Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:1 - ಕನ್ನಡ ಸತ್ಯವೇದವು J.V. (BSI)

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರ ರಾಜಧಾನಿಯನ್ನು ತೆಗೆದುಕೊಂಡು ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ, ಅವರನ್ನು ಸೋಲಿಸಿದನು. ಅವರ ರಾಜಧಾನಿಯನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ, ದಾವೀದನು ಫಿಲಿಷ್ಟಿಯರನ್ನು ಸೋಲಿಸಿ ಬಹುವಿಸ್ತಾರವಾದ ಪ್ರದೇಶವನ್ನು ಹತೋಟಿಯಲ್ಲಿಟ್ಟುಕೊಂಡಿದ್ದ ಅವರ ರಾಜಧಾನಿಯನ್ನು ಸ್ವಾಧೀನಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಮೇತೆಗ್ ಅಮ್ಮಹವನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:1
14 ತಿಳಿವುಗಳ ಹೋಲಿಕೆ  

ನೀನು ಹೋದಲ್ಲೆಲ್ಲಾ ನಿನ್ನ ಸಂಗಡ ಇದ್ದೆನು; ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ದೊಡ್ಡದುಮಾಡುವೆನು.


ಆದರೆ ಯೋವಾಬನೂ ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು ಅಮ್ಮಾ ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮಾನವಾಯಿತು. ಆ ಗುಡ್ಡವು ಗಿಬ್ಯೋನಿನ ಅರಣ್ಯ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿರುತ್ತದೆ.


ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;


ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು.


ಇಸ್ರಾಯೇಲ್ಯರೆಲ್ಲರೂ ತಮ್ಮತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಾಯೆಲ್‍ಕುಲಗಳಲ್ಲೆಲ್ಲಾ ಜನರು ತಮ್ಮ ತಮ್ಮೊಳಗೆ ಜಗಳವಾಡಿ - ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.


ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದೀ; ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದೀ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.


ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿ ಜನಾಂಗಗಳಿಗೆ ದೊರೆಯಾಗುವಂತೆ ಮಾಡಿದ್ದೀ; ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.


ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯರು ನನ್ನ ವಿಷಯವಾಗಿ ಕೂಗಿಕೊಳ್ಳಲಿ.


ಫಿಲಿಷ್ಟಿಯರು ಬಹಳವಾಗಿ ತಗ್ಗಿಸಲ್ಪಟ್ಟದರಿಂದ ತಿರಿಗಿ ಇಸ್ರಾಯೇಲ್ಯರ ಪ್ರಾಂತದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಯೆಹೋವನ ಹಸ್ತವು ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.


ಇಸ್ರಾಯೇಲ್ಯರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.


ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು.


ನೀನು ದೇಶವನ್ನು ಕಂಪನಗೊಳಿಸಿ ಒಡೆದು ಬಿಟ್ಟಿದ್ದೀ. ಅದರ ಒಡಕುಗಳನ್ನು ಸರಿಮಾಡು; ಅದು ನಡುಗುತ್ತಿರುವದಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು