Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:17 - ಕನ್ನಡ ಸತ್ಯವೇದವು J.V. (BSI)

17 ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಶಕ್ತನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರು ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರಕ್ಕೆ ಸರಿಯಾದ ವರವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವುದಕ್ಕೆ ನಾನು ಶಕ್ತನೋ? ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನುಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಂಬಿಕೆಯನ್ನಿಟ್ಟ ನಮಗೆ ಕೊಟ್ಟ ಪವಿತ್ರಾತ್ಮ ವರವನ್ನೇ ದೇವರು ಅವರಿಗೂ ಕೊಟ್ಟಿರಲು, ದೇವರಿಗೆ ಅಡ್ಡಿಮಾಡಲು ನಾನು ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಧನಿ ಜೆಜುಚ್ಯಾ ವರ್‍ತಿ ವಿಶ್ವಾಸ್ ಥವಲ್ಲ್ಯಾ ಅಮ್ಕಾ ದಿಲ್ಲಿ ವರುಚ್ ದೆವಾನ್ ಹ್ಯಾ ಲೊಕಾಕ್ನಿಬಿ ದಿಲ್ಯಾನ್, ಅಶೆ ರಾತಾನಾ ದೆವಾಚೆ ಕಾಮ್ ಇಬೆ ಕರುಕ್ ಮಿಯಾ ಕೊನ್? ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:17
14 ತಿಳಿವುಗಳ ಹೋಲಿಕೆ  

ನಮ್ಮ ಹಾಗೆಯೇ ಪವಿತ್ರಾತ್ಮವರವನ್ನು ಹೊಂದಿದ ಇವರಿಗೆ ನೀರಿನ ದೀಕ್ಷಾಸ್ನಾನವಾಗದಂತೆ ಯಾರಾದರೂ ಅಭ್ಯಂತರ ಮಾಡಾರೇ ಎಂದು ಹೇಳಿ


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬದಾಗಿ ನೀನು ಆತನೊಂದಿಗೆ ವ್ಯಾಜ್ಯವಾಡುವದೇಕೆ?


ನಾನು ಮಾತಾಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮ ವರವು ಮೊದಲು ನಮ್ಮ ಮೇಲೆ ಇಳಿದಂತೆ ಅವರ ಮೇಲೆಯೂ ಇಳಿಯಿತು.


ಅವರು ನಾನಾ ಭಾಷೆಗಳನ್ನಾಡುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಪೇತ್ರನ ಸಂಗಡ ಬಂದಿದ್ದ ಯೆಹೂದ್ಯರಾದ ವಿಶ್ವಾಸಿಗಳು ಕೇಳಿದಾಗ - ಅನ್ಯಜನಗಳಿಗೂ ಪವಿತ್ರಾತ್ಮ ದಾನ ಮಾಡಲ್ಪಟ್ಟಿದೆಯಲ್ಲಾ ಎಂದು ಅತ್ಯಾಶ್ಚರ್ಯಪಟ್ಟರು. ನಡೆದ ಸಂಗತಿಯನ್ನು ಪೇತ್ರನು ನೋಡಿ -


ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವದಕ್ಕೆ ನಿಮ್ಮಿಂದ ಆಗುವದಿಲ್ಲ. ನೀವು ಒಂದು ವೇಳೆ ದೇವರ ಮೇಲೆ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.


ಆಕ್ಷೇಪಕನು ಸರ್ವಶಕ್ತನ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು