Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:3 - ಕನ್ನಡ ಸತ್ಯವೇದವು J.V. (BSI)

3 ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ ಆ ಇಬ್ಬರ ಮೇಲೆ ಹಸ್ತಾರ್ಪಣ ಮಾಡಿ ಅವರನ್ನು ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ, ಅವರಿಬ್ಬರ ಮೇಲೆ ಕೈಗಳನ್ನಿಟ್ಟು ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆ ಹೊವ್ನ್ ತಾಂಡ್ಯಾಚ್ಯಾ ಲೊಕಾನಿ ಉಪ್ಪಾಸಿ ರಾವ್ನ್ ಮಾಗ್ನೆ ಕರುನ್, ಬಾರ್ನಾಬಾಸಾಕ್ ಅನಿ ಸಾವ್ಲಾಕ್ ಟಕ್ಲ್ಯಾ ವರ್‍ತಿ ಹಾತ್ ಥವ್ನ್ ತೆಂಕಾ ಆಶಿರ್ವಾದ್ ಕರುನ್ ಧಾಡುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:3
18 ತಿಳಿವುಗಳ ಹೋಲಿಕೆ  

ಅಪೊಸ್ತಲರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ನೇವಿುಸಿದರು.


ನೀನು ನನ್ನಿಂದ ಅನೇಕ ಸಾಕ್ಷಿಗಳ ಮುಂದೆ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.


ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿತ್ರಾತ್ಮನು - ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.


ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. ಸಭೆಗೆ ಕೆಲವು ಮಾತುಗಳನ್ನು ಬರೆದಿದ್ದೆನು;


ಅವಸರದಿಂದ ಯಾರ ತಲೆಯ ಮೇಲೆಯಾದರೂ ಹಸ್ತವನ್ನಿಟ್ಟು ಸಭೆಯ ಉದ್ಯೋಗಕ್ಕೆ ನೇವಿುಸಬೇಡ. ಹಾಗೆ ನೇವಿುಸಿದರೆ ಮತ್ತೊಬ್ಬರು ಮಾಡಿದ ಪಾಪದಲ್ಲಿ ನೀನು ಪಾಲುಗಾರನೆಂದು ತೋರಿ ಬಂದೀತು; ನೀನು ಶುದ್ಧನಾಗಿರುವ ಹಾಗೆ ನೋಡಿಕೋ.


ಇದಕ್ಕೆ ಸರಿಯಾಗಿ ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಅಂದವಾಗಿವೆ ಎಂದು ಬರೆದದೆ. ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ.


ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವರಾಗಿ ಆ ಊರಿಂದಲೇ ಹೊರಟಿದ್ದರು.


ಇದಲ್ಲದೆ ಪ್ರತಿಸಭೆಯಲ್ಲಿ ಸಭೆಯವರ ಸಮ್ಮತಿಯಿಂದ ಹಿರಿಯರನ್ನು ಗೊತ್ತು ಮಾಡಿ ನೇವಿುಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.


ಅವನ ಮೇಲೆ ಕೈಯಿಟ್ಟು ಅಧಿಕಾರವನ್ನು ಕೊಟ್ಟನು.


ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕಕೊಡುತ್ತೇನೆ.


ಪೌಲನು ಸೀಲನನ್ನು ಆರಿಸಿಕೊಂಡು ಸಹೋದರರಿಂದ ಕರ್ತನ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವನಾಗಿ ಹೊರಟು


ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿಹೇಳಿದರು. ಅವರನ್ನು ನೀನು ದೇವರ ಸೇವಕರಿಗೆ ಯೋಗ್ಯವಾದ ರೀತಿಯಿಂದ ಸಾಗ ಕಳುಹಿಸಿದರೆ ಚೆನ್ನಾಗಿರುವದು.


ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು - ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದನು.


ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿಹಗಲೂ ದೇವರ ಸೇವೆಯನ್ನು ಮಾಡುತ್ತಿದ್ದಳು.


ಮತ್ತೀಯನನ್ನೂ ನಿಲ್ಲಿಸಿ ಪ್ರಾರ್ಥನೆ ಮಾಡುತ್ತಾ - ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವದರಿಂದ ಆ ಸ್ಥಾನವನ್ನು ಹೊಂದುವದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿಕೊಂಡವನನ್ನು ತೋರಿಸಿಕೊಡು ಎಂದು ಹೇಳಿದರು.


ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಿಕೊಂಡವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು