Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:12 - ಕನ್ನಡ ಸತ್ಯವೇದವು J.V. (BSI)

12 ದೇವರಾತ್ಮನು - ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ನನಗೆ ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರಾತ್ಮನು, ನನಗೆ ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಂದೇಹಪಡದೆ ಅವರೊಂದಿಗೆ ಹೋಗಬೇಕೆಂದು ಪವಿತ್ರಾತ್ಮನು ನನಗೆ ಹೇಳಿದನು. ಇಲ್ಲಿರುವ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು. ನಾವು ಕೊರ್ನೇಲಿಯನ ಮನೆಗೆ ಹೋದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏನೂ ಸಂಶಯಪಡದೇ ಅವರ ಜೊತೆಯಲ್ಲಿ ಹೋಗಬೇಕೆಂದು ಪವಿತ್ರಾತ್ಮ ದೇವರು ನನಗೆ ಅಪ್ಪಣೆಕೊಟ್ಟರು. ಇದಲ್ಲದೆ ಈ ಆರು ಜನ ಸಹೋದರರೂ ನನ್ನೊಂದಿಗೆ ಹೊರಟರು. ನಾವು ಆ ಮನುಷ್ಯನ ಮನೆಯೊಳಗೆ ಪ್ರವೇಶಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅನ್ಮಾನ್ ಕರಿನಸ್ತಾನಾ ತೆಂಚ್ಯಾ ವಾಂಗ್ಡಾ ಜಾವ್ಚೆ ಮನುನ್ ಪವಿತ್ರ್ ಆತ್ಮ್ಯಾನ್ ಮಾಕಾ ಸಾಂಗ್ಲ್ಯಾನ್, ಹಿತ್ತೆ ಹೊತ್ತಿ ಹಿ ಸಾ ಲೊಕಾ ಭಾವಾಬಿ ಮಾಜ್ಯಾ ವಾಗ್ಡಾ ಸೆಜರಿಯಾಕ್ ಯೆಲಿ ಮಾನಾ ಅಮಿ ಕೊರ್ನೆಲಾಚ್ಯಾ ಘರಾಕ್ ಗೆಲ್ಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:12
17 ತಿಳಿವುಗಳ ಹೋಲಿಕೆ  

ದೇವರಾತ್ಮನು ಫಿಲಿಪ್ಪನಿಗೆ - ನೀನು ಆ ರಥದ ಹತ್ತಿರ ಹೋಗಿ ಅದರ ಸಂಗಡಲೇ ನಡೆ ಎಂದು ಹೇಳಿದನು.


ದೇವರಿಂದಾಗುವ ಆ ನೀತಿಯು ಯಾವದಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ ನಂಬುವವರೆಲ್ಲರಿಗೆ ದೊರಕುವಂಥದು. ಹೆಚ್ಚುಕಡಿಮೆ ಏನೂ ಇಲ್ಲ.


ಕರ್ತನ ದಿನವು ಈಗಲೇ ಹತ್ತಿರವಾಯಿತೆಂಬದಾಗಿ ದೇವರಾತ್ಮಪ್ರೇರಿತವಾದ ನುಡಿ ಇದೆ ಎಂದಾಗಲಿ ಪೌಲನು ಹಾಗೆ ಹೇಳಿದನೆಂದಾಗಲಿ ಪೌಲನು ಹಾಗೆ ಬರೆದನೆಂದಾಗಲಿ ಯಾರಾದರೂ ಹೇಳಿದರೂ ನೀವು ಬೇಗನೆ ಬುದ್ಧಿಗೆಟ್ಟು ಚಂಚಲರಾಗಿ ಕಳವಳಪಡಬೇಡಿರಿ.


ಪೇತ್ರನು ಇದನ್ನು ಕೇಳಿ ಅವರನ್ನು ಒಳಕ್ಕೆ ಕರೆದು ಉಪಚರಿಸಿದನು. ಮರುದಿನ ಅವನು ಎದ್ದು ಅವರ ಜೊತೆಯಲ್ಲಿ ಹೊರಟನು; ಯೊಪ್ಪದಲ್ಲಿದ್ದ ಸಹೋದರರಲ್ಲಿ ಕೆಲವರು ಅವನ ಕೂಡ ಹೋದರು.


ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.


ಅವರು ನಾನಾ ಭಾಷೆಗಳನ್ನಾಡುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ಕೇಳಿದಾಗ - ಅನ್ಯಜನಗಳಿಗೂ ಪವಿತ್ರಾತ್ಮ ದಾನ ಮಾಡಲ್ಪಟ್ಟಿದೆಯಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. ನಡೆದ ಸಂಗತಿಯನ್ನು ಪೇತ್ರನು ನೋಡಿ -


ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.


ಅವನು ಇದನ್ನು ಆಲೋಚಿಸುತ್ತಿರುವಾಗ ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಎಲೈ ಯೋಸೇಫನೇ, ದಾವೀದನ ವಂಶದವನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳುವದಕ್ಕೆ ಅಂಜಬೇಡ. ಆಕೆಯ ಗರ್ಭವು ಪವಿತ್ರಾತ್ಮದಿಂದಲೇ ಆದದ್ದು.


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ಪೇತ್ರನು ಎದ್ದು ಅವರಿಗೆ - ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಿಮ್ಮೊಳಗಿಂದ ನನ್ನನ್ನು ಆರಿಸಿಕೊಂಡದ್ದು ನಿಮಗೇ ತಿಳಿದದೆ.


ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಿಕೊಂಡವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.


ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿತ್ರಾತ್ಮನು - ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ - ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವದನ್ನು ಕಂಡೆನು. ಆ ದೂತನು - ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರಿಸು;


ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ ನಮ್ಮನ್ನು ಎದುರುಗೊಳ್ಳುವದಕ್ಕಾಗಿ ಕೆಲವರು ಅಪ್ಪಿಯಪೇಟೆಯವರೆಗೂ ಕೆಲವರು ತ್ರಿಛತ್ರವೆಂಬ ಸ್ಥಳದವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತೋತ್ರವನ್ನು ಮಾಡಿ ಧೈರ್ಯಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು