Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:19 - ಕನ್ನಡ ಸತ್ಯವೇದವು J.V. (BSI)

19 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲ ಮಾಡಿ ಆ ಜನರ ದೇಶವನ್ನು ಅವರಿಗೆ ಬಾಧ್ಯವಾಗಿ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಾನಾನ್ ಮನ್ತಲ್ಯಾ ಪ್ರಾಂತ್ಯಾತ್ಲ್ಯಾ ಸಾತ್ ಘರಾನಾಂಚ್ಯಾ ಲೊಕಾಕ್ನಿ ನಾಸ್‍ ಕರುನ್ ಅಪ್ಲ್ಯಾ ಲೊಕಾಕ್ನಿ ತ್ಯಾ ಗಾಂವಾಚೊ ಅದಿಕಾರ್ ಸ್ವತಾಚೆ ಕರುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:19
16 ತಿಳಿವುಗಳ ಹೋಲಿಕೆ  

ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು


ಜನಾಂಗಗಳನ್ನು ಅವರ ಮುಂಗಡೆಯಿಂದ ಓಡಿಸಿಬಿಟ್ಟು ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವಾಸ್ತ್ಯವಾಗಿರುವಂತೆ ಹಂಚಿಕೊಟ್ಟು ಆ ಜನಾಂಗಗಳ ಬೀಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.


ನಮ್ಮ ಹಿರಿಯರು ಅದನ್ನು ತಮ್ಮ ತಂದೆಗಳಿಂದ ಹೊಂದಿದರು; ಅವರು ಯೆಹೋಶುವನ ಹಿಂದೆ ಬಂದು ದೇವರು ತಮ್ಮ ಮುಂದೆ ಹೊರಡಿಸಿದ ಅನ್ಯಜನಗಳ ದೇಶವನ್ನು ಸ್ವಾಧೀನಮಾಡಿಕೊಂಡಾಗ ಆ ಗುಡಾರವನ್ನು ಕೂಡ ತಂದರು. ಅದು ದಾವೀದನ ಕಾಲದವರೆಗೂ ಇಲ್ಲೇ ಇತ್ತು.


ಮಹಾಯಾಜಕ ಎಲ್ಲಾಜಾರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲ್ ಕುಲಪ್ರಧಾನರೂ ಶೀಲೋವಿನಲ್ಲಿದ್ದ ದೇವದರ್ಶನದ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲೇ ಚೀಟುಹಾಕಿ ಹಂಚಿಕೊಟ್ಟ ಪ್ರಾಂತಗಳು ಇವೇ. ಹೀಗೆ ದೇಶ ವಿಭಾಗಕಾರ್ಯವು ಪೂರೈಸಿತು.


ಮಹಾಯಾಜಕ ಎಲ್ಲಾಜಾರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲ್ ಕುಲಾಧಿಪತಿಗಳೂ


ಅವರಲ್ಲಿ ಅಮೋರಿಯರ ಅರಸನಾದ ಸೀಹೋನನೂ ಬಾಷಾನಿನ ಅರಸನಾದ ಓಗನೂ ಇದ್ದರು. ಕಾನಾನ್‍ದೇಶದ ಎಲ್ಲಾ ರಾಜ್ಯಗಳನ್ನು ನಿರ್ಮೂಲ ಮಾಡಿದನು.


ಅವರು ಆ ದೇಶದಲ್ಲಿ ಸೇರಿ ಅದನ್ನು ಸ್ವಾಧೀನಮಾಡಿಕೊಂಡರು. ನೀನು ಅವರ ಮುಂದೆ ದೇಶನಿವಾಸಿಗಳಾಗಿದ್ದ ಕಾನಾನ್ಯರನ್ನು ಕುಗ್ಗಿಸಿ ಮನಸ್ಸಿಗೆ ಬಂದಂತೆ ನಡಿಸುವ ಹಾಗೆ ಆ ದೇಶದ ರಾಜರನ್ನೂ ಪ್ರಜೆಗಳನ್ನೂ ಅವರ ಕೈಗೆ ಒಪ್ಪಿಸಿದಿ.


ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.


ನಾನು ಯೊರ್ದನಿನಿಂದ ಪಶ್ಚಿಮ ಮಹಾಸಾಗರದವರೆಗೂ ಇರುವ ಜನಾಂಗಗಳಲ್ಲಿ ಸಂಹೃತರಾದವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ.


ಯೆಹೋಶುವನು ಶೀಲೋವಿನಲ್ಲಿಯೇ ಯೆಹೋವನ ಮುಂದೆ ಅವರಿಗೋಸ್ಕರ ಚೀಟುಹಾಕಿ ದೇಶವನ್ನು ಅವರ ಶಾಖೆಗಳಿಗೆ ಹಂಚಿಕೊಟ್ಟನು.


ನೀನು ಪ್ರವಾಸವಾಗಿರುವ ಕಾನಾನ್‍ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟು ಅವರಿಗೆ ದೇವರಾಗಿರುವೆನು ಅಂದನು.


ಅವನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತಾನೂ ಲೋಟನೂ ಖಾರಾನಿನಲ್ಲಿ ಸಂಪಾದಿಸಿದ್ದ ಎಲ್ಲಾ ಸೊತ್ತನ್ನೂ ದಾಸದಾಸಿಯರನ್ನೂ ತೆಗೆದುಕೊಂಡು ಹೋಗಿ ಕಾನಾನ್ ದೇಶಕ್ಕೆ ಸೇರಿದನು.


ಇಸ್ರಾಯೇಲ್ಯರು ಮುನ್ನೂರು ವರುಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ; ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?


ಇಸ್ರಾಯೇಲ್ಯರು ಐಗುಪ್ತದೇಶವನ್ನು ಬಿಟ್ಟ ನಾನೂರ ಎಂಭತ್ತನೆಯ ವರುಷದ ಅಂದರೆ ಇಸ್ರಾಯೇಲ್ಯರ ಅರಸನಾದ ಸೊಲೊಮೋನನ ಆಳಿಕೆಯ ನಾಲ್ಕನೆಯ ವರುಷದ ಎರಡನೆಯ ತಿಂಗಳಾದ ವೈಶಾಖಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವದಕ್ಕೆ ಪ್ರಾರಂಭಿಸಿದನು.


ಆತನೇ ಇವುಗಳಿಗೆ ಪಾಲುಮಾಡಿಕೊಟ್ಟಿದ್ದಾನೆ, ಆತನ ಕೈಯೇ ನೂಲುಹಾಕಿ ದೇಶವನ್ನು ಹಂಚಿದೆ; ಅದು ಇವುಗಳಿಗೆ ನಿತ್ಯಸ್ವಾಸ್ತ್ಯವಾಗುವದು, ಅವು ತಲತಲಾಂತರಕ್ಕೂ ಅಲ್ಲಿ ವಾಸಿಸುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು