Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:4 - ಕನ್ನಡ ಸತ್ಯವೇದವು J.V. (BSI)

4 ಅವನನ್ನು ಪಸ್ಕಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನನ್ನು ಪಸ್ಕ ಹಬ್ಬವಾದ ಮೇಲೆ ಜನರ ಮುಂದೆ ತರಿಸಬೇಕೆಂಬ ಯೋಚನೆಯಿಂದ ಸೆರೆಯಲ್ಲಿ ಹಾಕಿಸಿ ಅವನನ್ನು ಕಾಯಲಿಕ್ಕೆ ನಾಲ್ಕು ನಾಲ್ಕು ಸಿಪಾಯಿಗಳಿದ್ದ ನಾಲ್ಕು ಗುಂಪುಗಳ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಪೇತ್ರನನ್ನು ಬಂಧಿಸಿದ ನಂತರ ಅವನನ್ನು ಸೆರೆಮನೆಯಲ್ಲಿ ಹಾಕಿದನು. ಪೇತ್ರನನ್ನು ಕಾಯಲು ನಾಲ್ಕು ದಳಗಳನ್ನು ನೇಮಿಸಿದನು. ಒಂದೊಂದು ದಳದಲ್ಲಿಯೂ ನಾಲ್ಕು ಸಿಪಾಯಿಗಳಿದ್ದರು. ಪಸ್ಕಹಬ್ಬ ಮುಗಿದ ತರುವಾಯ ಪೇತ್ರನನ್ನು ಬಹಿರಂಗ ವಿಚಾರಣೆಗೆ ತರಬೇಕೆಂದು ಉದ್ದೇಶಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸೊಳಾ ಸೈನಿಕಾ ಪೆದ್ರುಕ್ ರಾಕ್ವಲಿ ಹೊತ್ತೆ, ಪಾಸ್ಕಾಚೊ ಸನ್ ಸರಲ್ಯಾ ತನ್ನಾ ತೆಕಾ ಲೊಕಾಂಚ್ಯಾ ಇದ್ರಾಕ್ ಹಾನುನ್ ಇಬೆ ಕರುಚೆ ಮನುನ್ ಘೆಟಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:4
22 ತಿಳಿವುಗಳ ಹೋಲಿಕೆ  

ಆದರೆ ಅವನು - ಸ್ವಾಮೀ, ನಿನ್ನ ಸಂಗಡ ಸೆರೆಮನೆಗೆ ಹೋಗುವದಕ್ಕೂ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅನ್ನಲು


ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ; ಯೆಹೋವನ ಸಂಕಲ್ಪವೇ ಈಡೇರುವದು.


ಆದರೆ ಇವೆಲ್ಲಾ ನಡೆಯುವದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಗಳ ಅಧಿಕಾರಸ್ಥರ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿವಿುತ್ತವಾಗಿ ಅರಸುಗಳ ಮುಂದಕ್ಕೂ ಅಧಿಪತಿಗಳ ಮುಂದಕ್ಕೂ ತೆಗೆದುಕೊಂಡುಹೋಗಿ ಹಿಂಸೆಪಡಿಸುವರು.


ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇವಿುಸಿದ್ದನ್ನೇ ನಡಿಸಿದರು.


ಅವರನ್ನು ಹಿಡಿದು ಆಗಲೇ ಸಾಯಂಕಾಲವಾಗಿದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.


ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯೌವನಸ್ಥನಾಗಿದ್ದಾಗ ನೀನೇ ನಡುವನ್ನು ಕಟ್ಟಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದಿ; ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿಕೊಂಡು ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ತೆಗೆದುಕೊಂಡು ಹೋಗುವನು ಎಂದು ಹೇಳಿದನು.


ಆದರೂ - ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು ಎಂದು ಮಾತಾಡಿಕೊಂಡರು.


ಆಗ ನಿಮ್ಮನ್ನು ಉಪದ್ರವಕ್ಕೆ ಒಪ್ಪಿಸಿ ಕೊಲ್ಲುವರು; ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ಹಗೆ ಮಾಡುವರು.


ನಾಳೆ ಎಂದು ಕೊಚ್ಚಿಕೊಳ್ಳಬೇಡ; ಒಂದು ದಿನದೊಳಗೇ ಏನಾಗುವದೋ ನಿನಗೆ ತಿಳಿಯದು.


ಪತ್ರಗಳು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳುಹಿಸಲ್ಪಟ್ಟವು. ಅವುಗಳಲ್ಲಿ - ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುನ ಮಾಸದ ಹದಿಮೂರನೆಯ ದಿನದಲ್ಲಿ ಹುಡುಗರು, ಮುದುಕರು, ಹೆಂಗಸರು, ಮಕ್ಕಳು ಎಂದು ನೋಡದೆ ಎಲ್ಲಾ ಯೆಹೂದ್ಯರನ್ನು ಕೊಲ್ಲಿರಿ, ಸಂಹರಿಸಿರಿ, ನಿರ್ನಾಮಗೊಳಿಸಿರಿ, ಅವರ ಸೊತ್ತನ್ನು ಸೂರೆಮಾಡಿರಿ ಎಂದೂ


ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳು ಮಾಡುತ್ತಿದ್ದನು.


ಮತಾಭಿಮಾನದಿಂದ ತುಂಬಿದವರಾಗಿ ಅಪೊಸ್ತಲರನ್ನು ಹಿಡಿದು ಪಟ್ಟಣದ ಕಾವಲಿನಲ್ಲಿಟ್ಟರು.


ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ಮೇಲುಹೊದಿಕೆಗಳನ್ನು ತಕ್ಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಪಾಲಿನ ಪ್ರಕಾರ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಅಖಂಡವಾಗಿ ಹೆಣೆದದ್ದಾಗಿತ್ತು.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಐಗುಪ್ತದೇಶದಲ್ಲಿ ಯೆಹೋವನು ಮೋಶೆ ಆರೋನರ ಸಂಗಡ ಮಾತಾಡಿ ಇಂತೆಂದನು -


ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.


ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ನೋಡಿ ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಹಿಡಿಸಿದನು. ಆ ಕಾಲದಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.


ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ ಸಭೆಯವರು ಆತನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು