Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:15 - ಕನ್ನಡ ಸತ್ಯವೇದವು J.V. (BSI)

15 ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಜನರೇ, ನೀವು ಹೀಗೇಕೆ ಮಾಡುತ್ತೀರೀ? ನಾವೂ ಮನುಷ್ಯರೇ, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ಪ್ರಿಯ ಜನರೇ, ನೀವಿದನ್ನು ಏಕೆ ಮಾಡುತ್ತಿರುವಿರಿ? ನಾವೂ ನಿಮ್ಮ ಹಾಗೆಯೇ ಮಾನವರು. ಇಂಥಾ ವ್ಯರ್ಥವಾದ ಸಂಗತಿಗಳನ್ನು ಬಿಟ್ಟು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದ ಜೀವಿಸುವ ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನಿಮಗೆ ಸುವಾರ್ತೆಯನ್ನು ಸಾರುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲೊಕಾನು, ತುಮಿ ಹೆ ಸಗ್ಳೆ ಕಶ್ಯಾಕ್ ಕರುಲ್ಲ್ಯಾಸಿ? ಅಮಿ ದೆವಾ ನ್ಹಯ್, ಅಮಿಬಿ ತುಮ್ಚ್ಯಾ ಸಾರ್ಕಿ ಮಾನ್ಸಾ, ತುಮ್ಕಾ ದೆವಾಚಿ ಬರಿ ಖಬರ್ ಸಾಂಗುಚೆ ಮನುನ್ ಅಮಿ ಹಿತ್ತೆ ಹಾತ್, ಜಿವ್ ಸ್ವರುಪಾಚ್ಯಾ ದೆವಾಕ್ಡೆ ಪರ್ತುನ್ ಯೆವಾ,ಸಮುಂದರ್ ಮಳ್ಬ್, ಜಿಮಿನ್ ಅನಿ ತ್ಯಾತುರ್ ಹೊತ್ತೆ ಹರ್ ಎಕ್‍ಬಿ ರಚಲ್ಲೊ ತೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:15
67 ತಿಳಿವುಗಳ ಹೋಲಿಕೆ  

ಎಲೀಯನು ನಮ್ಮಂಥ ಸ್ವಭಾವವುಳ್ಳವನಾಗಿದ್ದನು; ಅವನು ಮಳೆಬರಬಾರದೆಂದು ಬಹಳವಾಗಿ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳವರೆಗೂ ಮಳೆಬೀಳಲಿಲ್ಲ.


ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವದರ ವಿಷಯದಲ್ಲಿ ನಾನು ಹೇಳುವದೇನಂದರೆ - ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ಬಲ್ಲೆವು.


ಆದರೆ ಪೇತ್ರನು - ಏಳಪ್ಪಾ, ನಾನೂ ಮನುಷ್ಯನು ಎಂದು ಹೇಳಿ


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ.


ಅವನು - ನೀವೆಲ್ಲರು ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ, ಆತನು ನ್ಯಾಯತೀರ್ಪುಮಾಡುವ ಗಳಿಗೆಯು ಬಂದಿದೆ. ಭೂಲೋಕ ಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನಿಗೆ ನಮಸ್ಕಾರ ಮಾಡಿರಿ ಎಂದು ಮಹಾಶಬ್ದದಿಂದ ಹೇಳಿದನು.


ಜನಾಂಗಗಳ ವ್ಯರ್ಥವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವಾ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು; ನೀನು ಇವುಗಳನ್ನೆಲ್ಲಾ ನಡಿಸುವವನಾಗಿದ್ದೀಯಷ್ಟೆ.


ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.


ನಾವು ನಿಮ್ಮಲ್ಲಿಗೆ ಬಂದಾಗ ನೀವು ಎಂಥ ಮನಸ್ಸಿನಿಂದ ನಮ್ಮ ಬೋಧನೆಯನ್ನು ಕೇಳಿದಿರೋ ಅದನ್ನು ಕುರಿತು ಅಲ್ಲಿಯ ಜನರು ತಾವೇ ಹೇಳುತ್ತಾರೆ. ಅದು ಮಾತ್ರವಲ್ಲದೆ ನೀವು ವಿಗ್ರಹಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂತಲೂ


ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರದೆಂದು ಕರ್ತನಲ್ಲಿರುವವನಾಗಿ ನಿಮಗೆ ಖಂಡಿತವಾಗಿ ಹೇಳುತ್ತೇನೆ.


ಸುಳ್ಳು ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ಕರುಣಾನಿಧಿಯನ್ನು ತೊರೆದುಬಿಡುವರು.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಅವರು ಕೇಳಿ ಏಕಮನಸ್ಸಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು - ಒಡೆಯನೇ, ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,


ನೀನು ಬರಬೇಕಾಗಿರುವ ಕ್ರಿಸ್ತನು, ಜೀವಸ್ವರೂಪನಾದ ದೇವರ ಕುಮಾರನು ಎಂದು ಉತ್ತರಕೊಟ್ಟನು.


ಎಲೈ, ಕರ್ತನಾದ ಯೆಹೋವನೇ! ಆಹಾ, ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಸುಳ್ಳುವಿಗ್ರಹಗಳನ್ನು ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು.


ಸಹೋದರರೇ, ನೋಡಿಕೊಳ್ಳಿರಿ, ಜೀವಸ್ವರೂಪನಾದ ದೇವರನ್ನು ಬಿಟ್ಟುಹೋಗುವ ಅಪನಂಬಿಕೆಯುಳ್ಳ ಕೆಟ್ಟ ಹೃದಯವು ನಿಮ್ಮೊಳಗೆ ಯಾವನಲ್ಲಿಯೂ ಇರಬಾರದು.


ಆದರೆ ಒಂದು ವೇಳೆ ನಾನು ತಡಮಾಡಿದರೂ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.


ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರಾಗಿ ಮಾಡಿದ ಮೇಲೆ ಹಿಂತಿರಿಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.


ಕಲ್ಪಿಸಿ ಹೇಳುವವನು ತನಗೆ ಮಾನ ಬರಬೇಕೆಂದು ಅಪೇಕ್ಷಿಸುತ್ತಾನೆ; ತನ್ನನ್ನು ಕಳುಹಿಸಿದವನಿಗೆ ಮಾನಬರಬೇಕೆಂದು ಅಪೇಕ್ಷಿಸುವವನು ಸತ್ಯವಂತನು, ಅಧರ್ಮವು ಅವನಲ್ಲಿ ಇಲ್ಲ.


ಇಸ್ರಾಯೇಲಿನ ವಿಷಯವಾಗಿ ಯೆಹೋವನು ನುಡಿದ ದೈವೋಕ್ತಿ. ಆಕಾಶಮಂಡಲವನ್ನು ಹರವಿ ಭೂಲೋಕಕ್ಕೆ ಅಸ್ತಿವಾರವನ್ನು ಹಾಕಿ ಮನುಷ್ಯನೊಳಗೆ ಜೀವಾತ್ಮವನ್ನು ಸೃಷ್ಟಿಸುವ ಯೆಹೋವನು ಇಂತೆನ್ನುತ್ತಾನೆ -


ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ಆಹಾ, ನನ್ನ ಪ್ರಜೆಯೆಂಬಾಕೆಯು - ಯೆಹೋವನು ಚೀಯೋನಿನಲ್ಲಿಲ್ಲವೋ, ಅದರ ರಾಜನು ಅಲ್ಲಿ ವಾಸವಾಗಿಲ್ಲವೋ ಎಂದು ಮೊರೆಯಿಡುವ ಶಬ್ದವು ದೂರದೇಶದಿಂದ ಕೇಳಿಸುತ್ತದೆ. [ಅದಕ್ಕೆ ಯೆಹೋವನು - ] ಇವರು ತಮ್ಮ ವಿಗ್ರಹಗಳಿಂದಲೂ ಅನ್ಯದೇವತೆಗಳ ಶೂನ್ಯರೂಪಗಳಿಂದಲೂ ಏಕೆ ನನ್ನನ್ನು ಕೆಣಕಿದ್ದಾರೆ [ಅನ್ನುತ್ತಾನೆ].


ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರಗದು, ಒಬ್ಬನು ಕೂಗಿಕೊಂಡರೂ ಉತ್ತರಕೊಟ್ಟು ಕಷ್ಟದಿಂದ ಅವನನ್ನು ಬಿಡಿಸಲಾರದು.


ತಪ್ಪಿಸಿಕೊಂಡ ಅನ್ಯಜನರೇ, ನೆರೆದು ಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ಬೊಂಬೆಯನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನಯಿಸುವವರು ಏನೂ ತಿಳಿಯದವರಾಗಿದ್ದಾರೆ.


ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ; ಆತನೇ ದೇವರು, ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು; ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗನ್ನುತ್ತಾನೆ - ನಾನೇ ಯೆಹೋವನು, ಇನ್ನು ಯಾವನೂ ಅಲ್ಲ.


ಭೂಮ್ಯಾಕಾಶಗಳನ್ನು ಉಂಟುಮಾಡಿದ ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವದು.


ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.


ಬೆಂಕಿಯ ಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಬೇರೆ ಯಾರು ಕೇಳಿ ಬದುಕಿದರು? ಹೀಗಿರುವದರಿಂದ ನಾವು ಯಾಕೆ ಸಾಯಬೇಕು?


ಅವನು ನನಗೆ - ಮಾಡಬೇಡ ನೋಡು; ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವವರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಎಂದು ಹೇಳಿದನು.


ತರುವಾಯ ಆ ಮೊದಲನೆಯ ಮೃಗವೂ ಭೂರಾಜರೂ ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕೂತಿದ್ದವನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧಮಾಡುವದಕ್ಕಾಗಿ ಕೂಡಿ ಬಂದಿರುವದನ್ನು ಕಂಡೆನು.


ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ಆದದರಿಂದ ಜನರೇ ಧೈರ್ಯವಾಗಿರ್ರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ದೇವರನ್ನು ನಂಬುತ್ತೇನೆ.


ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು - ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.


ಪೌಲನು - ಜನರೇ, ಈ ಪ್ರಯಾಣದಿಂದ ಸರಕಿಗೂ ಹಡಗಿಗೂ ಮಾತ್ರವಲ್ಲದೆ ನಮ್ಮ ಪ್ರಾಣಗಳಿಗೂ ಕಷ್ಟವೂ ಬಹು ನಷ್ಟವೂ ಸಂಭವಿಸುವದೆಂದು ನನಗೆ ತೋರುತ್ತದೆ ಎಂದು ಅವರನ್ನು ಎಚ್ಚರಿಸಿದನು.


ಮತ್ತು ಅವರನ್ನು ಹೊರಗೆ ಕರಕೊಂಡು ಬಂದು - ಸ್ವಾವಿುಗಳೇ, ನಾನು ರಕ್ಷಣೆಹೊಂದುವದಕ್ಕೆ ಏನು ಮಾಡಬೇಕೆಂದು ಕೇಳಲು


ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಎಬ್ಬಿಸಿದ್ದರಲ್ಲಿ - ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.


ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಎದುರಾಗಿ ಬಂದು - ಜನರೇ, ನೀವು ಸಹೋದರರಲ್ಲವೇ? ನೀವೇಕೆ ಒಬ್ಬರಿಗೊಬ್ಬರು ಅನ್ಯಾಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನಪಡಿಸಬೇಕೆಂದಿದ್ದನು.


ತಂದೆಯು ತಾನು ಹೇಗೆ ಸ್ವತಃಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃಜೀವವುಳ್ಳವನಾಗಿರುವಂತೆ ಮಾಡಿದನು.


ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;


ನಾನಾಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯ ಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳಿಕೆಯು ಶಾಶ್ವತವಾಗಿರುವದು;


ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ.


ಜೀವಸ್ವರೂಪನಾದ ದೇವರನ್ನು ದೂಷಿಸುವದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿನ್ನ ದೇವರಾದ ಯೆಹೋವನು ಕೇಳಿರುವನು; ನಿನ್ನ ದೇವರಾದ ಯೆಹೋವನು ತಾನು ಹೇಳಿದ ವಾಕ್ಯಗಳ ನಿವಿುತ್ತ ಮುಯ್ಯಿತೀರಿಸಾನು. ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿರಿ ಎಂಬದೇ.


ಇಸ್ರಾಯೇಲ್ಯರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನನ್ನು ರೇಗಿಸುವಂತೆ ಅವರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಇವನೂ ನಡೆದನು.


ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ದಾವೀದನು - ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಸಿಕ್ಕುವದೇನೆಂದು ಹೇಳಿದಿರಿ ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಲು


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿರುತ್ತಾನೆಂಬದೂ ಆತನು ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು ಇವರನ್ನೆಲ್ಲಾ ನಿಮ್ಮ ಮುಂದೆ ತಪ್ಪದೆ ಹೊರಡಿಸುವನೆಂಬದೂ


ಯೋಸೇಫನು - ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನು ಕೊಡಬಲ್ಲನೆಂದು ಹೇಳಿದನು.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.


ಆತನು ತನ್ನ ಶಕ್ತಿಯಿಂದ ಭೂವಿುಯನ್ನು ನಿರ್ಮಿಸಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ;


ಕರ್ತನೇ, ನಮ್ಮ ದೇವರೇ, ನೀನು ಪ್ರಭಾವ ಮಾನ ಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಸಮಸ್ತವನ್ನು ಸೃಷ್ಟಿಸಿದಾತನು ನೀನೇ; ಎಲ್ಲವು ನಿನ್ನ ಚಿತ್ತದಿಂದಲೇ ಇದ್ದವು, ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು