3 ಯೋಹಾನನು 1:10 - ಕನ್ನಡ ಸತ್ಯವೇದವು J.V. (BSI)10 ಅವನು ಹರಟೆಕೊಚ್ಚುವವನಾಗಿ ನಮ್ಮ ವಿಷಯದಲ್ಲಿ ಕೆಟ್ಟಕೆಟ್ಟ ಮಾತುಗಳನ್ನಾಡುತ್ತಾನೆ. ಇವೂ ಸಾಲದೆ ತಾನು ಸಹೋದರರನ್ನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ. ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ ಒಳ್ಳೇ ನಡತೆಯನ್ನು ಅನುಸರಿಸು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದಕಾರಣ, ನಾನು ಅಲ್ಲಿಗೆ ಬಂದಾಗ ಅವನು ಮಾಡುವ ಕೃತ್ಯಗಳನ್ನು ಕುರಿತು ಎಲ್ಲರಿಗೂ ತಿಳಿಸುವೆನು. ಅವನು ಹರಟೆಕೊಚ್ಚುವವನಾಗಿ, ನಮ್ಮ ವಿಷಯದಲ್ಲಿ ಅಪ ಪ್ರಚಾರ ಮಾಡುತ್ತಿದ್ದಾನೆ. ಇದರ ಜೊತೆಗೆ ಯಾವ ಸಹೋದರರನ್ನು ಸೇರಿಸಿಕೊಳ್ಳುವುದಿಲ್ಲ ಹಾಗೂ ನಾನು ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿಮಾಡಿ ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆದಕಾರಣ ನಾನು ಬಂದಾಗ ನಮ್ಮನ್ನು ದೂಷಿಸಿ ನಮ್ಮ ವಿಷಯದಲ್ಲಿ ಕೆಟ್ಟ ಕೆಟ್ಟ ಮಾತುಗಳನ್ನಾಡುವ ಅವನ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಇದರಲ್ಲಿ ತೃಪ್ತನಾಗದೆ, ಸಹೋದರರನ್ನು ತಾನೂ ಸೇರಿಸಿಕೊಳ್ಳದೆ, ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿ ಮಾಡುತ್ತಾ, ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಮಿಯಾ ಯೆಲೊ ತರ್ ತೊ ಕರುಲಾಗಲ್ಲ್ಯಾ ಬುರ್ಶ್ಯಾ ಕಾಮಾಚ್ಯಾ ವಿಶಯಾತ್ ಸಗ್ಳೆ ಸೊಡ್ಸುನ್ ಸಾಂಗ್ತಾ. ತೊ ಅಮ್ಚ್ಯಾ ವಿಶಯಾತ್ ಬುರ್ಶಿ ಅನಿ ಝುಟಿ ಸಂಗ್ತಿಯಾ ಸಾಂಗ್ತಾ. ಖರೆ ತವ್ಡೆಚ್ ನಸ್ತಾನಾ ಕ್ರಿಸ್ತಾಚಿ ಸೆವಾ ಕರುಲಾಗಲ್ಲ್ಯಾ ತ್ಯಾ ಭಾವಾಕ್ನಿ ಮಜತ್ ಕರ್ತಲೆಬಿ ತೊ ಮಾನಿನಾ, ಅನಿ ತ್ಯಾ ಭಾವಾಕ್ನಿ ಮಜತ್ ಕರುಚೆ ಮನುನ್ ಫಿಡೆ ಯೆಲ್ಲ್ಯಾ ಲೊಕಾಕ್ನಿ ತೊ ಆಡ್ವುತಾ ಅನಿ ತಿ ಲೊಕಾ ತಾಂಡೊ ಸೊಡುನ್ ಜಾಯ್ ಸಾರ್ಕೆ ಕರುಕ್ ಲಾಗ್ಲಾ ಮನಿ. ಅಧ್ಯಾಯವನ್ನು ನೋಡಿ |