Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:3 - ಕನ್ನಡ ಸತ್ಯವೇದವು J.V. (BSI)

3 ಆತನು ಬಾಧೆಪಟ್ಟು ಸತ್ತ ಮೇಲೆ ತನ್ನನ್ನು ಜೀವಂತನೆಂದು ಅನೇಕ ಪ್ರಮಾಣಗಳಿಂದ ಅಪೊಸ್ತಲರಿಗೆ ತೋರಿಸಿಕೊಂಡನು. ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವಾದ ಸಂಗತಿಗಳನ್ನು ಹೇಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇದು ಆತನ ಮರಣಾನಂತರ ನಡೆದ ಸಂಗತಿ. ತಾನು ಜೀವಂತವಾಗಿರುವುದನ್ನು ಆತನು ಅಪೊಸ್ತಲರಿಗೆ ತೋರ್ಪಡಿಸಿದನು ಮತ್ತು ಶಕ್ತಿಯುತವಾದ ಅನೇಕ ಕಾರ್ಯಗಳನ್ನು ಮಾಡುವುದರ ಮೂಲಕ ಅದನ್ನು ನಿರೂಪಿಸಿದನು. ಯೇಸು ಜೀವಂತವಾಗಿ ಎದ್ದುಬಂದ ನಂತರದ ನಲವತ್ತು ದಿನಗಳ ಅವಧಿಯಲ್ಲಿ ಅಪೊಸ್ತಲರು ಆತನನ್ನು ಅನೇಕ ಸಲ ನೋಡಿದರು. ಯೇಸು ದೇವರ ರಾಜ್ಯದ ಕುರಿತು ಅಪೊಸ್ತಲರೊಂದಿಗೆ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅಪ್ನಾಚ್ಯಾ ಮರ್‍ನಾಚ್ಯಾ ಮಾನಾಚ್ಯಾ ಎಳಾರ್ ಅಪ್ನಿ ಅನಿ ಪರ್ತುನ್ ಝಿತ್ತೊ ಹೊಲಾ ಮನುನ್ ಸುಮಾರ್ ಖಾತ್ರಿಯಾಂಚ್ಯಾ ವೈನಾ ತೆನಿ ದಾಕ್ವುನ್ ದಿಲ್ಯಾನ್, ಅನಿ ತೊ ಚಾಳಿಸ್ ದಿಸ್ ಪತರ್ ತೆಂಚ್ಯಾ ನದ್ರೆಕ್ ಪಡ್ಲೊ, ಅನಿ ದೆವಾಚ್ಯಾ ರಾಜಾಚ್ಯಾ ವಿಶಯಾತ್ ಬೊಲುನ್ಗೆತ್ ತೆಂಚ್ಯಾಕ್ಡೆ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:3
27 ತಿಳಿವುಗಳ ಹೋಲಿಕೆ  

ಮತ್ತು ಆತನು ಗಲಿಲಾಯದಿಂದ ಯೆರೂಸಲೇವಿುಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರಿಯಂತರ ಕಾಣಿಸಿಕೊಂಡನು. ಅವರು ಈಗ ಜನರ ಮುಂದೆ ಆತನಿಗೆ ಸಾಕ್ಷಿಗಳಾಗಿದ್ದಾರೆ.


ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ತಿರಿಗಿ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.


ನಾವು ನಿಮಗೆ ಪ್ರಸಿದ್ಧಿಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ ಕಣ್ಣಾರೆ ಕಂಡು ಮನಸ್ಸಿಟ್ಟು ನೋಡಿ ಕೈಯಿಂದ ಮುಟ್ಟಿದ್ದೇವೆ.


ಯೇಸು ಸತ್ತು ಜೀವದಿಂದೆದ್ದ ಮೇಲೆ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.


ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ತಿರಿಗಿ ತನ್ನನ್ನು ತೋರಿಸಿಕೊಂಡನು.


ಆಗ ಯೇಸು ಅವರ ಎದುರಿಗೆ ಬಂದು - ನಿಮಗೆ ಶುಭವಾಗಲಿ ಅಂದನು. ಅವರು ಹತ್ತರಕ್ಕೆ ಬಂದು ಆತನ ಪಾದಗಳನ್ನು ಹಿಡಿದು ಆತನಿಗೆ ನಮಸ್ಕಾರಮಾಡಿದರು.


ಯಾವ ಅಡ್ಡಿಯೂ ಇಲ್ಲದೆ ತುಂಬಾ ಧೈರ್ಯದಿಂದ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.


ತನ್ನ ರಾಜ್ಯಪ್ರಭಾವಗಳಲ್ಲಿ ಪಾಲುಗಾರರಾಗುವದಕ್ಕೆ ಕರೆಯುವ ದೇವರಿಗೆ ಯೋಗ್ಯರಾಗಿ ನೀವು ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೇ ತಿಳಿದದೆ.


ದೇವರು ನಮ್ಮನ್ನು ಅಂಧಕಾರದ ದೊರೆತನದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ರಾಜ್ಯದೊಳಗೆ ಸೇರಿಸಿದನು.


ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.


ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು.


ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಾಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.


ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.


ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ಅವನು ಎದ್ದು ತಿಂದು ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣಮಾಡಿ ದೇವಗಿರಿಯಾದ ಹೋರೇಬಿಗೆ ಮುಟ್ಟಿ


ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಾಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.


ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತಾಡಿದನು.


ಅವರು ಅವನಿಗೆ ಒಂದು ದಿವಸವನ್ನು ಗೊತ್ತುಮಾಡಲು ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗಿನಿಂದ ಸಾಯಂಕಾಲದವರೆಗೂ ದೇವರ ರಾಜ್ಯವನ್ನು ಕುರಿತು ಪ್ರಮಾಣವಾಗಿ ಸಾಕ್ಷಿಹೇಳುತ್ತಾ ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು