Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:21 - ಕನ್ನಡ ಸತ್ಯವೇದವು J.V. (BSI)

21 ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರಾಗಿ ಮಾಡಿದ ಮೇಲೆ ಹಿಂತಿರಿಗಿ ಲುಸ್ತ್ರಕ್ಕೂ ಇಕೋನ್ಯಕ್ಕೂ ಅಂತಿಯೋಕ್ಯಕ್ಕೂ ಬಂದು ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮರುದಿನ ಪೌಲನು, ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು. ಆ ಊರಿನಲ್ಲಿ ಅವರು ಸುವಾರ್ತೆಯನ್ನು ಸಾರಿ ಅನೇಕರನ್ನು ಶಿಷ್ಯರನ್ನಾಗಿ ಮಾಡಿದ ಮೇಲೆ ಹಿಂತಿರುಗಿ ಲುಸ್ತ್ರಕ್ಕೂ, ಇಕೋನ್ಯಕ್ಕೂ, ಅಂತಿಯೋಕ್ಯಕ್ಕೂ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆ ಪಟ್ಟಣದಲ್ಲಿ ಪೌಲ, ಬಾರ್ನಬರು ಸುವಾರ್ತೆಯನ್ನು ಸಾರಿದರು. ಬಹುಜನರನ್ನು ಶಿಷ್ಯರನ್ನಾಗಿ ಮಾಡಿದರು. ಅನಂತರ ಅವರು ಲುಸ್ತ್ರ, ಇಕೋನ್ಯ ಮತ್ತು ಅಂತಿಯೋಕ್ಯಗಳಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಪಾವ್ಲು ಅನಿ ಬಾರ್ನಾಬಾಸ್ ದರ್ಬೆ ಶಾರಾತ್‍ಬಿ ದೆವಾಚಿ ಬರಿ ಖಬರ್ ಸಾಂಗ್ಲ್ಯಾನಿ, ಲೈ ಲೊಕಾ ಜೆಜುಚಿ ಶಿಸಾಹೊಲಿ ತೆನಿ ದೊಗಾ ಲಿಸ್ತ್ರಾ, ಇಕೊನಿಯಾ ಅನಿ ಅಂತಿಯೊಕ್ಯ್ ಮನ್ತಲ್ಯಾ ಶಾರಾಕ್ನಿ ಪರ್ತುನ್ ಗೆಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:21
14 ತಿಳಿವುಗಳ ಹೋಲಿಕೆ  

ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯದಿಂದಲೂ ಯೆಹೂದ್ಯರು ಬಂದು ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವದಕ್ಕೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಎಳೆದುಬಿಟ್ಟರು.


ಇಕೋನ್ಯದಲ್ಲಿ ಪೌಲ ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಬಲವಾಗಿ ಮಾತಾಡಿದ್ದರಿಂದ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ಬಹುಮಂದಿ ನಂಬುವವರಾದರು.


ಇವರು ತಮ್ಮ ಕಾಲಿಗೆ ಹತ್ತಿದ್ದ ದೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.


ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.


ಅಪೊಸ್ತಲರು ಅದನ್ನು ತಿಳಿದು ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ


ಆಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಅವನ ವಿಷಯವಾಗಿ ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರು ಒಳ್ಳೇ ಸಾಕ್ಷಿಹೇಳುತ್ತಿದ್ದರು.


ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ - ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.


ಲುಸ್ತ್ರದೊಳಗೆ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕೂತಿದ್ದನು. ಅವನು ಹುಟ್ಟುಕುಂಟನಾಗಿದ್ದು ಎಂದಿಗೂ ನಡೆಯದೆ ಇದ್ದವನು.


ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.


ಅವುಗಳಿಗೆ ಸೇರಿರುವ ಸೀಮೆಗೂ ಹೋಗಿ ಅಲ್ಲಿ ಸುವಾರ್ತೆಯನ್ನು ಸಾರಿದರು.


ಜನರೇ, ನೀವು ಮಾಡುವದು ಇದೇನು? ನಾವೂ ಮನುಷ್ಯರು, ನಿಮ್ಮಂಥ ಸ್ವಭಾವವುಳ್ಳವರು. ನೀವು ಈ ವ್ಯರ್ಥವಾದ ಕೆಲಸಗಳನ್ನು ಬಿಟ್ಟುಬಿಟ್ಟು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿದ ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ಸುವಾರ್ತೆಯನ್ನು ನಿಮಗೆ ಸಾರಿಹೇಳುವವರಾಗಿದ್ದೇವೆ.


ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪಾಶ್ರಯಕ್ಕೆ ಒಪ್ಪಿಸಲ್ಪಟ್ಟವರಾಗಿ ಆ ಊರಿಂದಲೇ ಹೊರಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು