ಅಪೊಸ್ತಲರ ಕೃತ್ಯಗಳು 1:11 - ಕನ್ನಡ ಸತ್ಯವೇದವು J.V. (BSI)11 ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಕ್ಕೆ ಸೇರಿಸಲ್ಪಟ್ಟಿರುವ ಈ ಯೇಸು ಯಾವ ರೀತಿಯಲ್ಲಿ ಆಕಾಶದೊಳಕ್ಕೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಗಲಿಲಾಯದವರೇ, ಏಕೆ ಆಕಾಶವನ್ನೇ ನೋಡುತ್ತಾ ನಿಂತುಕೊಂಡಿದ್ದೀರಿ? ಯೇಸು ನಿಮ್ಮ ಕಣ್ಣೆದುರಿನಲ್ಲಿ ಪರಲೋಕಕ್ಕೆ ಹೇಗೆ ಏರಿ ಹೋದನೋ ಅದೇ ರೀತಿಯಲ್ಲಿ ಹಿಂತಿರುಗಿ ಬರುತ್ತಾನೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅನಿ ತೆನಿ ಮನುಕ್ ಲಾಗ್ಲೆ, “ಗಾಲಿಲಿಯಾಚ್ಯಾ ಮಾನ್ಸಾನು, ತುಮಿ ಅಶೆ ಮಳ್ಬಾಕ್ ನದರ್ ಲಾವ್ನ್ ಘೆವ್ನ್ ಕಶ್ಯಾಕ್ ಇಬೆ ರ್‍ಹಾಲ್ಯಾಶಿ? ಹ್ಯೊ ತುಮ್ಚ್ಯಾ ಮದ್ಲೊ ವೈರ್ ಉಕ್ಲುನ್ ಘೆವ್ನ್ ಹೊಲ್ಲೊ ಜೆಜು, ಕಸೊ ತುಮಿ ತೆಕಾ ಸರ್ಗಾರ್ ಚಡುನ್ ಜಾತಾನಾ ಬಗುಕ್ ಲಾಗ್ಲ್ಯಾಸಿ ತೆಸೊಚ್ ಅನಿ ಪರ್ತುನ್ ತೊ ಯೆತಾ”. ಅಧ್ಯಾಯವನ್ನು ನೋಡಿ |