Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:16 - ಕನ್ನಡ ಸತ್ಯವೇದವು J.V. (BSI)

16 ಆಗ - ಯೋಹಾನನಂತೂ ನೀರಿನ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮದಲ್ಲಿ ಸ್ನಾನವಾಗುವದು ಎಂದು ಯೇಸುಸ್ವಾವಿು ಹೇಳಿದ ಮಾತು ನನ್ನ ನೆನಪಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ; “ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನಮಾಡಿಸಿದನು; ನಿಮಗಾದರೋ ಪವಿತ್ರಾತ್ಮನಲ್ಲಿ ಸ್ನಾನವಾಗುವುದು” ಎಂದು ಕರ್ತನು ಹೇಳಿದ ಮಾತುಗಳು ನನ್ನ ನೆನಪಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ನನಗೆ, ‘ಯೊವಾನ್ನನು ನೀರಿನಿಂದ ಸ್ನಾನದೀಕ್ಷೆಯನ್ನು ಕೊಟ್ಟನು. ನೀವಾದರೋ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನವನ್ನು ಪಡೆಯುವಿರಿ,’ ಎಂಬ ಪ್ರಭುವಿನ ಮಾತುಗಳು ನೆನಪಿಗೆ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ನಾನು ಪ್ರಭುವಿನ ಮಾತುಗಳನ್ನು ಜ್ಞಾಪಿಸಿಕೊಂಡೆನು. ‘ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ನೀವು ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಪಡೆಯುವಿರಿ!’ ಎಂದು ಪ್ರಭುವು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ‘ಯೋಹಾನನು ನೀರಿನಿಂದ ದೀಕ್ಷಾಸ್ನಾನ ಮಾಡಿಸಿದ್ದಾನೆ. ನೀವಾದರೋ ಪವಿತ್ರಾತ್ಮ ದೇವರಿಂದ ದೀಕ್ಷಾಸ್ನಾನ ಹೊಂದುವಿರಿ,’ ಎಂದು ಕರ್ತ ಯೇಸುವು ಹೇಳಿದ ಮಾತುಗಳನ್ನು ನಾನು ಆಗ ಜ್ಞಾಪಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ಮಿಯಾ ಧನಿಯಾಚಿ ಬೊಲ್ನಿ ಯಾದ್ ಕರುನ್ ಘೆಟಲ್ಲೊ, ಜುವಾಂವಾನ್ ಲೊಕಾಕ್ನಿ ಪಾನಿಯಾತ್ ಬಾಲ್ತಿಮ್ ಕರಸ್ಲ್ಯಾನ್, ಖರೆ ತುಮಿ ಪವಿತ್ರ್ ಆತ್ಮ್ಯಾತ್ ಬಾಲ್ತಿಮ್ ಕರುನ್ ಘೆತ್ಯಾಶಿ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:16
20 ತಿಳಿವುಗಳ ಹೋಲಿಕೆ  

ನಾನು ನಿಮಗೆ ನೀರಿನ ಸ್ನಾನ ಮಾಡಿಸಿದೆನು; ಆತನಾದರೋ ನಿಮಗೆ ಪವಿತ್ರಾತ್ಮದ ಸ್ನಾನಮಾಡಿಸುವನು ಎಂದು ಸಾರಿಹೇಳಿದನು.


ನನ್ನ ಗದರಿಕೆಯನ್ನು ಕೇಳಿ ತಿರುಗಿಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನನ್ನ ಮಾತುಗಳನ್ನು ನಿಮಗೆ ತಿಳಿಯಪಡಿಸುವೆನು.


ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.


ಯೋಹಾನನು ಅವರೆಲ್ಲರಿಗೆ - ನಾನಂತೂ ನಿಮಗೆ ನೀರಿನ ಸ್ನಾನ ಮಾಡಿಸುವವನು; ಆದರೆ ನನಗಿಂತ ಶಕ್ತನು ಬರುತ್ತಾನೆ. ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ನಾನು ಯೋಗ್ಯನಲ್ಲ. ಆತನು ಪವಿತ್ರಾತ್ಮದಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಯೆಹೂದ್ಯರಾಗಲಿ ಗ್ರೀಕರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗುವದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು; ಒಂದೇ ಆತ್ಮ ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿತು.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.


ಆ ಕಾಲ ಬಂದಾಗ ಆತನು ನಮಗೆ ಇಂಥಿಂಥದನ್ನು ಹೇಳಿದನಲ್ಲಾ ಎಂದು ನೀವು ನೆನಪಿಗೆ ತರುವಂತೆ ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.


ನನಗೂ ಆತನ ಗುರುತಿರಲಿಲ್ಲ; ಆದರೆ ನೀರಿನ ಸ್ನಾನವನ್ನು ಮಾಡಿಸುವದಕ್ಕೆ ನನ್ನನ್ನು ಕಳುಹಿಸಿದಾತನು - ಯಾವನ ಮೇಲೆ ಆತ್ಮವು ಇಳಿದುಬಂದು ಇರುವದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮದ ಸ್ನಾನವನ್ನು ಕೊಡುವವನು ಎಂದು ತಾನೇ ನನಗೆ ಹೇಳಿದನು.


ಅದಕ್ಕೆ ಯೋಹಾನನು - ನಾನು ನೀರಿನಿಂದ ಸ್ನಾನಮಾಡಿಸುವವನು; ಆದರೆ ನೀವು ಅರಿಯದೆ ಇರುವ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ;


ಆ ಕಾಲದಲ್ಲಿ ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವದು, ಗುಡ್ಡಗಳಿಂದ ಹಾಲುಹರಿಯುವದು, ಯೆಹೂದದ ತೊರೆಗಳಲ್ಲೆಲ್ಲಾ ನೀರು ತುಂಬಿರುವದು; ಯೆಹೋವನ ಆಲಯದೊಳಗಿಂದ ಬುಗ್ಗೆಯು ಉಕ್ಕಿಬಂದು ಜಾಲಿಯ ಹಳ್ಳವನ್ನು ತಂಪುಮಾಡುವದು.


ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು, ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು;


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ.


ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು


ಅವನ ಬಳಿಗೆ ಹೊರಟುಹೋಗಿ, ಅವರು ತಮ್ಮತಮ್ಮ ಪಾಪಗಳನ್ನು ಹೇಳಿಕೊಂಡು ಯೊರ್ದನ್‍ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು