2 ಸಮುಯೇಲ 7:7 - ಕನ್ನಡ ಸತ್ಯವೇದವು J.V. (BSI)7 ನಾನು ಇಸ್ರಾಯೇಲ್ಯರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲ್ಯರನ್ನು ಪಾಲಿಸುವದಕ್ಕೋಸ್ಕರ ನನ್ನಿಂದ ನೇವಿುಸಲ್ಪಟ್ಟ ಯಾವ ಕುಲದವರನ್ನಾದರೂ - ನೀವು ನನಗೋಸ್ಕರ ದೇವದಾರುಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ಕುಲನಾಯಕನನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ!” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನನಗಾಗಿ ದೇವದಾರು ಮರದಿಂದ ಆಲಯ ಕಟ್ಟುವಂತೆ ಇಸ್ರೇಲರ ಯಾವ ಕುಲದವರನ್ನಾಗಲಿ ನಾನು ಕೇಳಿಕೊಳ್ಳಲಿಲ್ಲ ಎಂಬುದಾಗಿ ಯೆಹೋವನು ತಿಳಿಸುತ್ತಾನೆ’ ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು, ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’ ಅಧ್ಯಾಯವನ್ನು ನೋಡಿ |