Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:47 - ಕನ್ನಡ ಸತ್ಯವೇದವು J.V. (BSI)

47 ಹಾಗೆಯೇ ಕರ್ತನು ನಮಗೆ ಅಪ್ಪಣೆಕೊಟ್ಟಿದ್ದಾನೆ; ಹೇಗಂದರೆ - ನೀನು ಲೋಕದ ಕಟ್ಟಕಡೆಯವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇವಿುಸಿದ್ದೇನೆ ಎಂದು ದೇವರು ಹೇಳಿದ್ದಾನೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಏಕೆಂದರೆ ಪ್ರಭುವು ನಮಗೆ ಕೊಟ್ಟ ಆಜ್ಞೆ ಇಂತಿದೆ: ‘ಲೋಕದ ಕಟ್ಟಕಡೆಯಲ್ಲಿರುವ ಜನರೆಲ್ಲರಿಗೂ ನೀನು ರಕ್ಷಕನಾಗಿರಬೇಕೆಂದು ನಾನು ನಿನ್ನನ್ನು ಇತರ ಜನಾಂಗಗಳಿಗೆ ಬೆಳಕನ್ನಾಗಿ ಮಾಡಿದ್ದೇನೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “ ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಕಶ್ಯಾಕ್ ಮಟ್ಲ್ಯಾರ್, ಧನಿಯಾನ್ ದಿಲ್ಲೆ ಹುಕುಮ್ ಅಶೆ ಹಾಯ್,ಮಿಯಾ ತುಕಾ ಜುದೆವ್ ನೈ ಹೊತ್ತ್ಯಾ ಲೊಕಾಕ್ನಿ ಉಜ್ವೊಡ್ ಸಾರ್ಕೊ ಕರ್‍ಲಾ, ತಿಯಾ ಜಗಾಚೊ ಆಕ್ರಿಚೊ ಯೆಳ್ ಹೊಯ್ ಪತರ್ಬಿ ರಾಕ್ವನ್ದಾರಿ ಹೊವ್ನ್ ರ್‍ಹಾಯ್ ಸಾರ್ಕೆ ಮಿಯಾ ತುಕಾ ದುಸ್ರ್ಯಾ ಲೊಕಾಕ್ನಿ ಉಜ್ವೊಡ್ ಸಾರ್ಕೊ ಕರುನ್ ಥವ್ಲಾ ಮನುನ್ ದೆವಾನ್ ಸಾಂಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:47
35 ತಿಳಿವುಗಳ ಹೋಲಿಕೆ  

ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ನೀನು ಕುರುಡರಿಗೆ ಕಣ್ಣುಕೊಟ್ಟು ಬಂದಿಗಳನ್ನು ಸೆರೆಯಿಂದಲೂ ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ಕರತರಬೇಕು ಎಂದು


ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.


ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ನನ್ನ ಜನರು ಎದೋವಿುನ ವಿುಕ್ಕ ಭಾಗವನ್ನೂ ಯೆಹೋವನ ಪ್ರಜೆ ಎನಿಸಿಕೊಂಡಿದ್ದ ಸಕಲ ಜನಾಂಗಗಳನ್ನೂ ಸ್ವಾಧೀನಮಾಡಿಕೊಳ್ಳುವ ಹಾಗೆ ಹಾಳಾದದ್ದನ್ನು ನಾನು ನಿಲ್ಲಿಸಿ ಪೂರ್ವಕಾಲದಲ್ಲಿದ್ದಂತೆ ಅದನ್ನು ತಿರಿಗಿ ಕಟ್ಟಿಸುವೆನು ಎಂಬದಾಗಿ ಈ ಕಾರ್ಯಗಳನ್ನು ನೆರವೇರಿಸುವ ಯೆಹೋವನು ನುಡಿದಿದ್ದಾನೆ.


ಜನಾಂಗಗಳು ನಿನ್ನ ಬೆಳಕಿಗೆ ನೆರೆಯುವವು, ಅರಸರು ನಿನ್ನಲ್ಲಿನ ಉದಯಪ್ರಕಾಶಕ್ಕೆ ಬರುವರು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ಆ ಸಂಗತಿಗಳು ಏನಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು ಎಂಬದೇ.


ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ಆಮೇಲೆ ಅವರಿಗೆ - ನೀವು ಲೋಕದ ಎಲ್ಲಾ ಕಡೆಗೆ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೋವನ ವರವಾದ ಇಬ್ಬನಿಯೂ ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಹೇಗೆ ಮನುಷ್ಯರನ್ನು ಎದುರುನೋಡದೆ ಮಾನವರನ್ನು ನಿರೀಕ್ಷಿಸದೆ ಹಿತಕರವಾಗಿರುವವೋ ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವದು.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು