2 ಸಮುಯೇಲ 8:2 - ಕನ್ನಡ ಸತ್ಯವೇದವು J.V. (BSI)2 ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ ಅವರನ್ನು ನೆಲಕ್ಕೆ ಹಾಕಿಸಿ ಹಗ್ಗದಿಂದ ಅಳತೆ ಮಾಡಿಸಿ ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲು ಉಳಿಸಿದನು. ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು. ಅಧ್ಯಾಯವನ್ನು ನೋಡಿ |