Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:3 - ಕನ್ನಡ ಸತ್ಯವೇದವು J.V. (BSI)

3 ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ನೋಡಿ ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಹಿಡಿಸಿದನು. ಆ ಕಾಲದಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದರಿಂದ ಯೆಹೂದ್ಯರಿಗೆ ಮೆಚ್ಚುಗೆಯಾಯಿತೆಂದು ತಿಳಿದು ಪೇತ್ರನನ್ನು ಬಂಧಿಸಿದನು. (ಆಗ ಹುಳಿರಹಿತ ರೊಟ್ಟಿಯ ಹಬ್ಬ ನಡೆಯುತ್ತಿತ್ತು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೂದ್ಯರು ಇದನ್ನು ಮೆಚ್ಚಿಕೊಂಡರೆಂಬುದು ಹೆರೋದನಿಗೆ ತಿಳಿಯಿತು. ಆದ್ದರಿಂದ ಅವನು ಪೇತ್ರನನ್ನು ಬಂಧಿಸಿ (ಇದು ನಡೆದದ್ದು ಯೆಹೂದ್ಯರ ಪಸ್ಕಹಬ್ಬದ ಕಾಲದಲ್ಲಿ) ಸೆರೆಮನೆಗೆ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದರಿಂದ ಯೆಹೂದ್ಯರಿಗೆ ಮೆಚ್ಚಿಕೆಯಾಯಿತೆಂದು ತಿಳಿದಾಗ, ಅವನು ಪೇತ್ರನನ್ನು ಬಂಧಿಸಿದನು. ಇದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಸಮಯದಲ್ಲಿ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜುದೆವಾಂಚ್ಯಾ ಲೊಕಾಕ್ನಿ ಹೆ ಸಗ್ಳೆ ಬರೆ ದಿಸ್ಲಿ ಮನ್ತಲೆ ಹೆರೊದಾನ್ ಕಳ್ವುನ್ ಘೆಟ್ಲ್ಯಾನ್, ತಸೆ ಹೊವ್ನ್ ತೆನಿ ಪೆದ್ರುಕ್ ಭಾಂದುನ್ ಬಂಧಿಖಾನ್ಯಾತ್ ಘಾಲುಕ್ ಲಾವ್ಲ್ಯಾನ್, ತನ್ನಾ ಫುಗ್ ನಸಲ್ಲ್ಯಾ ಭಾಕ್ರಿಯಾಂಚೊ ಸನ್ ಚಲಿತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:3
18 ತಿಳಿವುಗಳ ಹೋಲಿಕೆ  

ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ಮಾಸದಲ್ಲೇ ಐಗುಪ್ತದೇಶದಿಂದ ಹೊರಟುಬಂದಿರಲ್ಲಾ. ಒಬ್ಬನೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಕೂಡದು.


ಎರಡು ವರುಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂಬ ಕೋರಿಕೆಯಿಂದ ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟುಹೋದನು.


ಯಾಕಂದರೆ ದೇವರಿಂದ ಬರುವ ಮಾನಕ್ಕಿಂತ ಮನುಷ್ಯರಿಂದ ಬರುವ ಮಾನವೇ ಅವರಿಗೆ ಇಷ್ಟವಾಗಿತ್ತು.


ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಪೌಲನನ್ನು - ನೀನು ಯೆರೂಸಲೇವಿುಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟವುಂಟೋ? ಎಂದು ಕೇಳಲು


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿವಸಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸದಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿವಸಗಳಿದ್ದೆವು.


ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನಲ್ಲಾ ಎಂದು ಯೋಚಿಸುವವರಾಗಿ ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತಾಡುತ್ತೇವೆ.


ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯೌವನಸ್ಥನಾಗಿದ್ದಾಗ ನೀನೇ ನಡುವನ್ನು ಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿಕೊಂಡು ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂಡು ಹೋಗುವನು ಎಂದು ಹೇಳಿದನು.


ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು - ಪಸ್ಕದ ಊಟಮಾಡುವದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕೆನ್ನುತ್ತೀ ಎಂದು ಕೇಳಲು


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.


ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಪ್ರಸಂಗ ಮಾಡಿದನು - ಯೆಹೂದ್ಯರೇ, ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಜನರೇ, ಈ ಸಂಗತಿಯು ಏನೆಂದು ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತಿಗೆ ಕಿವಿಗೊಡಿರಿ;


ಅವನನ್ನು ಪಸ್ಕಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು