Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:1 - ಕನ್ನಡ ಸತ್ಯವೇದವು J.V. (BSI)

1 ಥೆಯೊಫಿಲನೇ, ನಾನು ಮೊದಲು ಬರೆದ ಚರಿತ್ರೆಯಲ್ಲಿ ಯೇಸು ಮಾಡುವದಕ್ಕೂ ಉಪದೇಶಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1-2 ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರಿಯ ಥೆಯೊಫಿಲನೇ, ಯೇಸು ಮಾಡಿದ ಕಾರ್ಯಗಳ ಬಗ್ಗೆ ಮತ್ತು ನೀಡಿದ ಬೋಧನೆಗಳ ಬಗ್ಗೆ ಪ್ರತಿಯೊಂದನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಥೆಯೊಫಿಲನೇ, ನಾನು ನಿನಗೆ ನನ್ನ ಮೊದಲನೆಯ ಗ್ರಂಥದಲ್ಲಿ ಯೇಸು ಮಾಡುವುದಕ್ಕೂ ಬೋಧಿಸುವುದಕ್ಕೂ ಪ್ರಾರಂಭಿಸಿದ್ದೆಲ್ಲವನ್ನೂ ಕುರಿತು ನಿಮಗೆ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪ್ರೆಮಾಚ್ಯಾ ಥಿಯೊಫಿಲಸ್, ಮಾಜ್ಯಾ ಪಯ್ಲೆಚ್ಯಾ ಪುಸ್ತಕಾತ್ ಜೆಜುನ್ ಅಪ್ಲಿ ಕಾಮಾ ಸುರು ಕರಲ್ಲ್ಯಾ ಎಳಾಕ್ನಾ ಜೆಜುನ್ ಕರಲ್ಲಿ ಅನಿ ಶಿಕ್ವಲ್ಲಿ ಸಗ್ಳಿ ವಿಶಯಾ ಮಿಯಾ ಲಿವ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:1
12 ತಿಳಿವುಗಳ ಹೋಲಿಕೆ  

ನಾನು ಬುಡದಿಂದ ಎಲ್ಲವನ್ನೂ ಚೆನ್ನಾಗಿ ವಿಚಾರಿಸಿದವನಾದಕಾರಣ ಅವುಗಳನ್ನು ನಿನಗೆ ಕ್ರಮವಾಗಿ ಬರೆಯುವದು ಒಳ್ಳೇದೆಂದು ನನಗೂ ತೋಚಿತು.


ಆತನು ಅವರನ್ನು - ಯಾವ ಸಂಗತಿಗಳು ಎಂದು ಕೇಳಿದನು. ಅದಕ್ಕೆ ಅವರು - ನಜರೇತಿನವನಾದ ಯೇಸುವಿನ ಸಂಗತಿಗಳೇ; ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಸಮರ್ಥನಾದ ಪ್ರವಾದಿಯಾಗಿದ್ದನು.


ಯೇಸು ಉಪದೇಶಮಾಡುವದಕ್ಕೆ ಪ್ರಾರಂಭಿಸಿದಾಗ ಹೆಚ್ಚುಕಡಿಮೆ ಮೂವತ್ತು ವರುಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು.


ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಆ ದಿವಸಗಳಾದ ಮೇಲೆ ಅವನ ಹೆಂಡತಿಯಾದ ಎಲಿಸಬೇತಳು ಬಸುರಾಗಿ ಐದು ತಿಂಗಳು ಮನೆಯಲ್ಲೇ ಮರೆಯಾಗಿದ್ದು -


ಬಳಿಕ ಆ ಆಳು - ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು; ಆದರೂ ಇನ್ನೂ ಸ್ಥಳವದೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು