Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:1 - ಕನ್ನಡ ಸತ್ಯವೇದವು J.V. (BSI)

1 ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರಂದರೆ - ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಉಪರಾಜನಾದ ಹೆರೋದನ ಸಾಕತಮ್ಮನಾದ ಮೆನಹೇನ, ಸೌಲ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಂತಿಯೊಕ್ಯ್ ಮನ್ತಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ಥೊಡಿ ಲೊಕಾ ಪ್ರವಾದಿಯಾ ಅನಿ ಥೊಡೆ ಶಿಕಾಪಾ ಕರ್‍ತಲೆ ಹೊತ್ತೆ ತೆನಿ ಕೊನ್ ಮಟ್ಲ್ಯಾರ್ : ಬಾರ್ನಾಬಾಸ್, ನಿಗರ್ ಮನುನ್ ಬಲ್ವುತಲೊ ಸಿಮಾವ್, ಅನಿ ಸಿರೆನ್ ಮನ್ತಲ್ಯಾ ಶಾರಾತ್ಲೊ ಮೆನಹೆನ್ ಮನ್ತಲೊ ಅನಿ ಸಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:1
34 ತಿಳಿವುಗಳ ಹೋಲಿಕೆ  

ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಅಂದರೆ ಧೈರ್ಯದಾಯಕ ಎಂದು ಹೆಸರಿಟ್ಟಿದ್ದರು.


ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.


ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ -


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸೌವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.


ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋದರರನ್ನು ಅನೇಕ ಮಾತುಗಳಿಂದ ಪ್ರಬೋಧಿಸಿ ದೃಢಪಡಿಸಿದರು.


ಚಕ್ರವರ್ತಿಯಾದ ತಿಬೇರಿಯನು ಪಟ್ಟಕ್ಕೆ ಬಂದ ಹದಿನೈದನೆಯ ವರುಷದಲ್ಲಿ, ಪೊಂತ್ಯಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಉಪರಾಜನೂ ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ


ಇಲ್ಲಿರುವ ದೇವಜನರು ನಿಮ್ಮನ್ನು ವಂದಿಸುತ್ತಾರೆ. ಚಕ್ರವರ್ತಿಯ ಅರಮನೆಗೆ ಸೇರಿದವರು ವಿಶೇಷವಾದ ವಂದನೆಗಳನ್ನು ಹೇಳುತ್ತಾರೆ.


ಇದಲ್ಲದೆ ವಿುಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟ ಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.


ಅಥವಾ, ಕೈಕೆಲಸವನ್ನು ಮಾಡದೆ ಜೀವಿಸುವದಕ್ಕೆ ನನಗೂ ಬಾರ್ನಬನಿಗೂ ಮಾತ್ರ ಹಕ್ಕಿಲ್ಲವೇನು?


ನನ್ನ ಜೊತೆಕೆಲಸದವನಾದ ತಿಮೊಥೆಯನೂ ನನ್ನ ಸ್ವಜನರಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ಅವನಿಗೆ ಮದುವೆಯಾಗದ ನಾಲ್ಕು ಮಂದಿ ಹೆಣ್ಣುಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.


ಪೌಲನು ಅವರ ಮೇಲೆ ಕೈಗಳನ್ನಿಡಲು ಪವಿತ್ರಾತ್ಮವರವು ಅವರ ಮೇಲೆ ಬಂತು; ಅವರು ನಾನಾ ಭಾಷೆಗಳನ್ನಾಡಿದರು, ಪ್ರವಾದಿಸಿದರು.


ಹಾಗೆಯೇ ಮಾಡಿ ಅದನ್ನು ಬಾರ್ನಬ ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿದರು.


ಬಾರ್ನಬ ಸೌಲರು ಮಾಡಬೇಕಾದ ಧರ್ಮಕಾರ್ಯವನ್ನು ತೀರಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರಕೊಂಡು ಯೆರೂಸಲೇವಿುನಿಂದ ಹಿಂತಿರಿಗಿ ಬಂದರು.


ಸೌಲನು ಇನ್ನು ಕರ್ತನ ಶಿಷ್ಯರ ಮೇಲೆ ರೌದ್ರನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಶೆಪಡುತ್ತಾ ಮಹಾಯಾಜಕನ ಬಳಿಗೆ ಹೋಗಿ -


ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬವನನ್ನು ಕಂಡು ಅವನನ್ನು ಆತನ ಶಿಲುಬೆಯನ್ನು ಹೊರುವದಕ್ಕೆ ಬಿಟ್ಟೀಹಿಡಿದರು.


ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.


ನನಗೆ ಪ್ರವಾದನವರವಿದ್ದರೂ ಎಲ್ಲಾ ರಹಸ್ಯಗಳೂ ಸಕಲ ವಿಧವಾದ ವಿದ್ಯೆಯೂ ತಿಳಿದರೂ, ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿದ್ದೇನೆ.


ಪ್ರೀತಿಯು ಎಂದಿಗೂ ಬಿದ್ದುಹೋಗುವದಿಲ್ಲ; ಪ್ರವಾದನೆಗಳಾದರೋ ಇಲ್ಲದಂತಾಗುವವು; ವಾಣಿಗಳೋ ನಿಂತುಹೋಗುವವು. ವಿದ್ಯೆಯೋ ಇಲ್ಲದಂತಾಗುವದು.


ಪ್ರವಾದಿಗಳು ಇಬ್ಬರಾಗಲಿ ಮೂವರಾಗಲಿ ಮಾತಾಡಲಿ, ವಿುಕ್ಕಾದವರು ಕೇಳಿ ವಿವೇಚನೆ ಮಾಡಲಿ.


ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿ ಅವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು