Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:2 - ಕನ್ನಡ ಸತ್ಯವೇದವು J.V. (BSI)

2 ಸೌಲನ ಮನೆಯಲ್ಲಿ ದಾಸನಾಗಿದ್ದ ಚೀಬನೆಂಬ ಒಬ್ಬ ಮನುಷ್ಯನನ್ನು ಕರಕೊಂಡುಬಂದರು. ಅರಸನು ಅವನನ್ನು - ನೀನು ಚೀಬನೋ ಎಂದು ಕೇಳಲು ಅವನು - ನಿನ್ನ ಸೇವಕನಾದ ನಾನು ಚೀಬನೇ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಅವರು ಸೌಲನ ಮನೆಯಲ್ಲಿ ದಾಸನಾಗಿದ್ದ ಚೀಬನೆಂಬ ಒಬ್ಬ ಮನುಷ್ಯನನ್ನು ಕರೆದುಕೊಂಡು ಬಂದರು. ಅರಸನು ಅವನನ್ನು, “ನೀನು ಚೀಬನೋ?” ಎಂದು ಕೇಳಲು ಅವನು, “ನಿನ್ನ ಸೇವಕನಾದ ನಾನು ಚೀಬನೆ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸೌಲನ ಮನೆಯಲ್ಲಿ ಊಳಿಗನಾಗಿದ್ದ ಚೀಬ ಎಂಬ ವ್ಯಕ್ತಿಯನ್ನು ಕರೆದುಕೊಂಡು ಬಂದರು. ಅರಸನು ಅವನನ್ನು, “ನೀನು ಚೀಬನೋ?’ ಎಂದು ಕೇಳಲು ಅವನು, “ನಿಮ್ಮ ಊಳಿಗನಾದ ನಾನು ಚೀಬನೇ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸೌಲನ ಮನೆಯಲ್ಲಿ ಸೇವಕನಾಗಿದ್ದ ಚೀಬ ಎಂಬವನೊಬ್ಬನಿದ್ದನು. ದಾವೀದನ ಸೇವಕರು ಚೀಬನನ್ನು ದಾವೀದನ ಬಳಿಗೆ ಕರೆತಂದರು. ರಾಜನಾದ ದಾವೀದನು ಅವನಿಗೆ, “ನೀನು ಚೀಬನೇ?” ಎಂದು ಕೇಳಿದನು. ಚೀಬನು, “ಹೌದು, ನಿನ್ನ ಸೇವಕನಾದ ಚೀಬನು ನಾನೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ, “ನೀನು ಚೀಬನೋ?” ಎಂದನು. ಅದಕ್ಕವನು, “ನಿನ್ನ ದಾಸನು ನಾನೇ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:2
7 ತಿಳಿವುಗಳ ಹೋಲಿಕೆ  

ಅವನ ಜೊತೆಯಲ್ಲಿ ಸಾವಿರ ಮಂದಿ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ ಇಪ್ಪತ್ತುಮಂದಿ ಸೇವಕರನ್ನೂ ಕರಕೊಂಡು ಅರಸನ ಮುಂದೆಯೇ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು


ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು; ಇವನು ತನ್ನ ಬಳಿಯಲ್ಲೇ ಇದ್ದದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವದನ್ನೂ ಚಿಂತಿಸಲಿಲ್ಲ. ಇದಲ್ಲದೆ ಯೋಸೇಫನು ರೂಪದಲ್ಲಿಯೂ ಮುಖಭಾವದಲ್ಲಿಯೂ ಸುಂದರನಾಗಿದ್ದನು.


ಹೀಗಿರಲು ಅವನು ತನಗಿದ್ದ ಆಸ್ತಿಯ ಮೇಲೆ ಆಡಳಿತ ಮಾಡುತ್ತಿದ್ದ ಹಿರೀ ಸೇವಕನಿಗೆ -


ಅರಸನ ಮನೆಯವರನ್ನು ದಾಟಿಸುವದಕ್ಕೋಸ್ಕರವೂ ಅವರಿಗೆ ಬೇಕಾದ ಸಹಾಯ ಮಾಡುವದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅರಸನು ಯೊರ್ದನ್ ಹೊಳೆಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿವ್ಮಿುಯು ಸಾಷ್ಟಾಂಗನಮಸ್ಕಾರ ಮಾಡಿ ಅವನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು