Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:41 - ಕನ್ನಡ ಸತ್ಯವೇದವು J.V. (BSI)

41 ಎಲೈ ತಿರಸ್ಕಾರಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿ ಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಎಷ್ಟು ಮಾತ್ರಕ್ಕೂ ನಂಬುವದಿಲ್ಲ ಎಂಬದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 “‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ‘ಅವಹೇಳನ ಮಾಡುವವರೇ, ಗಮನಿಸಿರಿ; ದಿಗ್ಭ್ರಮೆಗೊಂಡು ದಿಕ್ಕುಪಾಲಾಗಿರಿ; ನಿಮ್ಮ ಕಾಲದಲ್ಲೇ ನಾನೊಂದು ಮಹತ್ಕಾರ್ಯವನ್ನು ಮಾಡುತ್ತೇನೆ; ಅದನ್ನು ನೀವು ನಂಬಲಾರಿರಿ, ಇನ್ನೊಬ್ಬರು ವಿವರಿಸಿ ಹೇಳಿದರೂ ನಂಬಲಾರಿರಿ’, “ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ‘ಅಪಹಾಸ್ಯ ಮಾಡುವವರೇ, ಆಶ್ಚರ್ಯಪಡುತ್ತಾ ನಾಶವಾಗಿಹೋಗಿರಿ. ನೀವು ನಂಬಲೊಲ್ಲದ ಒಂದು ಕಾರ್ಯವನ್ನು ನಾನು ಮಾಡುವೆನು. ಬೇರೊಬ್ಬನು ನಿಮಗೆ ಅದನ್ನು ವಿವರಿಸಿದರೂ ನೀವು ನಂಬುವುದಿಲ್ಲ!’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ ‘ತಿರಸ್ಕಾರ ಮಾಡುವವರೇ, ಗಮನಿಸಿರಿ, ಆಶ್ಚರ್ಯಪಟ್ಟು, ಚದುರಿ ಹೋಗಿರಿ, ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ಯಾರಾದರೂ ವಿವರಿಸಿ ಹೇಳಿದರೂ ನೀವದನ್ನು ಎಂದಿಗೂ ನಂಬುವುದೇ ಇಲ್ಲ,’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಹಾಸ್ತಲ್ಯಾ ಲೊಕಾನು ಅಜಾಪ್ ಹೊವ್ನಗೆತ್ ನಾಸ್ ಹೊವ್ನ್ ಜಾವಾ, ತುಮಿ ವಿಶ್ವಾಸ್ ಕರಿನಸಲ್ಯಾ ಸಾರ್ಕೆ ಕಾಮ್ ಮಿಯಾ ಕರ್‍ತಾ, ದುಸ್ರ್ಯಾನಿ ತುಮ್ಕಾ ಸಾಂಗ್ಲ್ಯಾರ್ಬಿ ತುಮಿ ವಿಶ್ವಾಸ್ ಕರಿನ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:41
26 ತಿಳಿವುಗಳ ಹೋಲಿಕೆ  

ಜನಾಂಗಗಳ ಮಧ್ಯೆ ನಡೆಯುವದನ್ನು ನೋಡಿರಿ, ದೃಷ್ಟಿಯಿಡಿರಿ, ಬೆರಗಾಗಿರಿ; ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು, ಅದು ನಿಮಗೆ ತಿಳಿಯಲ್ಪಟ್ಟರೂ ನೀವು ಅದನ್ನು ನಂಬುವದಿಲ್ಲ.


ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?


ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.


ಹಾಗೆಯೇ ಕರ್ತನು ನಮಗೆ ಅಪ್ಪಣೆಕೊಟ್ಟಿದ್ದಾನೆ; ಹೇಗಂದರೆ - ನೀನು ಲೋಕದ ಕಟ್ಟಕಡೆಯವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇವಿುಸಿದ್ದೇನೆ ಎಂದು ದೇವರು ಹೇಳಿದ್ದಾನೆ ಅಂದರು.


ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.


ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ ತಾವು ಹಣದಾಶೆಯುಳ್ಳವರಾಗಿದ್ದದರಿಂದ ಹಾಸ್ಯಮಾಡಿದರು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೂಳೆಯನ್ನು ನುಂಗಿಬಿಡುವ ಹಾಗೂ ಒಣಹುಲ್ಲು ಬೆಂಕಿಯಲ್ಲಿ ಕುಗ್ಗುವಂತೆಯೂ ಅವರ ಬೇರು ಕೊಳೆತು ಅವರ ಹೂವು ದೂಳಾಗಿ ತೂರಿಹೋಗುವದು.


ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು ಎಂಬದೇ.


ಆ ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆ ನಮಗೆ ನೇವಿುಸಿರುವ ಆಚಾರಗಳನ್ನು ಬೇರೆ ಮಾಡುವನೆಂಬದಾಗಿ ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.


ಜನರು ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು ಹಾಸ್ಯಮಾಡಿ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ಅವನು ದೇವರಾರಿಸಿಕೊಂಡ ಕ್ರಿಸ್ತನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.


ಆದರೆ ನೀನು ದುಷ್ಟನನ್ನು ದುರ್ಮಾಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು