Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:40 - ಕನ್ನಡ ಸತ್ಯವೇದವು J.V. (BSI)

40 ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಅದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆದುದರಿಂದ ಪ್ರವಾದಿಗಳ ಈ ಮಾತುಗಳು ನಿಮ್ಮಲ್ಲಿ ನಿಜವಾಗದಂತೆ ಎಚ್ಚರಿಕೆಯಾಗಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಆದ್ದರಿಂದ ಪ್ರವಾದಿಗಳು ತಿಳಿಸಿರುವ ಈ ಕೆಲವು ಸಂಗತಿಗಳು ನಿಮ್ಮಲ್ಲಿ ನಿಜವಾಗದಂತೆ ಎಚ್ಚರಿಕೆಯಾಗಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆದ್ದರಿಂದ ಪ್ರವಾದಿಗಳು ಹೇಳಿದ ಮಾತುಗಳು ನಿಮ್ಮಲ್ಲಿ ನಡೆಯದಂತೆ ಜಾಗರೂಕರಾಗಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ತಸೆ ಹೊವ್ನ್ ಪ್ರವಾದಿಯಾನಿ ಸಾಂಗಲಿ ಥೊಡಿ ಸಂಗ್ತಿಯಾ ಖರೆ ಹೊಯ್ನಾ ಸಾರ್ಕೆ ಉಶಾರ್ಕಿನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:40
13 ತಿಳಿವುಗಳ ಹೋಲಿಕೆ  

ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.


ನೀವು ಮಾತಾಡುತ್ತಿರುವಾತನ ಮಾತನ್ನು ಕೇಳಲೊಲ್ಲೆವೆಂದು ಹೇಳಬಾರದು. ಭೂವಿುಯ ಮೇಲೆ ದೈವೋಕ್ತಿಗಳನ್ನಾಡಿದವನಿಗೆ ಕಿವಿಗೊಡ ಮನಸ್ಸಿಲ್ಲದೆ ಇದ್ದ ಇಸ್ರಾಯೇಲ್ಯರು ದಂಡನೆಗೆ ತಪ್ಪಿಸಿಕೊಳ್ಳದಿದ್ದರೆ ಪರಲೋಕದಿಂದ ಮಾತಾಡುವವನಿಗೆ ನಾವು ಕಿವಿಗೊಡ ಮನಸ್ಸಿಲ್ಲದೆ ತೊಲಗಿದರೆ ಹೇಗೆ ತಪ್ಪಿಸಿಕೊಂಡೇವು?


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;


ಜನಾಂಗಗಳ ಮಧ್ಯೆ ನಡೆಯುವದನ್ನು ನೋಡಿರಿ, ದೃಷ್ಟಿಯಿಡಿರಿ, ಬೆರಗಾಗಿರಿ; ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು, ಅದು ನಿಮಗೆ ತಿಳಿಯಲ್ಪಟ್ಟರೂ ನೀವು ಅದನ್ನು ನಂಬುವದಿಲ್ಲ.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ಹೀಗಿರುವದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕಾಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು; ಇವರ ಜ್ಞಾನಿಗಳ ಜ್ಞಾನವು ಅಳಿಯುವದು, ವಿವೇಕಿಗಳ ವಿವೇಕವು ಅಡಗುವದು ಎಂದು ಹೇಳಿದನು.


ಆದರೆ ನೀನು ದುಷ್ಟನನ್ನು ದುರ್ಮಾಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ಅವರೆಲ್ಲರು ದೇವರಿಂದ ಶಿಕ್ಷಿತರಾಗಿರುವರು ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದದೆ; ತಂದೆಯಿಂದ ಕೇಳಿ ಕಲಿತವರೆಲ್ಲರು ನನ್ನ ಬಳಿಗೆ ಬರುತ್ತಾರೆ.


ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರ ಗಣವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ - ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;


ಇದಕ್ಕೆ ಪ್ರವಾದಿಗಳ ಮಾತುಗಳೂ ಒಪ್ಪುತ್ತವೆ. ಹೇಗಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು