Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:1 - ಕನ್ನಡ ಸತ್ಯವೇದವು J.V. (BSI)

1 ಇಕೋನ್ಯದಲ್ಲಿ ಪೌಲ ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಬಲವಾಗಿ ಮಾತಾಡಿದ್ದರಿಂದ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ಬಹುಮಂದಿ ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತವಿಶ್ವಾಸಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪೌಲ ಬಾರ್ನಬರು ಇಕೋನಿಯಾ ಪಟ್ಟಣಕ್ಕೆ ಹೋದರು. (ಪ್ರತಿಯೊಂದು ಪಟ್ಟಣದಲ್ಲಿಯೂ ಅವರು ಮಾಡುತ್ತಿದ್ದಂತೆ) ಇಲ್ಲಿಯೂ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಜನರಿಗೆ ಬೋಧಿಸಿದರು. ಪೌಲ ಬಾರ್ನಬರ ಅಮೋಘ ಬೋಧನೆಯನ್ನು ಕೇಳಿ ಅನೇಕ ಯೆಹೂದ್ಯರು ಮತ್ತು ಗ್ರೀಕರು ನಂಬಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾವ್ಲು ಅನಿ ಬಾರ್ನಾಬಾಸ್ ಇಕೊನಿಯಾ ಮನ್ತಲ್ಯಾ ಶಾರಾಕ್ ಗೆಲೆ, ಹರ್ ಎಕ್ ಶಾರಾತ್ ತೆನಿ ಕರಲ್ಯಾ ಸಾರ್ಕೆಚ್ ಹಿತ್ತೆಬಿ ಜುದೆವಾಂಚ್ಯಾ ಸಿನಾಗೊತ್ ಜಾವ್ನ್ ದೆವಾಚ್ಯಾ ವಿಶಯಾತ್ ಬೊಲ್ಯಾನಿ, ಪಾವ್ಲುಚೆ ಅನಿ ಬಾರ್ನಾಬಾಸಾಚಿ ಶಿಕಾಪಾ ಆಯ್ಕುನ್ ಜುದೆವಾಂಚ್ಯಾ ಅನಿ ಗ್ರಿಕಾಂಚ್ಯಾ ಲೈ ಲೊಕಾನಿ ದೆವಾಚೆರ್ ವಿಶ್ವಾಸ್ ಥವ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:1
33 ತಿಳಿವುಗಳ ಹೋಲಿಕೆ  

ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.


ಇವರು ತಮ್ಮ ಕಾಲಿಗೆ ಹತ್ತಿದ್ದ ದೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.


ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತಾಡಿ - ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪುಮಾಡಿಕೊಂಡದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರಾಗಿ ಮಾಡಿದ ಮೇಲೆ ಹಿಂತಿರಿಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಈ ವಿಷಯದಲ್ಲಿ ಯೆಹೂದ್ಯನಿಗೂ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತ; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವವನಾಗಿದ್ದಾನೆ.


ಆ ಸುವಾರ್ತೆಯು ದೇವರ ಬಲಸ್ವರೂಪವಾಗಿದ್ದು ಮೊದಲು ಯೆಹೂದ್ಯರಿಗೆ ಆಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವಂಥದಾಗಿದೆ.


ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು.


ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತಾಡಿದನು.


ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕರು ಕೇಳಿ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಹೀಗಿರಲಾಗಿ ಅವರಲ್ಲಿ ಬಹಳ ಮಂದಿ ನಂಬಿದರು; ಅದಲ್ಲದೆ ಕುಲೀನರಾದ ಗ್ರೀಕ್‍ಹೆಂಗಸರಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.


ಅವರಲ್ಲಿ ಕೆಲವರೂ ದೇವಭಕ್ತರಾದ ಗ್ರೀಕರಲ್ಲಿ ದೊಡ್ಡ ಗುಂಪೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಸೀಲರನ್ನು ಸೇರಿಕೊಂಡರು.


ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಭಿಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.


ಕರ್ತನ ಹಸ್ತವು ಅವರಿಗೆ ಸಹಾಯವಾದ್ದರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.


ಮುಂದೆ ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದು ತಡಮಾಡದೆ ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವದಕ್ಕೆ ಪ್ರಾರಂಭಮಾಡಿದನು.


ಇಸ್ರಾಯೇಲ್ ಜನರೇ, ಸಹಾಯಮಾಡಿರಿ, ನಮ್ಮ ಜನರಿಗೂ ಧರ್ಮಶಾಸ್ತ್ರಕ್ಕೂ ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ ಎಂದು ಕೂಗಿದರು.


ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.


ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ವಾದಿಸಿದನು.


ಆಮೇಲೆ ಅವನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ಆದರೆ ನಂಬದೆ ಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.


ಸಲಮೀಸಿಗೆ ಸೇರಿದಾಗ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಪ್ರಸಿದ್ಧಿಪಡಿಸಿದರು. ಯೋಹಾನನು ಪರಿಚಾರಕನಾಗಿ ಅವರ ಸಂಗಡ ಇದ್ದನು.


ಇದಲ್ಲದೆ ದೇವಾರಾಧನೆ ಮಾಡಬೇಕೆಂದು ಜಾತ್ರೆಗೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.


ಅದಕ್ಕೆ ಯೆಹೂದ್ಯರು - ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿರುತ್ತಾನೆ? ಗ್ರೀಕರೊಳಗೆ ಚದರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಉಪದೇಶ ಮಾಡಬೇಕೆಂದಿರುತ್ತಾನೋ?


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡಲಿಲ್ಲ.


ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯಸೀಮೆಯಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಎಲ್ಲರೂ ಕರ್ತನ ವಾಕ್ಯವನ್ನು ಕೇಳಿದರು.


ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು. ಆ ಹೆಂಗಸು ಅನ್ಯಮತದವಳೂ ಸುರೋಪೊಯಿನಿಕ್ಯರವಳೂ ಆಗಿದ್ದಳು.


ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.


ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯದಿಂದಲೂ ಯೆಹೂದ್ಯರು ಬಂದು ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವದಕ್ಕೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಎಳೆದುಬಿಟ್ಟರು.


ಅವನ ವಿಷಯವಾಗಿ ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರು ಒಳ್ಳೇ ಸಾಕ್ಷಿಹೇಳುತ್ತಿದ್ದರು.


ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು