Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:36 - ಕನ್ನಡ ಸತ್ಯವೇದವು J.V. (BSI)

36 ದಾವೀದನಾದರೋ ತನ್ನ ಸಕಾಲದವರಿಗೆ ಸೇವೆಮಾಡಿದನಂತರ ದೈವಸಂಕಲ್ಪದಿಂದ ನಿದ್ದೆಹೋಗಿ ತನ್ನ ಪಿತೃಗಳ ಬಳಿಯಲ್ಲಿ ಇಡಲ್ಪಟ್ಟು ಕೊಳೆಯುವ ಅವಸ್ಥೆಯನ್ನು ಅನುಭವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 “ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 “ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ದಾವಿದಾನ್ ಅಪ್ಲ್ಯಾ ಜಿವ್ ಹೊತ್ತ್ಯಾ ಯೆಳಾರ್ ಫುರಾ ದೆವಾಚ್ಯಾ ಇಚ್ಚ್ಯಾಸಾರ್ಕೆ ಜಿವನ್ ಕರ್‍ಲ್ಯಾನ್, ತೆಚ್ಯಾ ಮಾನಾ ತೊ ಮರುನ್ ಗೆಲೊ ತೆಕಾ ತೆಚ್ಯಾ ಪುರ್ವಜಾಂಚ್ಯಾ ವಾಂಗ್ಡಾ ಮಾಟಿ ಕರುನ್ ಹೊಲೆ ,ತೆಜೆ ಆಂಗ್ ಸಮಾದಿತ್ ಕುಸುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:36
33 ತಿಳಿವುಗಳ ಹೋಲಿಕೆ  

ಸಹೋದರರೇ, ಮೂಲ ಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತಾಡಬಹುದು ಏನಂದರೆ - ಅವನು ತೀರಿಹೋಗಿ ಹೂಣಲ್ಪಟ್ಟನು; ಅವನ ಸಮಾಧಿ ಈ ದಿನದವರೆಗೂ ನಮ್ಮಲ್ಲಿ ಅದೆ.


ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ಆಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ಮಾಡಿ - ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನಗೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟವನ್ನೆಲ್ಲಾ ನೆರವೇರಿಸುವನು ಎಂಬದಾಗಿ ಅವನ ವಿಷಯದಲ್ಲಿ ಸಾಕ್ಷಿಹೇಳಿದನು.


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ದಾವೀದನು ಇಸ್ರಾಯೇಲ್ಯರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನ್ಯಾಯತೀರಿಸುತ್ತಿದ್ದನು.


ಇದು ಮಾತ್ರವಲ್ಲದೆ ಕ್ರಿಸ್ತನವರಾಗಿ ನಿದ್ರೆಹೋದವರು ನಾಶವಾದರು.


ತರುವಾಯ ಒಂದೇ ಸಮಯದಲ್ಲಿ ಐನೂರು ಮಂದಿಗಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ. ಕೆಲವರು ನಿದ್ರೆಹೋಗಿದ್ದಾರೆ.


ಯೇಸು - ಆ ಕಲ್ಲನ್ನು ತೆಗೆದುಹಾಕಿರಿ ಅನ್ನಲು ತೀರಿಹೋದವನ ಅಕ್ಕನಾದ ಮಾರ್ಥಳು - ಸ್ವಾಮೀ, ಅವನು ಸತ್ತು ನಾಲ್ಕು ದಿವಸವಾಯಿತು; ಈಗ ನಾತ ಹುಟ್ಟಿದೆ ಅಂದಳು.


ಅವರು ಕುರಿಗಳಂತೆ ಪಾತಾಳದಲ್ಲಿ ದಟ್ಟವಾಗಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರಿಗೆ ನಿವಾಸವಿಲ್ಲದ ಹಾಗೆ ಪಾತಾಳವು ಅವರ ರೂಪವನ್ನು ನಾಶಮಾಡುವದು; ಉದಯಕಾಲದಲ್ಲಿ ಯಥಾರ್ಥರು ಅವರ ಮೇಲೆ ದೊರೆತನ ನಡಿಸುವರು.


ಮರಣವನ್ನು ತಪ್ಪಿಸಿಕೊಳ್ಳುವದಕ್ಕೆ ಎಷ್ಟು ಹಣಕೊಟ್ಟರೂ ಸಾಲುವದೇ ಇಲ್ಲ; ಅಂಥ ಪ್ರಯತ್ನವನ್ನು ನಿಷ್ಫಲವೆಂದು ಬಿಟ್ಟೇಬಿಡಬೇಕು.


ಇಬ್ಬರೂ ದೂಳಿನಲ್ಲಿ ಮಲಗುವರು, ಹುಳಗಳು ಅವರನ್ನು ಮುತ್ತಿಕೊಳ್ಳುವವು.


ಶ್ಮಶಾನವನ್ನು, ನೀನು ನನ್ನ ತಂದೆ ಎಂದೂ ಹುಳವನ್ನು, ನನ್ನ ತಾಯಿ, ನನ್ನ ತಂಗಿ ಎಂದೂ ಕರೆಯುವದಾದರೆ


ಉಜ್ಜೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಕುಷ್ಠರೋಗಿಯದೆಂದು ರಾಜಕುಟುಂಬಶ್ಮಶಾನವಿದ್ದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.


ಯೆಹೋಷಾಫಾಟನು ಪಿತೃಗಳ ಬಳಿಗೆ ಸೇರಿ ದಾವೀದನಗರದಲ್ಲಿ ಪೂರ್ವಿಕರ ಶ್ಮಶಾನಭೂವಿುಯಲ್ಲಿ ಸಮಾಧಿಹೊಂದಿದ ಮೇಲೆ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.


ರೆಹಬ್ಬಾಮನು ಪಿತೃಗಳ ಬಳಿಗೆ ಸೇರಲು ಅವನ ಶವಕ್ಕೆ ದಾವೀದನಗರದಲ್ಲಿ ಸಮಾಧಿಯಾಯಿತು. ಅವನ ಮಗನಾದ ಅಬೀಯನು ಅವನಿಗೆ ಬದಲಾಗಿ ಅರಸನಾದನು.


ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿ ಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು ನಿರೀಕ್ಷೆಯಿಲ್ಲದವರಾದ ಇತರರಂತೆ ದುಃಖಿಸುವದು ನಮ್ಮ ಮನಸ್ಸಿಗೆ ಒಪ್ಪುವದಿಲ್ಲ.


ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.


ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು.


ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ನಿನ್ನ ದೇವರಾದ ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿ ಎಂದು ಹೇಳಿದ್ದಾನಷ್ಟೆ ಅಂದರು.


ಅವನು ಐಶ್ವರ್ಯ ಮಾನ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದ ನಂತರ ತುಂಬಾ ವೃದ್ಧನಾಗಿ ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಅರಸನಾದನು.


ಇದನ್ನು ಹೇಳಿ ನಿದ್ರೆಹೋದನು. ಸೌಲನು ಅವನ ಕೊಲೆಗೆ ಸಮ್ಮತಿಸುವವನಾಗಿದ್ದನು. ಆ ದಿವಸದಲ್ಲಿ ಯೆರೂಸಲೇವಿುನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರು ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.


ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು