Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:14 - ಕನ್ನಡ ಸತ್ಯವೇದವು J.V. (BSI)

14 ಅವನು ನಿನಗೆ ಕೆಲವು ಮಾತುಗಳನ್ನು ಹೇಳುವನು, ಆ ಮಾತುಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ನಿಮ್ಮೊಂದಿಗೆ ಮಾತಾಡುವನು. ಅವನು ಹೇಳುವ ಸಂಗತಿಗಳು ನಿನ್ನನ್ನೂ ನಿನ್ನ ಕುಟಂಬದವರನ್ನೂ ರಕ್ಷಿಸುತ್ತವೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಕೊಡುವ ವಾಕ್ಯದ ಮೂಲಕ ನೀನೂ ನಿನ್ನ ಮನೆಯಲ್ಲಿರುವವರೆಲ್ಲರೂ ರಕ್ಷಣೆ ಹೊಂದುವಿರಿ,’ ಎಂದು ಹೇಳಿದ್ದನ್ನು ಅವನು ನಮಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೊ ತುಮ್ಚ್ಯಾ ವಾಂಗ್ಡಾ ಬೊಲ್ತಾ, ತೊ ಸಾಂಗ್ತಲಿ ಸಂಗ್ತಿಯಾ ತುಕಾ ಅನಿ ತುಜ್ಯಾ ಘರಾನ್ಯಾಚ್ಯಾ ಲೊಕಾಕ್ನಿ ರಾಕ್ವನ್ ಕರ್‍ತಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:14
30 ತಿಳಿವುಗಳ ಹೋಲಿಕೆ  

ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಅವರು - ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡುವವನೂ ಯೆಹೂದ್ಯ ಜನರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇಕಳುಹಿಸಿಕೊಂಡು ನಿನ್ನಿಂದ ಬೋಧನೆಯನ್ನು ಕೇಳಬೇಕೆಂದು ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದನು ಎಂದು ಹೇಳಿದರು.


ಅವನು ಚರ್ಮಕಾರನಾದ ಸೀಮೋನನ ಬಳಿಯಲ್ಲಿ ಇಳುಕೊಂಡಿದ್ದಾನೆ; ಈ ಸೀಮೋನನ ಮನೆಯು ಸಮುದ್ರದ ಬಳಿಯಲ್ಲಿ ಅದೆ ಎಂದು ಹೇಳಿದನು.


ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನಧರ್ಮ ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.


ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವವರೆಲ್ಲರಿಗೆ ಮಾಡೋಣವಾಗಿದೆ ಎಂದು ಹೇಳಿದನು.


ಆದರೆ ಯೇಸು ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ಆತನ ಆಜ್ಞೆ ನಿತ್ಯಜೀವವಾಗಿದೆ ಎಂದು ಬಲ್ಲೆನು. ಆದದರಿಂದ ನಾನು ಮಾತಾಡುವದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತಾಡುತ್ತೇನೆ ಅಂದನು.


ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.


ಆಗ ನಿನ್ನ ಮಗನು ಬದುಕುತ್ತಾನೆಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದಾಯಿತೆಂದು ತಂದೆಯು ತಿಳುಕೊಂಡದರಿಂದ ಅವನೂ ಅವನ ಮನೆಯವರೆಲ್ಲರೂ ಆತನನ್ನು ನಂಬಿದರು.


ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು; ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.


ನಾನು ಅವರ ಹಿತವನ್ನೂ ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು; ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.


ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವದು; ನೀತಿವಂತನ ವಂಶವು ಶುಭಹೊಂದುವದು.


ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ಯುಗಯುಗಾಂತರಗಳವರೆಗೂ ಇರುತ್ತದೆ.


ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.


ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ಕಾಣೆನು.


ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕರು ಕೇಳಿ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.


ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು;


ಆ ಮನುಷ್ಯನ ಮನೆಯೊಳಗೆ ನಾವು ಸೇರಲು ಅವನು ನಮಗೆ - ಒಬ್ಬ ದೇವದೂತನು ನನ್ನ ಮನೆಯಲ್ಲಿ ನಿಂತಿರುವದನ್ನು ಕಂಡೆನು. ಆ ದೂತನು - ನೀನು ಯೊಪ್ಪಕ್ಕೆ ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರಿಸು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು