Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:16 - ಕನ್ನಡ ಸತ್ಯವೇದವು J.V. (BSI)

16 ಸಹೋದರರೇ, ಯೇಸುವನ್ನು ಹಿಡಿದುಕೊಂಡವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವದು ಅವಶ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ದಾರೀತೋರಿಸಿದ ಯೂದನ ವಿಷಯವಾಗಿ ಪವಿತ್ರಾತ್ಮನು ದಾವೀದನ ಬಾಯಿಂದ ಮೊದಲೇ ಹೇಳಿಸಿದ ಶಾಸ್ತ್ರವಚನವು ನೆರವೇರುವುದು ಅವಶ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16-17 “ಸಹೋದರರೇ, ಪವಿತ್ರಾತ್ಮನು ದಾವೀದನ ಮೂಲಕವಾಗಿ ಪವಿತ್ರ ಗ್ರಂಥದಲ್ಲಿ ಮುಂತಿಳಿಸಿದ್ದ ಸಂಗತಿ ನೆರವೇರಬೇಕಿತ್ತು. ನಮ್ಮ ಸ್ವಂತ ಗುಂಪಿನವರಲ್ಲಿ ಒಬ್ಬನಾದ ಯೂದನ ಬಗ್ಗೆ ದಾವೀದನು ಹೇಳಿದ್ದಾನೆ. ಯೂದನು ನಮ್ಮೊಂದಿಗೆ ಸೇವೆ ಮಾಡಿದನು. ಯೇಸುವನ್ನು ಬಂಧಿಸುವವರಿಗೆ ಯೂದನು ಮಾರ್ಗದರ್ಶಕನಾಗುತ್ತಾನೆಂದು ಪವಿತ್ರಾತ್ಮನು ತಿಳಿಸಿದ್ದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಭಾವಾನು ಅನಿ ಭೆನಿಯಾನು ದಾವಿದಾಚ್ಯಾ ತೊಂಡಾತ್ನಾ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಜೆಜುಕ್ ಘಾತ್ ಕರುನ್ ಧರುನ್ ದಿತಲ್ಯಾ ಜುದಾಸಾಚ್ಯಾ ವಿಶಯಾತ್ ಲಿವಲ್ಲೆ ಖರೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:16
38 ತಿಳಿವುಗಳ ಹೋಲಿಕೆ  

ನಾನು ಯಾವನನ್ನು ನಂಬಿದ್ದೆನೋ ಯಾವನು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ ಅಂಥ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ಅವನ ವಿಷಯವಾಗಿ - ಅವನ ಮನೆ ಹಾಳುಬೀಳಲಿ, ಅದು ಜನಶೂನ್ಯವಾಗಲಿ ಎಂತಲೂ ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದದೆ.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಕಳುಹಿಸಿಕೊಟ್ಟರೆ ನನಗೆ ಇಂಥಿಂಥದು ಆಗಬೇಕೆಂಬುವ ಶಾಸ್ತ್ರದ ಮಾತುಗಕು ನೆರವೇರುವದು ಹೇಗೆ ಎಂದು ಹೇಳಿದನು.


ಆತನು ಇನ್ನೂ ಮಾತಾಡುತ್ತಿರಲು ಇಗೋ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು; ಮಹಾಯಾಜಕರು ಜನರ ಹಿರಿಯರು ಇವರ ಕಡೆಯಿಂದ ಬಹು ಜನರ ಗುಂಪು ಕತ್ತಿ ದೊಣ್ಣೆಗಳನ್ನು ಹಿಡುಕೊಂಡು ಅವನ ಸಂಗಡ ಬಂತು.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬದನ್ನು ಅವರು ಪರಿಶೋಧನೆ ಮಾಡಿದರು.


ಆತನು ಇನ್ನೂ ಮಾತಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮಹಾಯಾಜಕರು ಶಾಸ್ತ್ರಿಗಳು ಹಿರಿಯರು ಇವರ ಕಡೆಯಿಂದ ಒಂದು ಗುಂಪು ಕತ್ತಿದೊಣ್ಣೆಗಳನ್ನು ಹಿಡುಕೊಂಡು ಅವನ ಸಂಗಡ ಬಂತು;


ಅವರು ನೀತಿ ಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದಿದ್ದರೆ ಮೇಲಾಗಿತ್ತು.


ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು.


ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ - ಸಹೋದರರೇ, ನಾನು ಈ ದಿನದವರೆಗೂ ಒಳ್ಳೇ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ ಅಂದನು.


ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದವನ್ನು ಕೇಳಿರಿ ಎಂದು ಕೂಗಿ ಹೇಳಿದನು.


ಪೇತ್ರನು ಎದ್ದು ಅವರಿಗೆ - ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದದೆ.


ಆದದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗುತ್ತದೆಂದು ನಿಮಗೆ ತಿಳಿದಿರಲಿ.


ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.


ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು


ಇದನ್ನು ಅವರು ಕೇಳಿ ಹೃದಯದಲ್ಲಿ ಅಲಗುನೆಟ್ಟಂತಾಗಿ ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ - ಸಹೋದರರೇ, ನಾವೇನು ಮಾಡಬೇಕು ಎಂದು ಕೇಳಲು


ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಯಾಕಂದರೆ - ಆತನ ಒಂದು ಎಲುಬನ್ನಾದರೂ ಮುರಿಯಕೂಡದು ಎಂದು ಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು;


ಹಾಗಾದರೆ ದೇವರ ವಾಕ್ಯವನ್ನು ಹೊಂದಿದವರನ್ನು ದೇವರುಗಳೆಂದು ಆತನು ಹೇಳಿರುವಲ್ಲಿ


ಆತನು ಇನ್ನೂ ಮಾತಾಡುತ್ತಿರಲು ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬವನು ಆ ಜನರ ಮುಂದೆ ಮುಂದೆ ನಡೆದನು.


ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದನು.


ಯೆಹೋವನ ಆತ್ಮವು ನನ್ನಲ್ಲಿ ಉಸುರಿತು; ಆತನ ವಾಕ್ಯವು ನನ್ನ ಬಾಯಲ್ಲಿತ್ತು.


ಅವರಲ್ಲಿ ಐಕಮತ್ಯವಿಲ್ಲದೆ ಇರುವಾಗ ಪೌಲನು ಅವರಿಗೆ - ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ


ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿದನು. ಅವರು ಕೂಡಿದ ಮೇಲೆ ಅವನು ಅವರಿಗೆ - ಸಹೋದರರೇ, ನಾನು ನಮ್ಮ ಜನರಿಗೂ ನಮ್ಮ ಪಿತೃಗಳ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇವಿುನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.


ಅವರು ಮಾತಾಡುವದನ್ನು ಮುಗಿಸಿದ ಮೇಲೆ ಯಾಕೋಬನು ಆ ಪ್ರಸ್ತಾಪವನ್ನು ಹಿಡಿದು ಹೇಳಿದ್ದೇನಂದರೆ -


ಆಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬವನು ಮಹಾಯಾಜಕರ ಬಳಿಗೆ ಹೋಗಿ -


ನಾನು ಇವರ ಸಂಗಡ ಇದ್ದಾಗ ನೀನು ನನಗೆ ಕೊಟ್ಟಿರುವ ನಿನ್ನ ಹೆಸರಿನಲ್ಲಿ ಇವರನ್ನು ಕಾಯುತ್ತಾ ಬಂದೆನು, ಇವರನ್ನು ಕಾಪಾಡಿದೆನು; ಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕೆ ಗುರಿಯಾದ ಆ ಮನುಷ್ಯನೇ ಹೊರತು ಇವರಲ್ಲಿ ಮತ್ತಾರೂ ನಾಶವಾಗಲಿಲ್ಲ.


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಾಯೇಲ್‍ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು