Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:23 - ಕನ್ನಡ ಸತ್ಯವೇದವು J.V. (BSI)

23 ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲ್ಯರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ದೇವರು ತನ್ನ ವಾಗ್ದಾನಕ್ಕನುಸಾರವಾಗಿ ದಾವೀದನ ಸಂತಾನದವರಲ್ಲಿ ಒಬ್ಬನನ್ನು ಇಸ್ರೇಲರ ರಕ್ಷಕನನ್ನಾಗಿ ಕಳುಹಿಸಿ ಕೊಟ್ಟಿದ್ದಾನೆ. ಆತನೇ ಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಈ ದಾವೀದನ ಸಂತತಿಯಲ್ಲಿಯೇ ದೇವರು ಇಸ್ರಾಯೇಲಿಗೆ ತನ್ನ ವಾಗ್ದಾನದಂತೆ ರಕ್ಷಕ ಯೇಸುವನ್ನು ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 “ದೆವಾನ್ ದಾವಿದಾಚ್ಯಾ ಘರಾನಾಕ್ನಾ ಎಕ್ಲ್ಯಾಕ್ ಇಸ್ರಾಯೆಲಾಚ್ಯಾ ಲೊಕಾಂಚೊ ರಾಕ್ವನ್ ಕಾರಿ ಹೊವ್ನ್ ಅಪ್ಲ್ಯಾ ಗೊಸ್ಟಿ ಸಾರ್ಕೆಚ್ ಧಾಡುನ್ ದಿಲಾ ತೊಚ್ ಜೆಜು”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:23
41 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನ ವಂಶಾವಳಿಯು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವದಿಲ್ಲ - ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ಶಕ್ತನಾಗಿರುವ ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಎಲ್ಲಾ ಕಾಲಕ್ಕಿಂತ ಮೊದಲೂ [ಇದ್ದ ಹಾಗೆ] ಈಗಲೂ ಯಾವಾಗಲೂ ಇರಲಿ. ಆಮೆನ್.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಎಬ್ಬಿಸಿದ್ದರಲ್ಲಿ - ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.


ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದದ್ದು. ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ,


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ, ಅದರ ವಿಷಯದಲ್ಲಿ ಸಾಕ್ಷಿಹೇಳುತ್ತೇವೆ.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ಸರಳ ಮನಸ್ಸನ್ನು ಪ್ರೇರಿಸಿದ್ದೇನೆ.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.


ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಆಮೇಲೆ ಇಸ್ರಾಯೇಲ್ ಜನವೆಲ್ಲಾ ರಕ್ಷಣೆಹೊಂದುವದು. ಇದಕ್ಕೆ ಆಧಾರವಾಗಿ ಶಾಸ್ತ್ರದಲ್ಲಿ - ಬಿಡಿಸುವವನು ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು.


ಅವನು ಪ್ರವಾದಿಯಾಗಿದ್ದು - ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನೆಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿ


ಇನ್ನೂ ಕೆಲವರು - ಕ್ರಿಸ್ತನು ಗಲಿಲಾಯದಿಂದ ಬರುವದು ಹೇಗೆ? ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬದಾಗಿ ಶಾಸ್ತ್ರದಲ್ಲಿ ಉಂಟಲ್ಲವೇ ಎಂದು ಹೇಳಿದರು.


ಆ ಹೆಂಗಸಿಗೆ - ನಾವು ಆತನನ್ನು ನಂಬಿರುವದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ; ನಾವು ಕಿವಿಯಾರೆ ಕೇಳಿ ಈತನು ಲೋಕರಕ್ಷಕನೇ ಹೌದೆಂದು ತಿಳುಕೊಂಡಿದ್ದೇವೆ ಎಂದು ಹೇಳಿದರು.


ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು? ಎಂದು ಪ್ರಶ್ನೆಹಾಕಿದ್ದಕ್ಕೆ ಅವರು ಆತನಿಗೆ -


ಆತನ ಹಿಂದೆಯೂ ಮುಂದೆಯೂ ಗುಂಪಾಗಿ ಹೋಗುತ್ತಿದ್ದ ಜನರು - ದಾವೀದನ ಕುಮಾರನಿಗೆ ಜಯ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ಮೇಲಣ ಲೋಕಗಳಲ್ಲಿ ಜಯ! ಎಂದು ಆರ್ಭಟಿಸಿದರು.


ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;


ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವದಕ್ಕೆ ಮುಂಚೆ ಯಾರು ತಿಳಿಸಿದರು? ಯೆಹೋವನೆಂಬ ನಾನಲ್ಲವೆ. ನಾನು ಹೊರತು ಇನ್ನು ಯಾವ ದೇವರೂ ಇಲ್ಲ, ನನ್ನ ವಿನಹ ಸತ್ಯಸ್ವರೂಪನೂ ರಕ್ಷಕನೂ ಆದ ದೇವರು ಇಲ್ಲವೇ ಇಲ್ಲ.


ನಾನೇ, ನಾನೇ ಯೆಹೋವನು; ನಾನು ಹೊರತು ಯಾವ ರಕ್ಷಕನೂ ಇಲ್ಲ.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು;


ಅದಕ್ಕೆ [ಯೆಶಾಯನು] ಹೀಗೆ ಹೇಳಿದನು - ದಾವೀದನ ಮನೆತನದವರೇ, ಕೇಳಿರಿ! ಮನುಷ್ಯರನ್ನು ಬೇಸರಗೊಳಿಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನೂ ಬೇಸರಗೊಳಿಸುವಿರಾ?


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.


ಅವರು ತಮ್ಮ ದೇವರಾದ ಯೆಹೋವನೆಂಬ ನನ್ನನ್ನೂ ನಾನು ಅವರಿಗಾಗಿ ಏರ್ಪಡಿಸುವ ರಾಜನಾದ ದಾವೀದನನ್ನೂ ಸೇವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು