Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:6 - ಕನ್ನಡ ಸತ್ಯವೇದವು J.V. (BSI)

6 ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿಹೇಳಿದರು. ಅವರನ್ನು ನೀನು ದೇವರ ಸೇವಕರಿಗೆ ಯೋಗ್ಯವಾದ ರೀತಿಯಿಂದ ಸಾಗ ಕಳುಹಿಸಿದರೆ ಚೆನ್ನಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಸಭೆಯ ಮುಂದೆ ನೀನು ತೋರಿಸಿದ ಪ್ರೀತಿಯ ಕುರಿತು ಸಾಕ್ಷಿ ಹೇಳಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಲ್ಲಿಯ ಸಭೆಯ ಮುಂದೆ ಅವರೇ ನಿನ್ನ ಪ್ರೀತ್ಯಾದರವನ್ನು ಪ್ರಶಂಶಿಸಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಿನಗಿರುವ ಪ್ರೀತಿಯನ್ನು ಕುರಿತು ಈ ಸಹೋದರರು ಸಭೆಗೆ ತಿಳಿಸಿದರು. ಅವರು ತಮ್ಮ ಪ್ರವಾಸವನ್ನು ಮುಂದುವರಿಸಲು ದಯವಿಟ್ಟು ಅವರಿಗೆ ಸಹಾಯಮಾಡು. ದೇವರಿಗೆ ಮೆಚ್ಚಿಗೆಕರವಾದ ರೀತಿಯಲ್ಲಿ ಅವರಿಗೆ ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ದೇವರು ಮೆಚ್ಚುವ ರೀತಿಯಲ್ಲಿ ಸಾಗಕಳುಹಿಸಿದರೆ ನೀನು ಒಳ್ಳೆಯದನ್ನು ಮಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ದೆವಾಚ್ಯಾ ತಾಂಡ್ಯಾಕ್ಡೆ ತುಜೆ ಪ್ರೆಮ್ ಕಸ್ಲೊ ಮನ್ತಲೆ ಬೊಲ್ಲ್ಯಾನಿ, ದಯಾ ಕರುನ್ ದೆವಾಚ್ಯಾ ಮನಾಕ್ ಪಾಜೆ ಹೊಲ್ಲ್ಯಾ ವಾಟೆನ್ ಚಲುಕ್ ತೆಂಕಾ ಮಜತ್ ಕರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:6
15 ತಿಳಿವುಗಳ ಹೋಲಿಕೆ  

ತನ್ನ ರಾಜ್ಯಪ್ರಭಾವಗಳಲ್ಲಿ ಪಾಲುಗಾರರಾಗುವದಕ್ಕೆ ಕರೆಯುವ ದೇವರಿಗೆ ಯೋಗ್ಯರಾಗಿ ನೀವು ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೇ ತಿಳಿದದೆ.


ನ್ಯಾಯಶಾಸ್ತ್ರಿ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.


ಸಭೆಯವರು ಅವರನ್ನು ಸಾಗಕಳುಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.


ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಕೀರ್ತಿ? ಆದರೆ ಒಳ್ಳೇದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.


ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ


ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರರಾಗಿದ್ದದ್ದು ಒಳ್ಳೇದಾಯಿತು.


ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಆಮೇಲೆ ಮಕೆದೋನ್ಯವನ್ನು ಬಿಟ್ಟು ತಿರಿಗಿ ನಿಮ್ಮ ಬಳಿಗೆ ಬಂದು ನಿವ್ಮಿುಂದ ಯೂದಾಯಕ್ಕೆ ಸಾಗಕಳುಹಿಸಲ್ಪಡಬೇಕೆಂದು ಯೋಚಿಸಿದ್ದೆನು.


ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂಬ ಅಭಿಪ್ರಾಯ ಉಂಟು. ತರುವಾಯ ನಿಮ್ಮ ಸಹವಾಸದಲ್ಲಿ ನನಗೆ ಸ್ವಲ್ಪಮಟ್ಟಿಗೆ ಸಂತೃಪ್ತಿಯಾದ ಮೇಲೆ ನೀವು ಆ ದೇಶಕ್ಕೆ ನನ್ನ ಪ್ರಯಾಣವನ್ನು ಸಾಗಿಸುವಿರೆಂದು ನಂಬುತ್ತೇನೆ.


ಆ ದಿವಸಗಳನ್ನು ತೀರಿಸಿಕೊಂಡು ನಾವು ಹೊರಡುವಾಗ ಅವರೆಲ್ಲರೂ ಹೆಂಡರು ಮಕ್ಕಳು ಸಹಿತವಾಗಿ ಬಂದು ನಮ್ಮನ್ನು ಊರ ಹೊರಕ್ಕೆ ಸಾಗಕಳುಹಿಸಿದರು. ನಾವು ಸಮುದ್ರತೀರದಲ್ಲಿ ಮೊಣಕಾಲೂರಿಕೊಂಡು ಪ್ರಾರ್ಥನೆಮಾಡಿ


ನಾವು ಸಹ ಅವನ ವಿಷಯದಲ್ಲಿ ಸಾಕ್ಷಿ ಹೇಳುವವರಾಗಿದ್ದೇವೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲೆ.


ಅದಕ್ಕೆ ಯೆಹೋವನು - ನೀನು ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಿದನು.


ಒಳ್ಳೇ ಕೆಲಸ ಮಾಡಿದರೆ ನಿನ್ನ ತಲೆ ಎತ್ತಲ್ಪಡುವದಲ್ಲವೇ; ಅಲ್ಲದಿದ್ದರೆ ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವದು; ಆದರೂ ನೀನು ಅದನ್ನು ವಶಮಾಡಿಕೊಳ್ಳಬೇಕು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು