Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:11 - ಕನ್ನಡ ಸತ್ಯವೇದವು J.V. (BSI)

11 ಆಗ ಪೇತ್ರನು ಎಚ್ಚರವಾಗಿ - ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿದುಬಂದಿದೆ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಪೇತ್ರನು ಎಚ್ಚರಗೊಂಡು; “ಕರ್ತನು ತನ್ನ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ, ಯೆಹೂದ್ಯಜನರು ನನಗೆ ಮಾಡಬೇಕೆಂದಿದ್ದ ಕೇಡಿನಿಂದಲೂ, ನನ್ನನ್ನು ಬಿಡಿಸಿದನೆಂದು ನನಗೀಗ ನಿಜವಾಗಿ ತಿಳಿಯಿತು” ಎಂದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಡೆದ ಸಂಗತಿಯನ್ನು ಆಗ ಅರಿತುಕೊಂಡ ಪೇತ್ರನು, “ಪ್ರಭುವು ನನ್ನ ಬಳಿಗೆ ತನ್ನ ದೇವದೂತನನ್ನು ನಿಜವಾಗಿಯೂ ಕಳುಹಿಸಿದನೆಂದು ಈಗ ನನಗೆ ತಿಳಿಯಿತು. ಆತನು ನನ್ನನ್ನು ಹೆರೋದನ ಕೈಯಿಂದ ಪಾರುಮಾಡಿದನು. ನನಗೆ ಕೇಡು ಸಂಭವಿಸುತ್ತದೆಯೆಂದು ಯೆಹೂದ್ಯರು ಯೋಚಿಸಿಕೊಂಡಿದ್ದರು. ಆದರೆ ಪ್ರಭುವು ನನ್ನನ್ನು ಆ ಕೇಡಿನಿಂದ ರಕ್ಷಿಸಿದನು” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಪೇತ್ರನು ಸಂಪೂರ್ಣವಾಗಿ ಎಚ್ಚರಗೊಂಡು, “ಈಗ ಕರ್ತದೇವರು ತಮ್ಮ ದೂತನನ್ನು ಕಳುಹಿಸಿ ಹೆರೋದನ ಹಿಡಿತದಿಂದಲೂ ಯೆಹೂದ್ಯ ಜನರು ನಿರೀಕ್ಷಿಸುತ್ತಿದ್ದ ಎಲ್ಲಾ ಕೇಡಿನಿಂದಲೂ ನನ್ನನ್ನು ಉಳಿಸಿ ಕಾಪಾಡಿರುವರು ಎಂದು ಈಗ ನನಗೆ ಗೊತ್ತಾಗಿದೆ,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಹೊಲ್ಲಿ ಸಂಗ್ತಿಯಾ ತನ್ನಾ ಪೆದ್ರುನ್ ಕಳ್ವುನ್ ಘೆವ್ನ್ “ಧನಿಯಾನ್ ದೆವಾಚ್ಯಾ ದುತಾಕ್ ಖರೆಬಿ ಮಾಜ್ಯಾಕ್ಡೆ ಧಾಡುನ್ ದಿಲ್ಯಾನ್ ಮನ್ತಲೆ ಮಾಕಾ ಅತ್ತಾ ಕಳ್ಳೆ, ತೆನಿ ಮಾಕಾ ಹೆರೊದ್ ರಾಜಾಚ್ಯಾ ಹಾತಿತ್ನಾ ಪಾರ್ ಕರ್‍ಲ್ಯಾನ್, ಜುದೆವಾಂಚ್ಯಾ ಲೊಕಾನಿ ಮಾಕಾ ಬುರ್ಶೆ ಹೊತಾ ಮನುನ್ ಚಿಂತಲ್ಯಾನಿ, ಖರೆ ಧನಿಯಾನ್ ಮಾಕಾ ತರಾಸಾತ್ನಾ ರಾಕ್ವನ್ ಕರ್‍ಲ್ಯಾನ್” ಮನುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:11
27 ತಿಳಿವುಗಳ ಹೋಲಿಕೆ  

ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು.


ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.


ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.


ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುತ್ತಾನೆ.


ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು -


ಆಗ ಅವನಿಗೆ ಬುದ್ಧಿ ಬಂದು ಅವನು - ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತೇನೆ.


ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು. ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ - ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.


ಅದಕ್ಕೆ ಅವನು - ಇಗೋ, ಕಟ್ಟಿಲ್ಲದ ನಾಲ್ವರನ್ನು ನೋಡುತ್ತೇನೆ, ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ, ಅವರಿಗೆ ಯಾವ ಹಾನಿಯೂ ಇಲ್ಲ; ನಾಲ್ಕನೆಯವನ ರೂಪವು ದೇವಕುಮಾರನ ರೂಪದಂತಿದೆ ಎಂದು ಹೇಳಿ


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಯೆಹೋವನನ್ನು ಪ್ರೀತಿಸುವವರೇ, ಕೆಟ್ಟತನವನ್ನು ಹಗೆಮಾಡಿರಿ. ಆತನು ತನ್ನ ಭಕ್ತರ ಪ್ರಾಣಗಳನ್ನು ಕಾಯುವವನಾಗಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು.


ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು -


ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನೇ, ಅವನನ್ನು ಶತ್ರುಗಳ ಅಧೀನಕ್ಕೆ ಕೊಡಬೇಡ!


ಯೆಹೋವನು ತನ್ನ ಸೇವಕರ ಪ್ರಾಣವನ್ನು ವಿಮೋಚಿಸುತ್ತಾನೆ; ಆತನ ಆಶ್ರಿತರಲ್ಲಿ ಒಬ್ಬರಾದರೂ ಅಪರಾಧಿಯೆಂದು ಎಣಿಸಲ್ಪಡುವದಿಲ್ಲ.


ನನ್ನ ಗುಡಾರದ ಆಳುಗಳು - ನಮ್ಮ ಯಜಮಾನನಿಕ್ಕಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂಬ ಕೋರಿಕೆಯಿಂದ ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟುಹೋದನು.


ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.


ಆಗ ಅವನು ಇಸಾಕನನ್ನು ಕರೆಸಿ - ನಿಶ್ಚಯವಾಗಿ ಈಕೆಯು ನಿನ್ನ ಹೆಂಡತಿಯಲ್ಲವೇ, ತಂಗಿ ಅಂತ ಯಾಕೆ ಹೇಳಿದಿ ಎಂದು ಕೇಳಲು ಇಸಾಕನು - ಜನರು ಈಕೆಯ ನಿವಿುತ್ತ ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆನು ಅಂದನು.


ಯೆಹೋವನು ಅಬ್ರಹಾಮನಿಗೆ - ಸಾರಳು ನಕ್ಕು ಮುದುಕಿಯಾದ ನಾನು ಮಗುವನ್ನು ಹೆರುವದಾದೀತೇ ಎಂದು ಹೇಳಿದ್ದೇನು?


ಆಗ ಯೆಹೋವನು ಅವನಿಗೆ - ನೀನು ಚೆನ್ನಾಗಿ ತಿಳಿಯತಕ್ಕದ್ದೇನಂದರೆ - ನಿನ್ನ ಸಂತತಿಯವರು ಅನ್ಯದೇಶದಲ್ಲಿ ಕೆಲವು ಕಾಲವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರುಷ ಆ ದೇಶದವರಿಂದ ಬಾಧೆಪಡುವರು.


ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಪೌಲನನ್ನು - ನೀನು ಯೆರೂಸಲೇವಿುಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟವುಂಟೋ? ಎಂದು ಕೇಳಲು


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು