Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:35 - ಕನ್ನಡ ಸತ್ಯವೇದವು J.V. (BSI)

35 ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಯಾವ ಜನಾಂಗದವರೇ ಆಗಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ತನ್ನನ್ನು ಆರಾಧಿಸುವ ನೀತಿವಂತರು ಯಾರೇ ಆಗಿದ್ದರೂ ಅವರನ್ನು ದೇವರು ಸ್ವೀಕರಿಸಿಕೊಳ್ಳುವನು. ಅವನು ಯಾವ ದೇಶದವನು ಎಂಬುದು ಮುಖ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ದೇವರು ಪ್ರತಿಯೊಂದು ದೇಶದಲ್ಲಿಯೂ ತಮಗೆ ಭಯಪಡುವ ಮತ್ತು ಸರಿಯಾದದ್ದನ್ನು ಮಾಡುವ ಜನರನ್ನು ಸ್ವೀಕರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಅಪ್ನಾಕ್ ಆರಾದನ್ ಕರ್‍ತಲೊ ನಿತಿಚೊ ಮಾನುಸ್ ಕೊನ್ ಹೊಲ್ಯಾರ್ಬಿ ದೆವ್ ತೆಕಾ ಅಪ್ನಾಚ್ಯಾ ಜಗ್ಗೊಳ್ ಘೆತಾ, ಹಿತ್ತೆ ತೊ ಖಚ್ಚ್ಯಾ ದೆಶ್ಯಾಚೊ ಮನ್ತಲೆ ಜವಾಬ್ ಯೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:35
36 ತಿಳಿವುಗಳ ಹೋಲಿಕೆ  

ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.


ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನಧರ್ಮ ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ವಿಷಯವು ತೀರಿತು; ಎಲ್ಲವೂ ಕೇಳಿ ಮುಗಿಯಿತು; ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು; ಮನುಷ್ಯರೆಲ್ಲರ [ಕರ್ತವ್ಯವು] ಇದೇ.


ಕೃಪಾಸತ್ಯತೆಗಳಿಂದ ಪಾಪನಿವಾರಣೆ; ಯೆಹೋವನ ಭಯಭಕ್ತಿಯಿಂದ ಹಾನಿ ನಿವಾರಣೆ.


ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು.


ನೀವು ದೇವರ ಕೃಪೆಯನ್ನು ಕುರಿತು ಸತ್ಯಾರ್ಥವನ್ನು ಕೇಳಿ ತಿಳುಕೊಂಡ ದಿವಸದಿಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟು ವೃದ್ಧಿಯಾಗುತ್ತಾ ಬಂದ ಪ್ರಕಾರ ಲೋಕದಲ್ಲೆಲ್ಲಾ ಹಬ್ಬಿ ಫಲಕೊಟ್ಟು ವೃದ್ಧಿಯಾಗುತ್ತಾ ಬರುತ್ತದೆ.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.


ಭಯಭಕ್ತಿಯುಳ್ಳ ಜನರಿಗೆ ಆತನ ರಕ್ಷಣೆಯು ಹತ್ತಿರವಿರುವದು ಸತ್ಯ. ಇದರಿಂದ ಆತನ ಮಹಿಮೆ ನಮ್ಮ ದೇಶದಲ್ಲಿ ನೆಲೆಗೊಳ್ಳುವದು.


ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಯೆಹೂದ್ಯರಾಗಲಿ ಗ್ರೀಕರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗುವದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು; ಒಂದೇ ಆತ್ಮ ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿತು.


ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.


ಧರ್ಮಶಾಸ್ತ್ರ ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.


ಆ ದೂತನು ಆಕೆಯ ಬಳಿಗೆ ಬಂದು - ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.


ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳಿಗೆ ಮೆಚ್ಚನು; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವದು.


ನೀನೇ ಬುದ್ಧಿವಂತನು ಎಂದೆಣಿಸದೆ ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.


ಆಗ ನೀನು ಯೆಹೋವನ ಭಯವನ್ನು ಅರಿತು ದೈವಜ್ಞಾನವನ್ನು ಪಡೆದುಕೊಳ್ಳುವಿ.


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ವಿಧಿಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ.


ಅಲ್ಲಿ ಬಹು ಜನರು ಕೂಡಿಬಂದಿರುವದನ್ನು ಕಂಡು ಅವರಿಗೆ - ಯೆಹೂದ್ಯರು ಅನ್ಯಜನರ ಕೂಡ ಹೊಕ್ಕು ಬಳಿಕೆಮಾಡುವದು ಯೆಹೂದ್ಯರ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರದೆಂದು ದೇವರು ತೋರಿಸಿದ್ದಾನೆ.


ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ ತಾವೇ ತಮಗೆ ಧರ್ಮಪ್ರಮಾಣವಾಗಿದ್ದಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು