39 ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
ಆದರೂ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದರಿಂದ ನಾವು ಸಹ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿಸಲ್ಪಡುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು; ಯಾಕಂದರೆ ಯಾವನಾದರೂ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವದಿಲ್ಲ.
ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.
ಧರ್ಮಶಾಸ್ತ್ರವು ಯಾವದನ್ನೂ ಸಿದ್ಧಿಗೆ ತಾರದೆ ಇರುವದರಿಂದ ಮೊದಲಿದ್ದ ನಿಯಮವು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ರದ್ದಾಗಿಹೋಯಿತು. ಅದಕ್ಕೆ ಬದಲಾಗಿ ಉತ್ತಮವಾಗಿರುವ ಒಂದು ನಿರೀಕ್ಷಾಧಾರವು ಪ್ರಾಬಲ್ಯಕ್ಕೆ ಬಂತು. ಈ ನಿರೀಕ್ಷಾಧಾರವು ನಮ್ಮನ್ನು ದೇವರ ಸನ್ನಿಧಿಗೆ ಸೇರಿಸುವಂಥದು.
ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.
ದೇವರು ಅನ್ಯಜನರನ್ನು ನಂಬಿಕೆಯ ನಿವಿುತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬದಾಗಿ ಶಾಸ್ತ್ರವು ಮೊದಲೇ ಕಂಡು ಅಬ್ರಹಾಮನಿಗೆ - ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಶುಭವರ್ತಮಾನವನ್ನು ಮುಂಚಿತವಾಗಿಯೇ ತಿಳಿಸಿತು.
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.
ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.
ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.