರ ಹೃದಯಗಳನ್ನೂ ಮೊಂಡುಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳುಕೊಳ್ಳುವಿರಿ.