Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:8 - ಕನ್ನಡ ಸತ್ಯವೇದವು J.V. (BSI)

8 ಆ ದೂತನು ಅವನಿಗೆ - ನಡುಕಟ್ಟಿಕೊಂಡು ನಿನ್ನ ಕೆರಗಳನ್ನು ಮೆಟ್ಟಿಕೋ ಎಂದು ಹೇಳಲು ಅವನು ಹಾಗೇ ಮಾಡಿದನು. ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೂತನು ಅವನಿಗೆ, “ಬಟ್ಟೆಯನ್ನು ತೊಟ್ಟುಕೋ, ಪಾದರಕ್ಷೆಯನ್ನು ಮೆಟ್ಟಿಕೋ,” ಎಂದನು. ಪೇತ್ರನು ಹಾಗೆಯೇ ಮಾಡಿದನು. ಅನಂತರ ದೂತನು, “ನಿನ್ನ ಮೇಲುಹೊದಿಕೆಯನ್ನು ಹೊದ್ದುಕೊಂಡು ನನ್ನ ಜೊತೆ ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವದೂತನು ಪೇತ್ರನಿಗೆ, “ಬಟ್ಟೆ ಧರಿಸಿಕೊ, ಪಾದರಕ್ಷೆಗಳನ್ನು ಮೆಟ್ಟಿಕೊ” ಎಂದು ಹೇಳಿದನು. ಅಂತೆಯೇ ಪೇತ್ರನು ಮಾಡಿದನು. ಬಳಿಕ ದೇವದೂತನು, “ನಿನ್ನ ಮೇಲಂಗಿಯನ್ನು ಧರಿಸಿಕೊಂಡು ನನ್ನನ್ನು ಹಿಂಬಾಲಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಿನ್ನ ಬಟ್ಟೆಗಳನ್ನೂ ಮೆಟ್ಟುಗಳನ್ನೂ ಧರಿಸಿಕೋ,” ಎಂದು ದೇವದೂತನು ಅವನಿಗೆ ಹೇಳಲು, ಪೇತ್ರನು ಅದರಂತೆ ಮಾಡಿದನು. “ನಿನ್ನ ನಿಲುವಂಗಿಯನ್ನು ಸುತ್ತಿಕೊಂಡು ನನ್ನನ್ನು ಹಿಂಬಾಲಿಸು,” ಎಂದು ದೇವದೂತನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ದೆವಾಚ್ಯಾ ದುತಾನ್ ಪೆದ್ರುಕ್, “ಕಪ್ಡೆ ನೆಸುನ್ ಘೆ; ಅನಿ ವ್ಹಾನಾಯ್ಯಾ ಘಾಲುನ್ ಘೆ” ಮನುನ್ ಸಾಂಗ್ಲ್ಯಾನ್. ಪೆದ್ರುನ್ ತಸೆಚ್ ಕರ್‍ಲ್ಯಾನ್, ಮಾನಾದೆವ್ ದುತಾನ್ ತುಜೊ ಝಗೊ ಬಾಂಧುನ್ ಘೆವ್ನ್ ಮಾಜ್ಯಾ ಫಾಟ್ನಾ ಯೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:8
7 ತಿಳಿವುಗಳ ಹೋಲಿಕೆ  

ನಾನಂತೂ ನಿಮ್ಮ ಮನಸ್ಸು ತಿರುಗಿಕೊಳ್ಳಬೇಕೆಂಬದಕ್ಕೆ ನಿಮಗೆ ನೀರಿನಲ್ಲಿ ಸ್ನಾನಮಾಡಿಸುತ್ತೇನೆ. ಆದರೆ ನನ್ನ ಹಿಂದೆ ಬರುವವನು ನನಗಿಂತ ಶಕ್ತನು; ಆತನ ಕೆರಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ಸ್ನಾನಮಾಡಿಸುವನು.


ಯಜಮಾನನು ಬಂದು ಯಾವ ಯಾವ ಆಳುಗಳು ಎಚ್ಚರವಾಗಿರುವದನ್ನು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಆತನೇ ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಹತ್ತಿರಕ್ಕೆ ಬಂದು ಅವರಿಗೆ ಸೇವೆಮಾಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಫಕ್ಕನೆ ಕರ್ತನ ದೂತನು ಪೇತ್ರನೆದುರಿಗೆ ನಿಂತನು. ಅವನಿದ್ದ ಕೋಣೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ - ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಗೆ ಹಾಕಿದ್ದ ಸರಪಣಿಗಳು ಕಳಚಿಬಿದ್ದವು.


ಅವನು ಹೊರಗೆ ಬಂದು ಆ ದೂತನ ಹಿಂದೆಯೇ ಹೋಗುತ್ತಾ ದೂತನ ಮೂಲಕವಾಗಿ ನಡೆದ ಸಂಗತಿ ನಿಜವಾದದ್ದೆಂದು ತಿಳಿಯದೆ ತಾನು ನೋಡಿದ್ದು ಕನಸು ಎಂದು ನೆನಸಿದನು.


ಕೆರಗಳನ್ನು ಮೆಟ್ಟಿಕೊಳ್ಳಬಹುದು. ಎರಡು ಅಂಗಿಗಳನ್ನು ತೊಟ್ಟುಕೊಳ್ಳಬೇಡಿರಿ ಎಂದು ಅಪ್ಪಣೆಕೊಟ್ಟನು.


ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ - ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇವಿುನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು.


ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು