Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:3 - ಕನ್ನಡ ಸತ್ಯವೇದವು J.V. (BSI)

3 ನಾತಾನನು ಅರಸನಿಗೆ - ಆಗಲಿ ಮನಸ್ಸಿದ್ದಂತೆ ಮಾಡು, ಯೆಹೋವನು ನಿನ್ನ ಸಂಗಡ ಇರುತ್ತಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾತಾನನು ಅರಸನಿಗೆ, “ಆಗಲಿ, ನಿನ್ನ ಹೃದಯದ ಆಲೋಚನೆಯಂತೆ ಮಾಡು. ಯೆಹೋವನು ನಿನ್ನ ಸಂಗಡ ಇರುತ್ತಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ನಾತಾನನು ಸಮ್ಮತಿಸಿ, “ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾತಾನನು ರಾಜನಾದ ದಾವೀದನಿಗೆ, “ನೀನು ನಿಜವಾಗಿಯೂ ಏನನ್ನು ಮಾಡಬೇಕೆಂದಿರುವೆಯೋ ಅದನ್ನು ಮಾಡು; ಯೆಹೋವನು ನಿನ್ನೊಂದಿಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ನಾತಾನನು ಅರಸನಿಗೆ, “ಆಗಲಿ ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು. ಏಕೆಂದರೆ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:3
14 ತಿಳಿವುಗಳ ಹೋಲಿಕೆ  

ನಾನು ನನ್ನ ದೇವರಾದ ಯೆಹೋವನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದ್ದೆನು.


ಅವರು ಕೂಡಿ ಬಂದಾಗ ಅರಸನಾದ ದಾವೀದನು ಎದ್ದು ನಿಂತು ಅವರಿಗೆ ಹೇಳಿದ್ದೇನಂದರೆ - ನನ್ನ ಸಹೋದರರೇ, ಪ್ರಜೆಗಳೇ, ಕೇಳಿರಿ. ಯೆಹೋವನ ನಿಬಂಧನಮಂಜೂಷಕ್ಕೋಸ್ಕರವೂ ನಮ್ಮ ದೇವರ ಪಾದಪೀಠಕ್ಕೋಸ್ಕರವೂ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸು ಮಾಡಿ ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.


ಬೆಟ್ಟದ ಮೇಲಿದ್ದ ದೇವರ ಮನುಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಗೇಹಜಿಯು ಆಕೆಯನ್ನು ದೂಡುವದಕ್ಕಾಗಿ ಹತ್ತಿರ ಬರಲು ದೇವರ ಮನುಷ್ಯನು ಅವನಿಗೆ - ಬಿಡು, ಆಕೆಯ ಮನಸ್ಸಿನಲ್ಲಿ ಬಹುದುಃಖವಿರುವ ಹಾಗೆ ತೋರುತ್ತದೆ; ಯೆಹೋವನು ಆಕೆಯ ದುಃಖವನ್ನು ನನಗೆ ಪ್ರಕಟಿಸಲಿಲ್ಲ, ಮರೆ ಮಾಡಿದ್ದಾನೆ ಎಂದು ಹೇಳಿದನು.


ಆದರೆ ಯೆಹೋವನು ಸಮುವೇಲನಿಗೆ - ನೀನು ಅವನ ಚೆಲುವಿಕೆಯನ್ನೂ ನೀಳವನ್ನೂ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ ಅಂದನು.


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.


ಆಗ ಯೆಹೋವನಲ್ಲಿ ಸಂತೋಷಿಸುವಿ; ಮತ್ತು ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.


ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ.


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದದ್ದನ್ನು ನಡಿಸು; ದೇವರು ನಿನ್ನ ಸಂಗಡ ಇದ್ದಾನೆ.


ಅದೇ ರಾತ್ರಿಯಲ್ಲಿ ಯೆಹೋವನು ನಾತಾನನಿಗೆ ಆಜ್ಞಾಪಿಸಿದ್ದೇನಂದರೆ -


ಆಯುಧಗಳನ್ನು ಹೊರುವವನು - ನಿನ್ನ ಮನಸ್ಸಿನಂತೆ ಮಾಡು; ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ ಅಂದನು.


ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ಭಟರೂ ಅವನ ಪಕ್ಷದಲ್ಲಿರಲಿಲ್ಲ.


ದಾವೀದನ ಪೂರ್ವೋತ್ತರ ಚರಿತ್ರೆಯೂ ಅವನ ಆಳಿಕೆ, ಪರಾಕ್ರಮ, ಅವನಿಗೂ ಇಸ್ರಾಯೇಲ್ಯರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖದುಃಖ ಇವುಗಳ ವೃತ್ತಾಂತವೂ


ಇದಲ್ಲದೆ ಅವನು ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದ ಭಜಿಸುವದಕ್ಕೋಸ್ಕರ ಲೇವಿಯರನ್ನು ದಾವೀದ, ರಾಜದರ್ಶಿಯಾದ ಗಾದ್, ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ಇರಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು