Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:22 - ಕನ್ನಡ ಸತ್ಯವೇದವು J.V. (BSI)

22 ಅವರು - ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡುವವನೂ ಯೆಹೂದ್ಯ ಜನರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇಕಳುಹಿಸಿಕೊಂಡು ನಿನ್ನಿಂದ ಬೋಧನೆಯನ್ನು ಕೇಳಬೇಕೆಂದು ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದನು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತ್ಯಾ ಲೊಕಾನಿ, ಕೊರ್ನೆಲ್ ಮನ್ತಲೊ ಎಕ್ ಶತಾದಿಪತಿ ಹೊತ್ತೊ, ತೊ ಧಾರ್ಮಿಕ್ ಮಾನುಸ್ ,ಅನಿ ದೆವಾಕ್ ಆರಾದನ್ ಕರ್‍ತಲೊ ಅನಿ ಜುದೆವಾಂಚಿ ಲೊಕಾ ಸಗ್ಳ್ಯಿ ತೆಕಾ ಮಾನ್‍ ದಿತ್ಯಾತ್, ತುಕಾ ಅಪ್ಲ್ಯಾ ಘರಾಕ್ ಬಲ್ವುನ್ ತಿಯಾ ಸಾಂಗ್ತಲಿ ಸಂಗ್ತಿಯಾ ಆಯ್ಕುಚೆ ಮನುನ್ ದೆವಾಚ್ಯಾ ದುತಾನ್ ಕೊರ್ನೆಲಾಕ್ ಕಳ್ವುಲ್ಯಾನ್, ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:22
36 ತಿಳಿವುಗಳ ಹೋಲಿಕೆ  

ಅವನು ನಿನಗೆ ಕೆಲವು ಮಾತುಗಳನ್ನು ಹೇಳುವನು, ಆ ಮಾತುಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.


ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನಧರ್ಮ ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.


ನಾವು ಸಹ ಅವನ ವಿಷಯದಲ್ಲಿ ಸಾಕ್ಷಿ ಹೇಳುವವರಾಗಿದ್ದೇವೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲೆ.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ಸರಳ ಮನಸ್ಸನ್ನು ಪ್ರೇರಿಸಿದ್ದೇನೆ.


ಪರಲೋಕದಲ್ಲಿ ಹೆಸರು ಬರಸಿಕೊಂಡಿರುವ ಚೊಚ್ಚಲಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಸಿದ್ಧಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ


ನಮ್ಮ ಪೂರ್ವಿಕರು ನಂಬಿಕೆಯುಳ್ಳವರಾಗಿದ್ದದರಿಂದಲೇ ಒಳ್ಳೇ ಹೆಸರನ್ನು ಹೊಂದಿದರು.


ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನಗೆ ಸಂತೋಷವಿರುವದಿಲ್ಲ ಎಂದು ಬರೆದದೆ.


ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನಿಸಿಕೊಂಡಿರಬೇಕು; ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ಉರ್ಲಿನೊಳಗೆ ಸಿಕ್ಕಿಬಿದ್ದಾನು.


ಇದೆಲ್ಲಾ ದೇವರಿಂದಲೇ ಉಂಟಾದದ್ದು. ಆತನು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;


ಹೇಗಂದರೆ ದೇವರಿಂದ ದೊರಕುವ ನೀತಿಯು ಅದರಲ್ಲಿ ತೋರಿಬರುತ್ತದೆ. ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ಪ್ರಕಟಿಸುವಂಥದಾಗಿದೆ.


ಇದಲ್ಲದೆ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುವದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ;


ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ಸದ್ಭಕ್ತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಒಳ್ಳೆಯವನೆಂದು ಹೆಸರು ಹೊಂದಿದವನೂ


ನಾನು ತಡಮಾಡದೆ ನಿನ್ನ ಹತ್ತರ ಕಳುಹಿಸಿದೆನು. ನೀನು ಬಂದದ್ದು ಉಪಕಾರವಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.


ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿ ಅದೆ ಎಂದು ಹೇಳಿದನು.


ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು.


ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರ ಸಹ ಕೇಳಿಕೊಳ್ಳುತ್ತೇನೆ.


ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಾನು ಕಳುಹಿಸಿಕೊಟ್ಟವನನ್ನು ಅಂಗೀಕರಿಸುವವನು ನನ್ನನ್ನು ಅಂಗೀಕರಿಸುವವನಾಗಿದ್ದಾನೆ; ನನ್ನನ್ನು ಅಂಗೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ಅಂಗೀಕರಿಸುವವನಾಗಿದ್ದಾನೆ.


ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು;


ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ಅರಿಮಥಾಯವೆಂಬ ಯೆಹೂದ್ಯರದೊಂದು ಪಟ್ಟಣದ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಸೇಫನು. ಅವನು ಹಿರೀಸಭೆಯವನು, ಉತ್ತಮನು, ಸತ್ಪುರುಷನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು; ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಕ್ಕೂ ಸಮ್ಮತಿ ಪಟ್ಟಿರಲಿಲ್ಲ.


ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು.


ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಸಂತತಿಯಲ್ಲಿ ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ ನಾಚಿಕೊಳ್ಳುವನು ಅಂದನು.


ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಆದರೆ ಆಕೆಯ ಗಂಡನಾದ ಯೋಸೇಫನು ಸಜ್ಜನನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ, ಯಾರಿಗೂ ತಿಳಿಯದಂತೆ ಆಕೆಯನ್ನು ಬಿಟ್ಟುಬಿಡಬೇಕೆಂದಿದ್ದನು.


ಇಗೋ, ಆ ದುಷ್ಟನ ಅಂತರಾತ್ಮವು ಉಬ್ಬಿಕೊಂಡಿದೆ, ಯಥಾರ್ಥವಲ್ಲ; ನೀತಿವಂತನೋ ತನ್ನ ನಂಬಿಕೆಯಿಂದಲೇ ಬದುಕುವನು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ಆಮೇಲೆ ದೇವರು ಕನಸಿನಲ್ಲಿ ಅವರಿಗೆ - ನೀವು ಹೆರೋದನ ಬಳಿಗೆ ತಿರಿಗೆ ಹೋಗಬಾರದೆಂದು ಅಪ್ಪಣೆಕೊಟ್ಟದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.


ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಪ್ರಭಾವದೊಡನೆ ಬರುವಾಗ ನಾಚಿಕೊಳ್ಳುವನು.


ಪೇತ್ರನು ಕೆಳಗಿಳಿದು ಆ ಮನುಷ್ಯರ ಬಳಿಗೆ ಬಂದು - ಇಗೋ, ನೀವು ವಿಚಾರಿಸುವವನು ನಾನೇ; ನೀವು ಬಂದ ಕಾರಣವೇನು ಎಂದು ಕೇಳಲು


ಅದಕ್ಕೆ ಕೊರ್ನೇಲ್ಯನು - ನಾನು ನಾಲ್ಕು ದಿವಸಗಳ ಹಿಂದೆ ಮಧ್ಯಾಹ್ನದ ಮೇಲೆ ಮೂರು ಗಂಟೆಗೆ ನಡೆಯತಕ್ಕ ದೇವರ ಪ್ರಾರ್ಥನೆಯನ್ನು ಇಷ್ಟು ಹೊತ್ತಿನವರೆಗೂ ನನ್ನ ಮನೆಯಲ್ಲಿ ಮಾಡುತ್ತಿದ್ದಾಗ ಹೊಳೆಯುವ ವಸ್ತ್ರವನ್ನು ಧರಿಸಿಕೊಂಡಿದ್ದ ಒಬ್ಬ ಮನುಷ್ಯನು ನನ್ನೆದುರಿಗೆ ನಿಂತುಕೊಂಡು -


ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ಮತ್ತು ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು ಅಂದುಕೊಳ್ಳುವದಕ್ಕೆ ಆಸ್ಪದವೇನೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು