Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:7 - ಕನ್ನಡ ಸತ್ಯವೇದವು J.V. (BSI)

7 ಆತನು ಅವರಿಗೆ - ತಂದೆಯು ಸ್ವಂತ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ ಸಮಯಗಳನ್ನೂ ತಿಳುಕೊಳ್ಳುವದು ನಿಮ್ಮ ಕೆಲಸವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ಅವರಿಗೆ, “ತಂದೆಯು ತನ್ನ ಅಧಿಕಾರದಲ್ಲಿಟ್ಟುಕೊಂಡಿರುವ ಕಾಲಗಳನ್ನೂ, ಸಮಯಗಳನ್ನೂ ತಿಳಿದುಕೊಳ್ಳುವುದು ನಿಮ್ಮ ಕಾರ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಅವರಿಗೆ, “ದಿನಗಳನ್ನು ಮತ್ತು ಕಾಲಗಳನ್ನು ನಿರ್ಧರಿಸುವ ಅಧಿಕಾರವಿರುವುದು ತಂದೆಯೊಬ್ಬನಿಗಷ್ಟೇ. ನೀವು ಅವುಗಳನ್ನು ತಿಳಿದುಕೊಳ್ಳಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ತೆನಿ ತೆಂಕಾ ಜಬಾಬ್ ದಿವ್ನ್ ಮಟ್ಲ್ಯಾನ್ ಬಾಬಾನ್ ಅಪ್ಲ್ಯಾ ಸ್ವತಾಚ್ಯಾ ಅದಿಕಾರಾನ್ ನಿರ್ಧಾರ್ ಕರಲ್ಲೊ ಎಳ್ ಅನಿ ದಿಸ್ ಸಮ್ಜುನ್ ಘೆತಲೆ ಕಾಮ್ ತುಮ್ಚೆ ನ್ಹಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:7
13 ತಿಳಿವುಗಳ ಹೋಲಿಕೆ  

ಇದಲ್ಲದೆ ಆ ದಿನದ ವಿಷಯವೂ ಆ ಗಳಿಗೆಯ ವಿಷಯವೂ ನನ್ನ ತಂದೆಯೊಬ್ಬನಿಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು, ಮಗನಿಗೂ ತಿಳಿಯದು.


ಇದಲ್ಲದೆ ಆ ದಿನದ ವಿಷಯವಾಗಲಿ ಆ ಗಳಿಗೆಯ ವಿಷಯವಾಗಲಿ ನನ್ನ ತಂದೆಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು; ಮಗನಿಗೂ ತಿಳಿಯದು.


ಆದರೆ ನನ್ನ ಬಲಗಡೆಯಲ್ಲಾದರೂ ಎಡಗಡೆಯಲ್ಲಾದರೂ ಕೂತುಕೊಳ್ಳುವಂತೆ ಅನುಗ್ರಹಮಾಡುವದು ನನ್ನದಲ್ಲ; ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು.


ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ;


ಅವರು ಕತ್ತಿಯ ಬಾಯಿಗೆ ಬೀಳುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.


ಆದರೆ ಕಡೇ ದಿವಸಗಳಲ್ಲಿ ಕಠಿನಕಾಲಗಳು ಬರುವವೆಂಬದನ್ನು ತಿಳಿದುಕೋ.


ಭಾಗ್ಯವಂತನಾದ ಏಕಾಧಿಪತಿಯು ತನ್ನ ಕ್ಲುಪ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು ರಾಜಾಧಿರಾಜನೂ ಕರ್ತರ ಕರ್ತನೂ


ಆತನು ಒಬ್ಬನಿಂದಲೇ ಎಲ್ಲಾ ಜನಾಂಗದವರನ್ನು ಹುಟ್ಟಿಸಿ ಅವರವರು ಇರತಕ್ಕ ಕಾಲಗಳನ್ನೂ ಅವರವರ ನಿವಾಸಗಳ ಮೇರೆಗಳನ್ನೂ ನಿಷ್ಕರ್ಷಿಸಿ ಭೂಮಂಡಲದಲ್ಲೆಲ್ಲಾ ವಾಸಮಾಡಿ


ಆಗ ಆತನು ಅವರಿಗೆ - ನನ್ನ ಪಾತ್ರೆಯಲ್ಲಿ ನೀವು ಕುಡಿಯುವಿರಿ ಸರಿ; ಆದರೆ ನನ್ನ ಎಡಬಲಗಡೆಗಳಲ್ಲಿ ಕೂತುಕೊಳ್ಳುವಂತೆ ಅನುಗ್ರಹ ಮಾಡುವದು ನನ್ನದಲ್ಲ; ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಿದೆಯೋ ಅವರಿಗೇ ಸಿಕ್ಕುವದು ಎಂದು ಹೇಳಿದನು.


ಸರ್ವಶಕ್ತನು ಏಕೆ [ದಂಡನೆಯ] ಕಾಲಗಳನ್ನು ನೇವಿುಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ [ನ್ಯಾಯ ತೀರ್ಪಿನ] ದಿನಗಳು ಏಕೆ ಗೋಚರವಾಗುವದಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು