ಅಪೊಸ್ತಲರ ಕೃತ್ಯಗಳು 1:24 - ಕನ್ನಡ ಸತ್ಯವೇದವು J.V. (BSI)24-25 ಮತ್ತೀಯನನ್ನೂ ನಿಲ್ಲಿಸಿ ಪ್ರಾರ್ಥನೆ ಮಾಡುತ್ತಾ - ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವದರಿಂದ ಆ ಸ್ಥಾನವನ್ನು ಹೊಂದುವದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿಕೊಂಡವನನ್ನು ತೋರಿಸಿಕೊಡು ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924-25 “ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24-25 ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24-25 ಅಪೊಸ್ತಲರು ಹೀಗೆ ಪ್ರಾರ್ಥಿಸಿದರು: “ಪ್ರಭುವೇ, ನೀನು ಎಲ್ಲಾ ಜನರ ಮನಸ್ಸುಗಳನ್ನು ತಿಳಿದಿರುವೆ. ಈ ಕೆಲಸವನ್ನು ಮಾಡುವುದಕ್ಕಾಗಿ ಈ ಇಬ್ಬರಲ್ಲಿ ನೀನು ಯಾರನ್ನು ಆರಿಸಿಕೊಂಡಿರುವೆ ಎಂಬುದನ್ನು ನಮಗೆ ತೋರಿಸು. ಯೂದನು ಈ ಕೆಲಸಕ್ಕೆ ವಿಮುಖನಾಗಿ ತಾನು ಸೇರಬೇಕಿದ್ದಲ್ಲಿಗೆ ಹೊರಟುಹೋದನು. ಪ್ರಭುವೇ, ಅವನ ಸ್ಥಳದಲ್ಲಿ ಅಪೊಸ್ತಲನಾಗಿ ಯಾರು ನೇಮಕಗೊಳ್ಳಬೇಕೆಂಬುದನ್ನು ನಮಗೆ ತೋರಿಸು!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಮಾನಾ ತೆನಿ ಅಶೆ ಮಾಗ್ನೆ ಕರ್‍ಲ್ಯಾನಿ: “ಧನಿಯಾ ಸಗ್ಳ್ಯಾಂಚಿ ಭುತ್ತುರ್‍ಲಿ ಮಾನಾ ತುಕಾ ಗೊತ್ತ್ ಹಾತ್. ದೊಗ್ಯಾಂಚ್ಯಾ ಭುತ್ತುರ್‍ಲ್ಯಾ ಕೊನಾಕ್ ತಿಯಾ ಎಚುನ್ ಕಾಡ್ಲೆ ದಾಕ್ವು, ಅಧ್ಯಾಯವನ್ನು ನೋಡಿ |
ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.