2 ಸಮುಯೇಲ 7:28 - ಕನ್ನಡ ಸತ್ಯವೇದವು J.V. (BSI)28 ಕರ್ತನೇ, ಯೆಹೋವನೇ, ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ; ನಿನ್ನ ವಾಕ್ಯವು ಸತ್ಯವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಕರ್ತನೇ, ಯೆಹೋವನೇ! ನಿನ್ನ ಸೇವಕನಿಗೆ ಈ ಶ್ರೇಷ್ಠ ವಾಗ್ದಾನಗಳನ್ನು ಮಾಡಿದ ನೀನು ದೇವರಾಗಿರುತ್ತೀ. ನಿನ್ನ ವಾಕ್ಯವು ಸತ್ಯವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ದೇವರು; ನಿಮ್ಮ ವಾಕ್ಯ ಸತ್ಯವಾದದ್ದು; ತಮ್ಮ ದಾಸನಾದ ನನಗೆ ಇಂಥ ಶ್ರೇಷ್ಠ ವಾಗ್ದಾನ ಮಾಡಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನನ್ನ ಒಡೆಯನಾದ ಯೆಹೋವನೇ, ನೀನೇ ದೇವರು. ನಿನ್ನ ಮಾತುಗಳು ಸತ್ಯವಾದವು. ನಿನ್ನ ಸೇವಕನಾದ ನನಗೆ ಅತೀ ಉತ್ತಮವಾದ ವಾಗ್ದಾನಗಳನ್ನು ಮಾಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಸಾರ್ವಭೌಮ ಯೆಹೋವ ದೇವರೇ, ನಿಮ್ಮ ವಾಕ್ಯಗಳು ಸತ್ಯವಾದದ್ದು. ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ. ಅಧ್ಯಾಯವನ್ನು ನೋಡಿ |