Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:15 - ಕನ್ನಡ ಸತ್ಯವೇದವು J.V. (BSI)

15 ದಾವೀದನು ಇಸ್ರಾಯೇಲ್ಯರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನ್ಯಾಯತೀರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದಾವೀದನು ಸಮಸ್ತ ಇಸ್ರೇಲರನ್ನು ಆಳಿದನು. ದಾವೀದನು ಜನರಿಗೆ ನ್ಯಾಯವಾದ ಮತ್ತು ಸರಿಯಾದ ತೀರ್ಪುಗಳನ್ನು ಕೊಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:15
24 ತಿಳಿವುಗಳ ಹೋಲಿಕೆ  

ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.


ನೀತಿನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿಸತ್ಯತೆಗಳೇ.


ಅವನು ನಿನ್ನ ಜನರಿಗೆ ನೀತಿಯಿಂದಲೂ ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.


ನ್ಯಾಯವು ಹೊಳೆಯ ಹಾಗೆ ಹರಿಯಲಿ, ಧರ್ಮವು ಮಹಾನದಿಯಂತೆ ಪ್ರವಹಿಸಲಿ.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


[ದೇವರು ನುಡಿದದ್ದು -] ಕ್ಲುಪ್ತಕಾಲವು ಬಂದಾಗ ನಾನೇ ನೀತಿಯಿಂದ ತೀರ್ಪುಕೊಡುವೆನು.


ದಾವೀದನು ಇಸ್ರಾಯೇಲ್ಯರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನ್ಯಾಯತೀರಿಸುತ್ತಿದ್ದನು.


ಅವನು ಹೆಬ್ರೋನಿನಲ್ಲಿದ್ದುಕೊಂಡು ಯೆಹೂದಕುಲವೊಂದನ್ನೇ ಆಳಿದ್ದು ಏಳು ವರುಷವೂ ಆರು ತಿಂಗಳೂ; ಯೆರೂಸಲೇವಿುನಲ್ಲಿದ್ದುಕೊಂಡು ಯೆಹೂದ್ಯರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಆಳಿದ್ದು ಮೂವತ್ತುಮೂರು ವರುಷ.


ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಹಾಗೆ ನನ್ನ ಹಸ್ತವು ನಿನ್ನ ಸಂಗಡ ಇರುವದು ಎಂದು ಹೇಳಿಸಿದನು.


ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;


ಅವನು ಎದೋವಿುನಲ್ಲೆಲ್ಲಾ ಕಾವಲುದಂಡುಗಳನ್ನಿರಿಸಿದನು; ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


ಚೆರೂಯಳ ಮಗನಾದ ಯೋವಾಬನು ಅವನ ಸೇನಾಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.


ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಆತನು ಇಸ್ರಾಯೇಲ್ಯರನ್ನು ಸದಾ ಪ್ರೀತಿಸುವವನಾಗಿರುವದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇವಿುಸಿದ್ದಾನೆ ಎಂದು ಹೇಳಿದಳು.


ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ; ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ.


ಸೌಲನು ಇಸ್ರಾಯೇಲ್ಯರ ಅರಸನಾದ ಮೇಲೆ ಅವನು ಸುತ್ತಣ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಆಗ ಅಬ್ಷಾಲೋಮನು - ನೋಡು, ನಿನ್ನ ಕಾರ್ಯವು ಒಳ್ಳೇದೂ ನ್ಯಾಯವಾದದ್ದೂ ಆಗಿದೆ; ಆದರೆ ವ್ಯಾಜ್ಯಗಳನ್ನು ವಿಚಾರಿಸುವದಕ್ಕೆ ಅರಸನಿಂದ ಒಬ್ಬನೂ ನೇಮಕವಾಗಿಲ್ಲ.


ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾಪತಿ; ಯೆಹೋಯಾದಾವನ ಮಗನಾದ ಬೆನಾಯಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.


ಸೊಲೊಮೋನರಾಜನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು