Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:6 - ಕನ್ನಡ ಸತ್ಯವೇದವು J.V. (BSI)

6 ಕೂಡಿ ಬಂದವರು ಆತನನ್ನು - ಸ್ವಾಮೀ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ತಿರಿಗಿ ಸ್ಥಾಪಿಸಿಕೊಡುವಿಯೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೂಡಿಬಂದವರು ಆತನನ್ನು,, “ಕರ್ತನೇ, ನೀನು ಇದೇ ಕಾಲದಲ್ಲಿ ಇಸ್ರಾಯೇಲ್ ಜನರಿಗೆ ರಾಜ್ಯವನ್ನು ಪುನಃ ಸ್ಥಾಪಿಸಿಕೊಡುವಿಯೋ?” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, “ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್‍ಸ್ಥಾಪಿಸುವಿರೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಪೊಸ್ತಲರು ಒಟ್ಟಾಗಿ ಸೇರಿದ್ದಾಗ, ಅವರು ಯೇಸುವಿಗೆ, “ಪ್ರಭುವೇ, ನೀನು ಯೆಹೂದ್ಯರಿಗೆ ಮತ್ತೆ ಅವರ ರಾಜ್ಯವನ್ನು ಕೊಡುವಂಥದ್ದು ಈ ಕಾಲದಲ್ಲೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಶಿಷ್ಯರು ಯೇಸುವಿನ ಸಂಗಡ ಇದ್ದಾಗ, “ಸ್ವಾಮೀ, ಇಸ್ರಾಯೇಲರ ರಾಜ್ಯವನ್ನು ಈ ಕಾಲದಲ್ಲಿ ಪುನಃ ಸ್ಥಾಪಿಸುವಿಯೋ?” ಎಂದು ಪ್ರಶ್ನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅಶೆ ಅಪೊಸ್ತಲಾ ಜೆಜುಚ್ಯಾ ಭೊತ್ಯಾನ್ ಎಕಾಕ್ಡೆ ಗೊಳಾ ಹೊಲಿ, ಅನಿ ತೆಕಾ, “ಧನಿಯಾ ತಿಯಾ ಇಸ್ರಾಯೆಲಾಚೆ ರಾಜ್ ಅನಿ ಎಗ್ದಾ ಭಾಂದ್ತಲೆ ಹ್ಯಾಚ್ ಎಳಾರ್ ಕಾಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:6
23 ತಿಳಿವುಗಳ ಹೋಲಿಕೆ  

ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇವಿುಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದದರಿಂದಲೂ ಇನ್ನೂ ಒಂದು ಸಾಮ್ಯವನ್ನು ಹೇಳಿದನು.


ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ - ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವಂಥದಲ್ಲ.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕೂತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು - ಅದು ಯಾವಾಗ ಆಗುವದು? ನೀನು ಪ್ರತ್ಯಕ್ಷನಾಗುವದಕ್ಕೂ ಯುಗದ ಸಮಾಪ್ತಿಗೂ ಸೂಚನೆಯೇನು? ನಮಗೆ ಹೇಳು ಅನ್ನಲು


ಆದದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇವಿುಸಿದ ಪ್ರಕಾರ ನಾನು ನಿಮಗೂ ನೇವಿುಸುತ್ತೇನೆ;


ಎಲೀಯನು ಬರುವದು ನಿಜ; ಬಂದು ಎಲ್ಲವನ್ನು ತಿರಿಗಿ ಸರಿಮಾಡುವನು;


ಆತನು ಆಕೆಯನ್ನು - ನಿನಗೇನು ಬೇಕಮ್ಮಾ ಎಂದು ಕೇಳಲು ಆಕೆ - ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕೂತುಕೊಳ್ಳುವದಕ್ಕೆ ಅಪ್ಪಣೆಯಾಗಬೇಕು ಅಂದಳು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.


ಪೂರ್ವದಲ್ಲಿ ನಿನಗಿದ್ದಂಥ ನ್ಯಾಯಾಧಿಪತಿಗಳನ್ನೂ ಮಂತ್ರಾಲೋಚಕರನ್ನೂ ಪುನಃ ಒದಗಿಸಿಕೊಡುವೆನು; ಆಮೇಲೆ ನೀನು ಧರ್ಮಪುರಿ ಎಂತಲೂ ಸುವ್ರತನಗರಿ ಎಂತಲೂ ಅನ್ನಿಸಿಕೊಳ್ಳುವಿ.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಇವನನ್ನು ಪೇತ್ರನು ಕಂಡು ಯೇಸುವನ್ನು - ಸ್ವಾಮೀ, ಇವನ ವಿಷಯವೇನು ಎಂದು ಕೇಳಲು


ಆತನು - ಎಲೀಯನು ಮೊದಲು ಬಂದು ಎಲ್ಲವನ್ನು ತಿರಿಗಿ ಸರಿಮಾಡುವದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ - ಅವನು ಬಹು ಕಷ್ಟಗಳನ್ನನುಭವಿಸಿ ಹೀನೈಸಲ್ಪಡಬೇಕೆಂಬದಾಗಿ ಬರೆದದೆ, ಇದು ಹೇಗೆ?


ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು