Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:19 - ಕನ್ನಡ ಸತ್ಯವೇದವು J.V. (BSI)

19 ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದದರಿಂದ ಕಾವಲುಗಾರರನ್ನು ವಿಚಾರಣೆಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನನ್ನು ಹುಡುಕಿತರುವಂತೆ ಹೆರೋದನು ಆಜ್ಞಾಪಿಸಿದನು. ಆದರೆ ಅವನನ್ನು ಕಂಡುಹಿಡಿಯಲು ಅವರಿಂದಾಗಲಿಲ್ಲ. ಆದುದರಿಂದ ಪಹರೆಯವರನ್ನೇ ವಿಚಾರಣೆಗೆ ಗುರಿಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಇದಾದ ಬಳಿಕ ಹೆರೋದನು ಜುದೇಯದಿಂದ ಹೊರಟು ಕೊಂಚಕಾಲ ಸೆಜರೇಯದಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು. ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹೆರೋದನು ಅವನನ್ನು ಹುಡುಕಿ ಕಾಣದೆ ಹೋದದ್ದರಿಂದ ಕಾವಲುಗಾರರನ್ನು ವಿಚಾರಿಸಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಅನಂತರ ಹೆರೋದನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಸ್ವಲ್ಪ ಸಮಯ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಖೈ ಹುಡಕ್ಲ್ಯಾರ್ಬಿ ಹೆರೊದಾಕ್ಡೆ ಪೆದ್ರುಕ್ ಹುಡ್ಕುನ್ ಕಾಡುಕ್ ಹೊವ್ಕ್ ನಾ, ತಸೆ ಹೊವ್ನ್ ತೆನಿ ರಾಕ್ವಲ್ಯಾಕ್ನಿ ಇಚಾರುನ್ ತೆಂಕಾ ಮರ್ನ್ನಾಚಿ ಶಿಕ್ಷಾ ದಿಲ್ಯಾನ್, ಮಾನಾ ಹೆರೊದಾನ್ ಜುದೆಯಾ ಮನ್ತಲ್ಯಾ ಶಾರಾತ್ನಾ ಸೆಜರೆಯ ಮನ್ತಲ್ಯಾ ಶಾರಾಕ್ ಜಾವ್ನ್ ಥೊಡೆ ದಿಸಾ ಥೈಚ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:19
19 ತಿಳಿವುಗಳ ಹೋಲಿಕೆ  

ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯ ಮಾಡಿಕೊಳ್ಳಬೇಕೆಂದಿದ್ದನು.


ಮರುದಿನ ಹೊರಟು ಕೈಸರೈಯಕ್ಕೆ ಬಂದು ಸೌವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳ್ವರಲ್ಲಿ ಒಬ್ಬನು.


ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿವಸದ ಹಿಂದಿನ ರಾತ್ರಿಯಲ್ಲಿ ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ ಇಬ್ಬರು ಸಿಪಾಯಿಗಳ ನಡುವೆ ನಿದ್ದೆ ಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.


ಅವನನ್ನು ಪಸ್ಕಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.


ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.


ಅವರು ಹೋದ ಮೇಲೆ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು - ನೀನು ಎದ್ದು ಈ ಕೂಸನ್ನೂ ಇದರ ತಾಯಿಯನ್ನೂ ಕರಕೊಂಡು ಐಗುಪ್ತದೇಶಕ್ಕೆ ಓಡಿಹೋಗಿ ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು ಅಂದನು.


ಮೊರ್ದೆಕೈಯು ತಿರಿಗಿ ಅರಮನೆಯ ಬಾಗಲಿಗೆ ಹೋದನು. ಹಾಮಾನನಾದರೋ ಶೋಕಾರ್ತನಾಗಿ ಮೋರೆಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ


ಇಸ್ರಾಯೇಲ್ಯರ ಅರಸನು ಸಿಟ್ಟಿನಿಂದ ಗಂಟುಮೋರೆಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು.


ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದು ಕಡೆಗೆ ಜೀಫ್ ಅರಣ್ಯದ ಪರ್ವತ ಪ್ರಾಂತಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ದಿನಂಪ್ರತಿಯೂ ಅವನನ್ನು ಹುಡುಕುತ್ತಿದ್ದರೂ ದೇವರು ಇವನ ಕೈಗೆ ಒಪ್ಪಿಸಲಿಲ್ಲ.


ಸೆರೆಯವರಲ್ಲಿ ಕೆಲವರು ಈಜಿ ತಪ್ಪಿಸಿಕೊಂಡಾರೆಂದು ಸಿಪಾಯಿಗಳು ಅವರನ್ನು ಕೊಲ್ಲಬೇಕೆಂಬದಾಗಿ ಆಲೋಚನೆ ಹೇಳಿದರು.


ಕೆಲವು ದಿವಸಗಳು ಗತಿಸಿದ ನಂತರ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಫೆಸ್ತನ ದರ್ಶನಮಾಡಿಕೊಳ್ಳುವದಕ್ಕೆ ಕೈಸರೈಯಕ್ಕೆ ಬಂದರು.


ಆಗ ಹೆರೋದನು ತನಗೆ ಜೋಯಿಸರು ಮೋಸ ಮಾಡಿದರೆಂದು ತಿಳಿದು ಬಹಳ ಸಿಟ್ಟಾಗಿ ಆಳುಗಳನ್ನು ಕಳುಹಿಸಿ ತಾನು ಜೋಯಿಸರಿಂದ ತಿಳುಕೊಂಡ ಕಾಲಕ್ಕೆ ಸರಿಯಾಗಿ, ಬೇತ್ಲೆಹೇವಿುನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಎರಡು ವರುಷದೊಳಗಿನ ಗಂಡುಕೂಸುಗಳನ್ನೆಲ್ಲಾ ಕೊಲ್ಲಿಸಿದನು.


ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನೂ ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.


ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -


ಬೆಳಗಾದ ಮೇಲೆ ಪೇತ್ರನು ಏನಾದನೆಂದು ಸಿಪಾಯಿಗಳಲ್ಲಿ ಬಹಳ ಕಳವಳ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು