Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:29 - ಕನ್ನಡ ಸತ್ಯವೇದವು J.V. (BSI)

29 ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರು ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮ ತಮ್ಮ ಶಕ್ತ್ಯನುಸಾರ ದ್ರವ್ಯ ಸಹಾಯಮಾಡಬೇಕೆಂದು ನಿಶ್ಚಯಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೂದಾಯದಲ್ಲಿ ವಾಸಿಸುತ್ತಿದ್ದ ಸಹೋದರರಿಗೆ ಸಹಾಯ ಒದಗಿಸಲು ಅನುಕೂಲಸ್ಥರಾದ ಶಿಷ್ಯರು ತಮ್ಮ ಶಕ್ತ್ಯಾನುಸಾರ ಕೊಡಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜುದೆಯ್ ಗಾಂವಾತ್ಲ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಮಜ್ಜತ್ ಕರುಚೆ ಮನುನ್ ದೆವಾಚ್ಯಾ ಲೊಕಾನಿ ಚಿಂತುನ್ ದೆವಾಚ್ಯಾ ಲೊಕಾತ್ನಿ ಹರ್ ಎಕ್ಲ್ಯಾನ್‍ಬಿ ಅಪ್ನಾಕ್ಡೆ ಕೌವ್ಡೆ ಹೊತಾ ತವ್ಡೆ ತೆಂಕಾ ಧಾಡುನ್ ದಿವ್ಕ್ ಯೆವ್ಜನ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:29
27 ತಿಳಿವುಗಳ ಹೋಲಿಕೆ  

ಆದರೆ ನೀವು ನಮ್ಮಲ್ಲಿರುವ ಬಡವರನ್ನು ಜ್ಞಾಪಕಮಾಡಿಕೊಳ್ಳಬೇಕೆಂಬ ಒಂದೇ ಸಂಗತಿಯನ್ನು ಬೇಡಿಕೊಂಡರು; ಇದನ್ನು ಮಾಡುವದರಲ್ಲಿ ನಾನೂ ಆಸಕ್ತನಾಗಿದ್ದೆನು.


ಮರ್ಯಾದೆಗೆಟ್ಟು ನಡೆಯುವದಿಲ್ಲ, ಸ್ವಪ್ರಯೋಜನವನ್ನು ಚಿಂತಿಸುವದಿಲ್ಲ, ಸಿಟ್ಟುಗೊಳ್ಳುವದಿಲ್ಲ, ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವದಿಲ್ಲ;


ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.


ಅನ್ಯಜನರು ಸಹ ದೇವರ ವಾಕ್ಯವನ್ನು ಅಂಗೀಕರಿಸಿದರೆಂಬ ಸಮಾಚಾರವನ್ನು ಅಪೊಸ್ತಲರೂ ಯೂದಾಯದಲ್ಲಿದ್ದ ಸಹೋದರರೂ ಕೇಳಿದರು.


ಅವರಲ್ಲಿ ಕೊರತೆಪಡುವವನು ಒಬ್ಬನೂ ಇರಲಿಲ್ಲ, ಯಾಕಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ


ನಾವು ನವ್ಮಿುಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು ಅನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.


ಅವರು ತಮ್ಮ ಸಾಮರ್ಥ್ಯಾನುಸಾರ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಎರಡು ಲಕ್ಷದ ಐವತ್ತು ಸಾವಿರ ತೊಲೆ ಬೆಳ್ಳಿ, ನೂರು ಯಾಜಕವಸ್ತ್ರಗಳು.


ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದರು.


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ಆ ದಿವಸಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್‍ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ - ದಿನದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವದಿಲ್ಲವೆಂದು ಗುಣುಗುಟ್ಟಿದರು.


ತರುವಾಯ ಊಟಮಾಡಿ ಬಲ ಹೊಂದಿದನು.


ಆದರೆ ಅವನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ ಒಂದು ಹೆಡಿಗೆಯಲ್ಲಿ ಕೂಡ್ರಿಸಿ ಗೋಡೆಯೊಳಗಿಂದ ಇಳಿಸಿದರು.


ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮಭರಿತರೂ ಆದರು.


ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು. ಮರುದಿನ ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವದಕ್ಕೂ ಕಾಣಿಕೆಗಳನ್ನು ಒಪ್ಪಿಸುವದಕ್ಕೂ ಬಂದೆನು.


ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು