Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:26 - ಕನ್ನಡ ಸತ್ಯವೇದವು J.V. (BSI)

26 ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮಲ್ಲಿರುವ ಯೆಹೂದ್ಯ ಮತಾವಲಂಭಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ನನ್ನ ಸಹೋದರರೇ, ಅಬ್ರಹಾಮನ ಕುಟುಂಬದ ಪುತ್ರರೇ, ನಿಜದೇವರನ್ನು ಆರಾಧಿಸುತ್ತಿರುವ ಯೆಹೂದ್ಯರಲ್ಲದವರೇ, ಕೇಳಿರಿ! ಈ ರಕ್ಷಣೆಯ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಅಬ್ರಹಾಮನ ವಂಶದವರಾದ ಸಹೋದರರೇ, ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ರಕ್ಷಣೆಯ ಸಂದೇಶ ಕಳುಹಿಸಿರುವುದು ನಮಗಾಗಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 “ಮಾಜ್ಯಾ ಭಾವಾನು ಅಬ್ರಾಹಾಮಾಚ್ಯಾ ಘರಾನಾತ್ಲಾ ಲೆಕಾನು ಅನಿ ಖರ್ಯ್ಯಾ ದೆವಾಕ್ ಆರಾದನ್ ಕರುನ್ಗೆತ್ ಹೊತ್ತ್ಯಾ ಜುದೆವಾಂಚೆ ನ್ಹಯ್ ಹೊಲ್ಯಾ ಲೊಕಾನು, ಆಯ್ಕಾ!” ಅಮ್ಚ್ಯಾ ಸಾಟಿಚ್ ಹಿ ರಾಕ್ವನಿಚಿ ಖಬರ್ ಧಾಡಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:26
28 ತಿಳಿವುಗಳ ಹೋಲಿಕೆ  

ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.


ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ.


ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಪರಿಹಾರವೆಂಬ ರಕ್ಷಣೆಯ ತಿಳುವಳಿಕೆಯನ್ನು ಆತನ ಪ್ರಜೆಗೆ ಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ


ನನ್ನ ಧರ್ಮವನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು; ಚೀಯೋನಿನಲ್ಲಿ ರಕ್ಷಣಾಕಾರ್ಯವನ್ನು ನಡಿಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.


ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಭಿಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.


ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ನೀವು ಹೋಗಿ ದೇವಾಲಯದಲ್ಲಿ ನಿಂತುಕೊಂಡು ಈ ಸಜ್ಜೀವವಿಷಯವಾದ ಮಾತುಗಳನ್ನೆಲ್ಲಾ ಜನರಿಗೆ ಹೇಳಿರಿ ಅಂದನು.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲನ ಮನೆತನದವರ ಬಳಿಗೆ ಹೋಗಿರಿ.


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಪೌಲನೂ ನಾವೂ ಹೋಗುತ್ತಿರುವಾಗ ಅವಳು ಹಿಂದೆ ಬಂದು - ಈ ಮನುಷ್ಯರು ಪರಾತ್ಪರನಾದ ದೇವರ ದಾಸರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ ಎಂದು ಕೂಗುತ್ತಿದ್ದಳು.


ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು.


ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು ಎಂದು ಹೇಳಿದನು.


ಇಸ್ರಾಯೇಲೆಂಬ ಹೆಸರಿನವರೂ ಯೆಹೂದವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ, ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ ಧರ್ಮಕ್ಕೂ ಅನುಸಾರವಾಗಿಲ್ಲ.


ಆತನು ಮಾಡಿದ ಅದ್ಭುತಕೃತ್ಯ, ಆತನ ಮಹತ್ಕಾರ್ಯ, ಆತನ ಬಾಯಿಂದ ಹೊರಟ ನ್ಯಾಯನಿರ್ಣಯ ಇವುಗಳನ್ನು ನೆನಪುಮಾಡಿಕೊಳ್ಳಿರಿ.


ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,


ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಹೊರಡಿಸಿ ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟಿಯಲ್ಲಾ.


ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು;


ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನಧರ್ಮ ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.


ಈ ವಿಷಯದಲ್ಲಿ ಮಹಾಯಾಜಕನೂ ಹಿರೀಸಭೆಯವರೆಲ್ಲರೂ ಸಾಕ್ಷಿಗಳಾಗಿದ್ದಾರೆ. ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಕಾಗದಗಳನ್ನು ತೆಗೆದುಕೊಂಡು ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ದಂಡನೆಗಾಗಿ ಯೆರೂಸಲೇವಿುಗೆ ತರಬೇಕೆಂದು ಹೊರಟೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು