Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:4 - ಕನ್ನಡ ಸತ್ಯವೇದವು J.V. (BSI)

4 ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನ್ನ ಪ್ರಿಯಮಕ್ಕಳು ಸತ್ಯಸಂಧರಾಗಿ ನಡೆಯುತ್ತಿದ್ದಾರೆಂದು ಕೇಳುವುದಕ್ಕಿಂತ ಮಿಗಿಲಾದ ಆನಂದ ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಮಕ್ಕಳು ಸತ್ಯಮಾರ್ಗದಲ್ಲಿ ನಡೆಯುತ್ತಿದ್ದಾರೆ ಎಂಬುದನ್ನು ಕೇಳುವಾಗಲೆಲ್ಲಾ ನನಗೆ ಬಹಳ ಸಂತೋಷವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಮಕ್ಕಳು ಸತ್ಯವನ್ನು ಅನುಸರಿಸಿ ಬಾಳುತ್ತಿದ್ದಾರೆಂದು ಕೇಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಾಜಿ ಪೊರಾ ಖರ್‍ಯಾಚ್ಯಾ ವಾಟೆನ್ ಜಿವನ್ ಕರುನ್ಗೆತ್ ಹಾತ್ ಮನ್ತಲೆ ಆಯಿಕ್ತಾನಾ ಮಾಕಾ ಲೈ ಕುಶಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:4
18 ತಿಳಿವುಗಳ ಹೋಲಿಕೆ  

ನನ್ನ ಪ್ರಿಯವಾದ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವವೇದನೆ ಪಡುತ್ತೇನೆ.


ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ಧರ್ಮಿಯ ತಂದೆಯು ಅತಿ ಸಂತೋಷಪಡುವನು; ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ನಿನಗೆ ನಂಬಿಗಸ್ತನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾಕೃಪೆಯನ್ನು ತೋರಿಸಿದಿ; ಅವನ ಮೇಲೆ ಬಹಳವಾಗಿ ಕೃಪೆಮಾಡಿ ಈಗಿರುವಂತೆ ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಪೂರ್ತಿಗೊಳಿಸಿದಿ.


ಮತ್ತು ಯೆಹೋವನು - ನಿನ್ನ ಸಂತಾನದವರು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವದರಲ್ಲಿ ಜಾಗರೂಕರಾಗಿರುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯುವದಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ - ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ - ನೀವು ಯೆಹೂದ್ಯರ ಪದ್ಧತಿಗಳನ್ನು ಅನುಸರಿಸಬೇಕೆಂದು ನೀನು ಬಲಾತ್ಕಾರ ಮಾಡುವದು ಹೇಗೆ?


ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.


ಆಹಾ, ನಾನೂ ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದುಂಟಾದ ಗುರುತುಗಳಾಗಿಯೂ ಅದ್ಭುತಗಳಾಗಿಯೂ ಇಸ್ರಾಯೇಲ್ಯರ ಮಧ್ಯದಲ್ಲಿದ್ದೇವೆ.


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪುಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ನಿಮ್ಮ ವಿಷಯದಲ್ಲಿ ನಮ್ಮ ಹೃದಯವು ವಿಶಾಲವಾಗಿರುವದರಿಂದ ನಮ್ಮ ವಿಷಯದಲ್ಲಿ ನಿಮ್ಮ ಹೃದಯವನ್ನೂ ವಿಶಾಲಮಾಡಿಕೊಳ್ಳಿರಿ. ನೀವು ನನ್ನ ಮಕ್ಕಳೆಂದು ಭಾವಿಸಿ ಹೀಗೆ ಹೇಳುತ್ತೇನೆ.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ಧಿಹೇಳುತ್ತಾ ಧೈರ್ಯಪಡಿಸುತ್ತಾ


ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.


ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಮಗುಂಟಾದ ಆಜ್ಞಾನುಸಾರ ಸತ್ಯವಂತರಾಗಿ ನಡೆಯುವದನ್ನು ಕಂಡು ಬಹಳ ಸಂತೋಷವುಳ್ಳವನಾದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು