Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:10 - ಕನ್ನಡ ಸತ್ಯವೇದವು J.V. (BSI)

10 ಅವರು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿದರು. ಪಟ್ಟಣದ ಕಡೆಯಿದ್ದ ಕಬ್ಬಿಣದ ದ್ವಾರದ ಬಳಿ ಬಂದರು. ಆ ದ್ವಾರ ತನ್ನಷ್ಟಕ್ಕೆ ತಾನೇ ತೆರೆಯಿತು. ಅವರು ಹೊರ ನಡೆದರು. ಬೀದಿಯೊಂದರಲ್ಲಿ ಹಾದುಹೋಗುತ್ತಿರಲು ಒಮ್ಮೆಲೆ ದೂತನು ಪೇತ್ರನನ್ನು ಬಿಟ್ಟು ಅದೃಶ್ಯನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪೇತ್ರನು ಮತ್ತು ದೇವದೂತನು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿಹೋದರು. ಬಳಿಕ ಅವರು ತಮ್ಮನ್ನು ಪಟ್ಟಣದತ್ತ ನಡೆಸುವ ಕಬ್ಬಿಣದ ಬಾಗಿಲಿಗೆ ಬಂದರು. ಆ ಬಾಗಿಲು ಅವರಿಗಾಗಿ ತನ್ನಷ್ಟಕ್ಕೆ ತಾನೇ ತೆರೆದುಕೊಂಡಿತು. ಪೇತ್ರ ಮತ್ತು ಆ ದೇವದೂತನು ಬಾಗಿಲ ಮೂಲಕ ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು. ಆಗ ಇದ್ದಕ್ಕಿದ್ದಂತೆ ಆ ದೇವದೂತನು ಅವನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣದೊಳಗೆ ನಡೆಸುವ ಕಬ್ಬಿಣದ ದ್ವಾರಕ್ಕೆ ಅವರು ಬಂದರು. ಅದು ತನ್ನಷ್ಟಕ್ಕೆ ತಾನೇ ತೆರೆಯಲು ಅವರು ಅದನ್ನು ದಾಟಿ ಹೊರಗೆ ಬಂದರು. ಒಂದು ಬೀದಿಯನ್ನು ದಾಟುವವರೆಗೆ ನಡೆದು ಬಂದ ನಂತರ ಫಕ್ಕನೆ ದೇವದೂತನು ಪೇತ್ರನನ್ನು ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವಾಚೊ ದುತ್ ಅನಿ ಪೆದ್ರುನ್ ಅದ್ದಿಚಿ ಅನಿ ದೊನ್ವೆಚಿ ರಾಕ್ವನ್ ಹೊತ್ತೆ ಜಾಗೆ ದಾಟ್ಲ್ಯಾನಿ, ಮಾನಾ ತೆನಿ ಅಪ್ಲ್ಯಾ ಗಾಂವಾಕ್ಡೆ ಜಾತಲ್ಯಾ ಲೊಂಗ್ಟಾಂಚ್ಯಾ ದಾರಾಕ್ಡೆ ಯೆಲೆ, ತೆ ದಾರ್ ಅಪ್ಲ್ಯಾ ಯೆವ್ಡ್ಯಾಕುಚ್ ಅಪ್ನಿ ಉಗಡ್ಲೆ ಪೆದ್ರು ಅನಿ ದೆವಾಚೊ ದುತ್ ತ್ಯಾ ದಾರಾನಿ ಭಾಯ್ರ್ ಯೆವ್ನ್ ಉಲ್ಲೆ ದುರ್ ಗೆಲ್ಲ್ಯಾ ತನ್ನಾ ದೆವ್ ದುತ್ ಪೆದ್ರುಕ್ ಸೊಡುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:10
11 ತಿಳಿವುಗಳ ಹೋಲಿಕೆ  

ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು -


ಅಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.


ಅದೇ ದಿವಸದ ಅಂದರೆ ವಾರದ ಮೊದಲನೆಯ ದಿವಸದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಲುಗಳನ್ನು ಮುಚ್ಚಿಕೊಂಡಿರಲು ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.


ಬಳಿಕ ಅವನು ಸಿಂಹಧ್ವನಿಯಿಂದ - ಕರ್ತನೇ, ಹಗಲೆಲ್ಲಾ ಕೋವರದಲ್ಲಿ ನಿಂತಿದ್ದೇನೆ, ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ;


ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ವಿಧಿಯೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.


ಅವರೆಲ್ಲರನ್ನೂ ಮೂರು ದಿನಗಳವರೆಗೂ ಕಾವಲಲ್ಲಿರಿಸಿದನು.


ಅವರನ್ನು ಮೈಗಾವಲಿನವರ ದಳವಾಯಿಯ ಮನೆಯೊಳಗೆ ಕಾವಲಲ್ಲಿರಿಸಿದನು.


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಅವನನ್ನು ಪಸ್ಕಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.


ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ತಿರಿಗಿ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ನಡುವೆ ನಿಂತು - ನಿಮಗೆ ಸಮಾಧಾನವಾಗಲಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು